ಇವರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಜಮೆ

Written by Ramlinganna

Updated on:

gruha lakshmi fund ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳ ಖಾತೆಗೆ ಇದೇ ಆಗಸ್ಟ್ 24 ರಂದು ಹಣ ಬಿಡುಗಡೆಯಾಗುವ ಸಾಧ್ಯತೆಯಿದೆ.

ಹೌದು, ಈ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಬುರಗಿಯಲ್ಲಿ ಹಮ್ಮಿಕೊಂಡ ಗೃಹಜ್ಯೋತಿ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮನೆಯ ಯಜಮಾನಿಗೆ  ಮಾಸಿಕ 2 ಸಾವಿರ ರೂಪಾಯಿ ನೀಡುವ ಈ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 24 ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

gruha lakshmi fund  ಯಾರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಜಮೆಯಾಗಲಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಮಾತ್ರಕ್ಕೆ 2 ಸಾವಿರ ರೂಪಾಯಿ ಜಮೆಯಾಗುವುದಿಲ್ಲ. ನೋಂದಣಿ ಮಾಡಿಸಿದ ಮಹಿಳೆ ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿದ್ದು, ಕುಟುಂಬದ ಯಜಮಾನಿಯಾಗಿರಬೇಕು. ಅಂದರೆ ರೇಶನ್ ಕಾರ್ಡ್ ನಲ್ಲಿ ಅವರ ಹೆಸರು ಮೊದಲಿರಬೇಕು.  ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿ ಯಾರೆಂದು ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿದ ನಂತರ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಆಗುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ಪಡಿತರ ಚೀಟಿ ಪಡೆದವರ ಪಟ್ಟಿ ಕಾಣಿಸುತ್ತದೆ. ಅಲ್ಲಿ ಕುಟುಂಬದ ಯಜಮಾನ ಅಥವಾ ಯಜಮಾನಿ ಯಾರೆಂದು ಗೊತ್ತಾಗುತ್ತದೆ. ಪತ್ನಿ ಅಥವಾ ತಾಯಿಯ ಹೆಸರು ಮೊದಲಿದ್ದರೆ ಅವರನ್ನು ಕುಟುಂಬದ ಯಜಮಾನಿಯೆಂದು ಪರಿಗಣಿಸಲಾಗುವುದು.

ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಬೇಕಾಗಿರುವ ಅರ್ಹತೆಗಳು

ಗೃಹಲಕ್ಷೀ ಯೋಜನೆಗೆ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.ಅಂದರೆ ಒಂದು ಕುಟುಂಬದಲ್ಲಿ ಅತ್ತೆ ಮತ್ತು ಸೊಸೆಯರಲ್ಲಿ ಯಾರು ಪಡಿತರ ಚೀಟಿಯಲ್ಲಿಕುಟುಂಬದ ಯಜಮಾನಿಯಾಗಿರುತ್ತಾರೋ ಅವರ ಹೆಸರಿಗೆ ಹಣ ವರ್ಗಾವಣೆಯಾಗಲಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟಿದೆ? ಇಲ್ಲೇ ಚೆಕ್ ಮಾಡಿ

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಿರಬೇಕು. ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಜಮೆಯಾಗಲಿದೆ?

ಗೃಹಲಕ್ಷ್ಮೀ ಯೋಜನೆಯ ಹಣ ಇದೇ ತಿಂಗಳ ಆಗಸ್ಟ್ 15 ರಂದು ವರ್ಗಾವಣೆ ಮಾಡಲಾಗುವುದೆಂದು ಹೇಳಲಾಗಿತ್ತು. ಈಗ ಕೆಲವು ಕಾರಣಗಳಿಂದಾಗಿ ಮುಂದೂಡಿ ಆಗಸ್ಟ್ 24 ರಂದು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರಲ್ಲ?

ಗೃಹಲಕ್ಷ್ಮೀ ಯೋಜನೆಗೆ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು. ಪತಿ ಅಥವಾ ಪತ್ನಿ ಸರ್ಕಾರಿ ನೌಕರರಾಗಿದ್ದರೆ ಅವರು ಆದಾಯ ತೆರಿಗೆ ಪಾವತಿದಾರರಾಗಿರುವುದರಿಂದ ಅವರ ಖಾತೆಗೆ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆಇದೆ.

ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಯಾಗಲು ಯಾರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅಂತಹ ಕುಟುಬದ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

Leave a Comment