ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟ್ ಗಳ ನೇರ ಸೇಮಕಾತಿಯನ್ನು ಜೂನ್ 19 ರಂದು ಬೆಳಗ್ಗೆ 11 ಗಂಟೆಗೆ ಶಿರಸಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ರಿಂದ 50 ವರ್ಷದೊಳಗಿರಿಬೇಕು. ಫೀಲ್ಡ್ ಆಫೀಸರ್ಗಳಿಗೆ ಗರಿಷ್ಠ 65 ವರ್ಷದೊಳಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು, ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತರು, ಮಾಜಿ ಸೈನಿಕರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿವೃತ್ತ ನೌಕರರು, ನಿವೃತ್ತ ಪ್ರಧಾನ ಮತ್ತು ಗ್ರಾಪಂ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು 5000 ರೂಪಾಯಿಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದುನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮೆ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 6362609961 ಗೆ ಸಂಪರ್ಕಿಸಬಹುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17 ರಂದು ಬೃಹತ್ ಉದ್ಯೋಗ ಮೇಳ
ಮೈಸೂರ್ ಕಾಲೇಜ್ ಆಫ್ ಇಂಜನಿಯರಿಂಗ್ ಆ್ಯಂಡ್ ಮ್ಯಾನೇಜ್ ಮೆಂಟ್ ಮತ್ತು ಮೈಸೂರಿನ ಮಾನವ ಸಂಪನ್ಮೂಲ ಸಂಸ್ಥೆ ಲೀಡ್ ಟ್ರೈನಿಂಗ್ ಆ್ಯಂಡ್ ಕಾರ್ಪೇರೇಟ್ ಸಾಲ್ಯುಯೇಶನ್ ಸಹಯೋಗದಲ್ಲಿ ಜೂನ್ 17 ರಂದು ಬೃಹತ್ ಚಾಮರಾಜನಗರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಡಾ. ಎಂ.ಎಸ್. ಪ್ರಭುಸ್ವಾಮಿ ತಿಳಿಸಿದ್ದಾರೆ.
ಅವರು ನಗರದ ಜಿಲ್ಲಾ ಕಾರ್ಯನಿರ್ಹತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತಮ ಸಂಸ್ಥೆಗಳು ಹಾಗೂ ಸೂಕ್ತ ಅಭ್ಯರ್ಥಿಗಳ ನಡುವೆ ಸೇತುವೆ ನಿರ್ಮಿಸುವ ಉದ್ದೇಶದೊಂದಿಗೆ ಈ ಉದ್ಯೋಗ ಮೇಳವನ್ನು ನರಸೀಪುರ ರಸ್ತೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಜೂನ್ 17 ರಂದು ಬೆಳಗ್ಗೆ 9.30 ರಿಂದ ಸಾಯಂಕಾಲ 4 ಗಂಟೆಗೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಮಣಿಪಾಲ್ ಆಸ್ಪತ್ರೆ ಸೇರಿದಂತೆ 30 ರಿಂದ 40 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. 600 ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿವೆ.
ಇದನ್ನು ಓದಿ : ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ : ಲಿಸ್ಚ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ
ಎಸ್.ಎಸ್.ಎಲ್.ಸಿ, ಪಿಯುಸಿ, ಬಿಕಾಂ, ಬಿಬಿಎಂ, ಬಿ.ಎ, ಐಟಿಐ ಡಿಪ್ಲೋಮಾ ಇತರೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವವರು ಈ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9108012039 ಅನ್ನು ಸಂಪರ್ಕಿಬಹುದು. ಉದ್ಯೋಗಾಕಾಂಕ್ಷಿಗಳು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ವಿವಿಧ ಹುದ್ದೆಗಳ ಆಯ್ಕೆಗೆ ನೇರ ಸಂದರ್ಶನ
ಜಿಲ್ಲೆಗೆ ಕೇಂದ್ರ ಸರ್ಕಾರದ 15ನೇ ಹಣಕಾಸು ಯೋಜನೆಯಡಿ ನಮ್ಮ ಕ್ಲಿನಿಕ್ ಗೆ ಅನುಮೋದನೆಯಾಗಿರುವ ಒಂದು ವರ್ಷದ ಅವಧಿಗೆ ಎಂಬಿಬಿಎಸ್ ವೈದ್ಯರು ಹುದ್ದೆಗೆ, ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗೆ, ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಆಹ್ವಾನಿಸಲಾಗಿದೆ.
ಜೂನ್ 13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ 1 ಸೆಟ್ ಝಾರಾಕ್ಸ್ ಪ್ರತಿಗಳೊಂದಿಗೆ ಕೋಲಾರದ ಹೊರವಲಯದ ಸ್ಯಾನಿ ಟೋರಿಯಂನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಹಾಜರಾಗಬಹುದು ಎಂದು ಕೋಲಾರ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.