ದೈನಂದಿನ ಕೃಷಿ ಚಟುವಟಿಕೆಗಳಿಗೆ ಮತ್ತು ಕೃಷಿ ಇಲಾಖೆಗೆ (no restrictions on farming activities in karnataka)

ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚಿಸಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಮಾತನಾಡಿದ ಅವರು, ಹೂವು, ಹಣ್ಮು, ದವಸಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್.ಟಿ.ಓ ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲಿ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ಮುಂಗಾರು ಬಿತ್ತನೆ ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಾಗಲಿ, ರೈತಸಂಪರ್ಕ ಕೇಂದ್ರಗಳಾಗಲಿ, ಬಿತ್ತನೆ ಕಾರ್ಯಕ್ಕಾಗಲಿ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು ಎಂದಿದ್ದಾರೆ.

ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಅಧಿಕಾರಿಗಳು ಈ ರೀತಿ ಮಾಡಿರುವುದು ತಪ್ಪು. ಎಲ್ಲಾ ಇಲಾಖೆಯ ಅಧಿಕಾರಿಗಳು ರೈತರಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರಾನಾ ಸುರಕ್ಷತಾ ಕ್ರಮಗಳೊಂದಿಗೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *