ರಾಜ್ಯದಲ್ಲಿ ಶನಿವಾರದಿಂದ ಮುಂಗಾರು (monsoon) ಚುರುಕು ಪಡೆದುಕೊಳ್ಳಲಿದೆ. ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿರುವುದರಿಂದ ಈ ಭಾಗದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ 13 ಮತ್ತು 14 ರಂದು ಯೆಲ್ಲೋ ಅಲರ್ಟ್ 15 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.  ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಜೂನ್ 14 ರಿಂದ ಭಾರಿ ಮಳೆಯಾಗಲಿರುವುದರಿಂದ ಅಲ್ಲಿ ಯೆಲ್ಲಾ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮಂಗಳೂರು, ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧೆಡೆ ಮೋಡ ಕವಿದ ವಾತಾವರಣವಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಜೂನ್ 12 ರಿಂದ ಒಂದು ವಾರಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿರುವುದರಿಂದ ಮಂದಿನ ವಾರಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಣ್ಣೆತೋರಾ ಜಲಾಶಯದಿಂದ ನದಿಗೆ ನೀರು ಬಿಡುವ ಸಂಭವ:ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಬೆಣ್ಣೆತೋರಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರಬಾಗಿ ಒಳಹರಿವು ಬರುತ್ತಿದೆ. ಅಲ್ಲದೇ ಮೇಲ್ಭಾಗದ ಜಲಾಯಶದಿಂದ ನೀರು ಬಿಡುವ ಸಂಭವವಿರುವುದರಿಂದ ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ-4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *