ಆಗಸ್ಟ್ 17 ರಂದು ಉದ್ಯೋಗ ಮೇಳ: ಮೊಬೈಲ್ ನಲ್ಲೇ ಹೆಸರು ನೋಂದಾಯಿಸಿ

Written by Ramlinganna

Updated on:

ಆಗಸ್ಟ್ 17 ರಂದು ಕಲಬುರಗಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹೌದು,

ಹುಬ್ಬಳ್ಳಿ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಆಗಸ್ಟ್ 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗ ಮಿನಿ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ  ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ  ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ

 https://surveyheart.com/form/64d0fdb47934e6657dbff382

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕಾಣುವ ಸ್ಟಾರ್ಟ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮಆಧಾರ್ ಕಾರ್ಡ್, ಬಯೋಡಾಟಾಗಳ ಹೆಚ್ಚಿನ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕುವೆಂಪು ರಸ್ತೆ, ನವನಗರ, ಹುಬ್ಬಳ್ಳಿ ಇಲ್ಲಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ 0836 2225288, ಮೊ. 9480869880, 8453208555 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ Annabhagya ದ ಹಣ ಈ ತಿಂಗಳ ಈ ಲಿಸ್ಟ್ ನಲ್ಲಿರುವವರಿಗೆ ಜಮೆ: ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯಕಚೇರಿ ಹಾಗೂ ಕೊಹಿನೂರ ಡಿಗ್ರಿ ಕಾಲೇಜು ಸಹಯೋಗದೊಂದಿಗೆ ಇದೇ ಆಗಸ್ಟ್ 17 ರಂದು ಬೆಳಗ್ಗೆ10.30 ಗಂಟೆಯಿಂದ 2 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ನಗರದ ರಾಮಮಂದಿರ ಹೈಕೋರ್ಟ್ ರಸ್ತೆ ಕೊಹಿನೂರ ಡಿಗ್ರಿ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ

ಇಜಿ ವೇ ದಲ್ಲಿ ಇಸಿಎ (ಅಕೌಂಟ್ಸ್) ಹಾಗೂ ಇಸಿಎ (ಮಾರ್ಕೇಟಿಂಗ್) ಹುದ್ದೆಗಳಿಗೆ ಬಿಕಾಂ, ಬಿಬಿಎ, ಎಮ್.ಬಿ.ಎ, ಎಂಕಾಂ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವಯೋಮಾನದೊಳಗಿರಬೇಕು.

ಕಲಬುರಗಿ ಎಸ್.ಬಿ.ಐ ಲೈಫ್ ಇನ್ಸುರೆನ್ಸ್ ದಲ್ಲಿ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 10 ರಿಂದ 35 ವಯೋಮಾನದೊಳಗಿರಬೇಕು.

ಹೊಂಡಾ ಮೋಟಾರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ದಲ್ಲಿ ಟೆಕ್ನಿಶಿಯನ್ ಹುದ್ದೆಗೆ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.

ರಿಲಾಯನ್ಸ್ ಜಿಯೋ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ, ಎಂಬಿಎ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.

ಸ್ವತಂತ್ರ ಮೈಕ್ರೋ ಫೈನಾನ್ಸ್ ದಲ್ಲಿ ಫೀಲ್ಡ್ ಆಫೀಸರ್, ಸೀನಿಯರ್ ಫೀಲ್ಡ್ ಆಫೀಸರ್, ಬ್ರ್ಯಾಂಚ್ ಮ್ಯಾನೇಜರ್, ಏರಿಯಾ ಬ್ರ್ಯಾಂಚ್ ಮ್ಯಾನೇಜರ್, ರಿಸ್ಕ್ ಆಫೀಸರ್ ಹುದ್ದೆಗೆ ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 34 ವಯೋಮಾನದೊಳಗಿರಬೇಕು.

ಯುರೇಕಾ ಫೋರ್ಬ್ಸ್ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು.

ಶ್ರೀ ಪ್ರೇ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಹುದ್ದೆಗೆ ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು.

ಸ್ಟಾಫ್ ಲೂಮ್ ಗ್ಲೋಬಲ್ ಸಲ್ಯೂಶನ್ ದಲ್ಲಿ ಡಿಇಓ, ಟೆಕ್ನಿಶಿಯನ್ ಹುದ್ದೆಗೆ ಐಟಿಐ ಡಿಪ್ಲೋಮಾ, ಬಿಇ (ಮೆಕ್ಯಾನಿಕಲ್) ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಗಿಗಿನ್  ಜಾಬ್ಸ್ ದಲ್ಲಿ ವಿವಿಧ ಹುದ್ದೆಗಳಿಗೆ ಪಿಯುಸಿ ಹಾಗೂ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್  (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 274846, ಮೊಬೈಲ್ಸಂಖ್ಯೆ 96200 95270 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment