ತೋಟಗಾರಿಕೆ ಬೆಳೆಗಾರರಿಗೆ ಹಾಗೂ ರೈತ ಉತ್ಪಾದಕ ಸಂಘದ ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯ ನೀಡಲಾಗುವುದು.
ಹೌದು, ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ನೀರಾವರಿ ಹೊಂದಿರುವ ಹಾಗೂ ತೋಟಗಾರಿಕೆ ಮಾಡಲಿಚ್ಚಿಸುವ ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಸಹಾಯಧನ ಹಾಗೂ ಸೌಲಭ್ಯಗಳನ್ನು ನೀಡಲಾಗುವುದು.
ಮಳೆ ನೀರು ಸಂರಕ್ಷಿಸಿ ಅದರ ಮೂಲಕ ತೋಟಗಾರಿಕೆ ಬೆಳೆಗೆ ಪ್ರೋತ್ಸಾಹಿಸಲು ಸರ್ಕಾರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಜಾರಿಗೊಳಿಸಿದೆ. ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ.ಈಗಾಗಲೇ ಈ ಯೋಜನೆಯಡಿ ಹಲವಾರು ರೈತರು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.
ಯಾವ ಯಾವ ಘಟಕಗಳ ನಿರ್ಮಾಣಸಕ್ಕೆ ಸಿಗಲಿದೆ ಸಬ್ಸಿಡಿ?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹಣ್ಣಿನ ಬೆಳೆಗಳಾದ ಬಾಳೆ, ದ್ರಾಕ್ಷಿ, ಮಾವು, ದಾಳಿಂಬೆ, ಡ್ರ್ಯಾಗನ್ ಫ್ರೂಟ್ಸ್ ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆ, ಪಾಲಿಹೌಸ್, ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕ, ಅರಿಷಿಣ ಸಂಸ್ಕರಣಾ ಘಟಕ, ಕೃಷಿಹೊಂಡ , ಹೂವಿನ ಪ್ರದೇಶ ವಿಸ್ತರಣೆ, ಹಣ್ಣು ಮಾಗಿಸುವ ಘಟಕ, ಜೇನು ಕೃಷಿ, ಹಸಿರು ಮನೆ ಘಟಕ, 20 ಎಚ್.ಪಿ ಅಶ್ವಶಕ್ತಿ ಟ್ರ್ಯಾಕ್ಟರ್ ಖರೀದಿಗಾಗಿ ಸಹಾಯಧನ ನೀಡಲಾಗುವುದು.
ಹೂವು, ಹಣ್ಣುಗಳ ಘಟಕ ನಿರ್ಮಾಣಕ್ಕೂ ಸಿಗಲಿದೆ ಸಬ್ಸಿಡಿ?
ಸಣ್ಣ ನರ್ಸರಿ ಸ್ಥಾಪನೆ, ಮಾವು, ಬಾಳೆ, ಗುಲಾಬರಿ, ಸುಗಂಧರಾಜ, ಚೆಂಡು ಹೂವು, ಸೇವಂತಿಗೆ, ತರಕಾರಿಗಳ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ (ಹಸಿರುಮನೆ, ನೆರಳು ಪರದೆ, ಪ್ಲಾಸ್ಟಿಕ್ ಮಂಚಿಂಗ್), ಕೊಯ್ಲೋತ್ತರ ನಿರ್ವಹಣೆ ಅಡಿ ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕ ಹಾಗೂ ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುಗಾಡಿ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲಾಗುವುದು.
ರೈತರಿಗೆ ಎಷ್ಟು ಸಬ್ಸಿಡಿ ಸಿಗುತ್ತದೆ?
ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ. 40 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಸಬ್ಸಿಡಿ ಪಡೆಯಲು ಯಾವ ಯಾವ ದಾಖಲೆ ಬೇಕು?
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ರೈತರು ಸ್ವಂತ ಜಮೀನು ಹಾಗೂ ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿ ಬರೆದು ಅದರಲ್ಲಿ ಮೊಬೈಲ್ ನಂಬರ್ ನಮೂದಿಸಬೇಕು. ಜಮೀನಿನ ಪಹಣಿ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹಾಗೂ ಪಾಸ್ಪೋರ್ಟ್ ಸೈಜಿನ ಫೊಟೊ ಹೊಂದಿರಬೇಕು. ಮೇಲಿನ ಎಲ್ಲಾ ದಾಖಲೆಗಳೊಂದಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಸಲ್ಲಿಸಬೇಕು.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಸರ್ವೆನಂಬರ್, ಊರಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಹಾಗೂ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು.
ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಆಯಾ ತಾಲೂಕಿನ ಹೋಬಳಿ ಕೇಂದ್ರಗಳಿಗೆ ಸಂಬಂಧಿಸಿದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಬಹುದು.
ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತೋಟಗಾರಿಕೆ ಇಲಾಖೆಯು 2021-22ನೇ ಸಾಲಿನಲ್ಲಿ ರಾಷ್ಟ್ರೀಟ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಡ್ರ್ಯಾಗನ್ ಫ್ರೂಟ್, ಸೀಬೆ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಪಡೆದು ಭರ್ತಿಮಾಡಿ ಜನವರಿ 14 ರೊಳಗೆ ಸಲ್ಲಿಸಲು ಕರೋಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು 08187 223544 ಗೆ ಸಂಪರ್ಕಿಸಲು ಕೋರಲಾಗಿದೆ.