ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರೈತರಿಗೆ ಸಿಗಲಿದೆ 12 ಲಕ್ಷ ಸಬ್ಸಿಡಿ

Written by Ramlinganna

Published on:

Namma Hola Namma dari  : ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರೈತರ ಜಮೀನಿಗೆ ರಸ್ತೆ ನಿರ್ಮಿಸಲು ಸರ್ಕಾರದ ವತಿಯಿಂದ 12.5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.

ಹೌದು, ಕರ್ನಾಟಕ ಸರ್ಕಾರವು ನಮ್ಮ ಹೊಲ ನಮ್ಮ ದಾರಿ ಎಂಬ ಮಹತ್ವದ ಯೋಜನೆಯನ್ನು ರೈತರಿಗಾಗಿ ಜಾರಿಗೆ ತಂದಿದೆ. ರೈತರು ತಮ್ಮ ಜಮೀನುಗಳಿಂದ ದವಸಧಾನ್ಯ ಸಾಗಿಸಲು ಕೃಷಿ ಉಪಕರಣಗಳನ್ನು ಸಾಗಿಸಲು ಸಮಸ್ಯೆಯಾಗುತ್ತಿತ್ತು. ರೈತರ ಸಮಸ್ಯೆಗಳನ್ನು ಗಮನಿಸಿದ ರಾಜ್ಯ ಸರ್ಕಾರವು ನಮ್ಮ ಹೊಲ ನಮ್ಮ ದಾರಿ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚವೂ ಕಡಿಮೆಯಾಗಲಿದೆ. ಇಷ್ಟೇ ಅಲ್ಲ ಈ ಯೋಜನೆಯಡಿಯಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಲಭಿಸಲಿದೆ. ಆದರೆ ಈ ಯೋಜನೆಯಡಿಯಲ್ಲಿ ರೈತರು 12.5 ಲಕ್ಷ ರೂಪಾಯಿ ಸಬ್ಸಿಡಿ ಪಡೆಯುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ತಮಗೆಲ್ಲಾ ಗೊತ್ತಿದ್ದ ಹಾಗೆ ಬಹುತೇಕ ರೈತರು ತಮ್ಮ ಸ್ವಂತ ಜಮೀನಿಗೆ ಹೋಗಲು ಪರದಾಡುತ್ತಿರುತ್ತಾರೆ. ತಮ್ಮ ಸ್ವಂತ ಜಮೀನಿಗೆ ಹೋಗಲು ಅವರಿಗೆ ದಾರಿ ಇರುವುದಿಲ್ಲ. ಗ್ರಾಮೀಣ ಪ್ರದೇಶದ ರೈತರು ತಮ್ಮ ಜಮೀನುಗಳಿಗ ನೇರವಾಗಿ ಹೋಗಲು ಈ ಯೋಜನೆ ಸಹಾಯವಾಗಲಿದೆ.

ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ ನಂತೆ ಒಟ್ಟಾರೆ 5770 ಕಿ.ಮೀ ರಸ್ತೆಯನ್ನು ನಿರ್ಮಿಸಲು ಪ್ರತಿ ಕಿ.ಮೀ ಗೆ 12.50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಬ್ಸಿಡಿ ನೀಡಲಾಗುವುದು. ಈ ಯೋಜನೆಗೆ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054 ರ ಅನುದಾನಗಳನ್ನು ಒಗ್ಗೂಡಿಸಿ ಬಳಸಲಾಗುತ್ತಿದೆ. ಇದರೊಂದಿಗೆ ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವಿಕೆ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

Namma Hola Namma dari ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಸೌಲಭ್ಯ ಪಡೆಯುವುದು ಹೇಗೆ?

ನಿಮ್ಮ ಊರಿನ ಅಂದರೆ ನಿಮ್ಮ ಜಮೀನಿನ ಅಕ್ಕಪಕ್ಕದ ರೈತರು ಒಟ್ಟಾಗಿ ಸೇರಿ ರಸ್ತೆ ನಿರ್ಮಾಣದ ಅಗತ್ಯತೆಯನ್ನು ವಿವರಿಸಲು ಒಂದು ಲಿಖಿತ ಮನವಿಯನ್ನು ಗ್ರಾಮ ಪಂಚಾಯತಿ ಪಿಡಿಓಗಳಿಗೆ ಸಲ್ಲಿಸಬೇಕು.

ಇದನ್ನೂ ಓದಿ ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ

ರಸ್ತೆ ಕಾಮಗಾರಿಯು ಗ್ರಾಮ ಸಭೆಯ ಅನುಮೋದನೆಯ ಮೂಲಕ ಆರಂಭವಾಗುವುದರಿಂದ ಗ್ರಾಮ ಸಂಭೆ ನಡೆದಾಗ ತಪ್ಪದೆ ಎಲ್ಲಾ ರೈತರು ಹಾಜರಾಗಬೇಕು ನಂತರ ರಸ್ತೆ ಕಾಮಗಾರಿಯನ್ನು ಅನುಮೋದನೆ ಪಡೆದುಕೊಳ್ಳಬೇಕು.

ಒಂದು ಕಿ.ಮೀ ರಸ್ತೆ ನಿರ್ಮಾಣಕ್ಕೆ 12.50 ಲಕ್ಷ ರೂಪಾಯಿ ಸಬ್ಸಿಡಿ

ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಪ್ರತಿ ಕಿ.ಮೀ. ರಸ್ತೆ ನಿರ್ಮಾಣಕ್ಕೆ ನಿಗದಿಪಡಿಸಿದ ಒಟ್ಟು 12.50 ಲಕ್ಷ ರೂಪಾಯಿ ವೆಚ್ಚವನ್ನು ಎರಡು ಅನುದಾನಗಳಡಿ ಹಂಚಿಕೆ ಮಾಡಲಾಗುತ್ತದೆ. ಅದರಲ್ಲಿ 9 ಲಕ್ಷ ರೂಪಾಯಿಯನ್ನು ಎಂಜಿನರೇಗಾ ಯೋಜನೆಯಡಿಯಲ್ಲಿ ಬಳಸಲಾಗುತ್ತದೆ. ಇನ್ನುಳಿದ 3.60 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರದ ಲೆಕ್ಕ ಶೀರ್ಶಿಕೆ 3054 ರಡಿ ಮೀಸಲಿಡಲಾಗಿದ್ದು, ಇದು ರಸ್ತೆ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸುವ ಅಗತ್ಯವಿದ್ದಲ್ಲಿ ಆ ವೆಚ್ಚವನ್ನು ನಿರ್ವಸಿಲು ಅನುವು ಮಾಡಿಕೊಡುತ್ತದೆ.

ನಿಮ್ಮ ಹೊಲಕ್ಕೆ ಹೋಗಲು ಬಂಡಿದಾರಿ ಇದೆಯೋ ಇಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿಗೆ ಹೋಗಲು ಬಂಡಿದಾರಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://www.landrecords.karnataka.gov.in/service3/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕಂದಾಯ ಇಲಾಖೆಯ (Revenue Maps Online) ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲೂಕು, ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಕಾಣುವ ಊರಿನ ಮಂದೆ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನ ಮ್ಯಾಪ್ ಓಪನ್ ಆಗುತ್ತದೆ. (ಒಂದು ವೇಳೆ ಓಪನ್ ಆಗದಿದ್ದರೆ Maps Types ನಲ್ಲಿ Cadastral Maps) ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಜಮೀನಿಗೆ ಹೋಗಲು ಬಂಡಿದಾರಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Leave a Comment