Mungaru male: ರಾಜ್ಯದಲ್ಲಿ ಮುಂಗಾರು ಪ್ರವೇಶಿಸುವ ಮುನ್ಸೂಚನೆ ಸಿಕ್ಕಿದ್ದ ಬೆನ್ನಲ್ಲೆ ಜೂನ್ ಎರಡರಿಂದ ಮಳೆ ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮೈಸೂರಿನಲ್ಲಿ ಜೂನ್ 2 ರಿಂದ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ.
ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಜೂನ್ 2 ರಂದು ಹಾಗೂ ಜೂನ್ 3 ರಂದು ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವದರಿಂದ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Mungaru male ಜೂನ್ 2 ರಿಂದ 9 ಜಿಲ್ಲೆಗೆ ಯೆಲ್ಲೋ ಅಲರ್ಟ್
ಜೂನ್ 2 ರಿಂದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಆರಂಭಗೊಳ್ಳಲಿದೆ. ಅಲ್ಲಿಂದ ಒಂದು ವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಜೂನ್ 2 ಮತ್ತು 3 ಕ್ಕೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಲೂರು ನಗರ, ಕೊಡಗು ಸೇರಿ 9 ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದ್ದು ಜೂನ್ 2 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
5 ರಿಂದ 10 ದಿನಗಳಲ್ಲಿದೇಶದ ಎಲ್ಲಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ
ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಭಾರತದ ನೈಋತ್ಯ ಭಾಗದಲ್ಲಿ ಕೇರಳವನ್ನು ಈಗಾಗಲೇ ಪ್ರವೇಶಿಸಿದ್ದು, ಹಾಗಾಗಿ ಮುಂದಿನ ಐದಾರು ದಿನಗಳಲ್ಲಿ ದೇಶಾದ್ಯಂತ ವ್ಯಾಪಿಸುವ ನಿರೀಕ್ಷೆಯಿದೆ.
ಮುಂಗಾರು ಕೇರಳ ಭಾಗದಲ್ಲಿ ಸಾಮಾನ್ಯವಾಗಿ ಜೂನ್ 1 ರಂದು ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ಒಂದು ದಿನ ಮೊದಲೇ ಪ್ರವೇಶ ಮಾಡಿದೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ
ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಪ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತೀ ಮಹತ್ವದ್ದು. ಎಂದೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್ ನಲ್ಲಿ ಆರಂಭವಾಗಿ ಸೆಪ್ಟೆಂಬರ್ ಗೆ ಕೊನೆಗೊಳ್ಳುತ್ತದೆ.
ಮಾನ್ಸೂನ್ ದುರ್ಬಲಗೊಂಡೀತೇ?
ವಾಡಿಕೆಗಿಂತ ಮೊದಲೇ ಕೇರಳ ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್ ಶುಕ್ರವಾರ ತುಸು ದುರ್ಬಲಗೊಂಡಿದೆ. ಮಾರುತಗಳು ಪ್ರಬಲವಾಗಿದ್ದರೆ ಕೇರಳಕ್ಕೆ ಪ್ರವೇಶಿಸಿದ್ದ ದಿನವೇ ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಬೇಕಿತ್ತು. ಆದರೆ, ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಒಂದೆರಡು ದಿನದಲ್ಲಿ ರಾಜ್ಯ ಪ್ರವೇಶಿಸಲಿದ್ದು, ಜೂನ್ 8 ರ ವೇಳೆಗೆ ರಾಜ್ಯಾದ್ಯಂತ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಇಲ್ಲಿ ಕರೆ ಮಾಡಿ ತಿಳಿದುಕೊಳ್ಳಿ
ನಿಮ್ಮೂರಿನಲ್ಲಿ ಹಾಗೂ ನಿಮ್ಮರಿನ ಸುತ್ತಮುತ್ತಲಿರುವ ಊರುಗಳಲ್ಲಿಮಳೆ ಯಾವಾಗ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, 9243345433 ಗೆ ಕರೆ ಮಾಡಿದರೆ ಸಾಕು, ನಿಮಗೆ ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಸಿಗುತ್ತದೆ.