ಕೆಲವೇ ಗಂಟೆಗಳಲ್ಲಿ ಭಾರಿ ಮಳೆ- ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

Written by Ramlinganna

Published on:

now rain alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಇಂದು ರಾಜ್ಯದ 28 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ30 ರಿಂದ 40 ಕಿ. ಮೀ ವೇಗದಲ್ಲಿ ಗಾಳಿಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

now rain alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಇದನ್ನೂ ಓದಿ ನಿಮ್ಮ ಪಹಣಿಯಲ್ಲಿ ಯಾರ್ಯಾರ ಹೆಸರಿದೆ? ಇಲ್ಲೇ ಚೆಕ್ ಮಾಡಿ

 

Leave a Comment