ಹುಬ್ಬಳ್ಳಿ ಮತ್ತು ಚಿತ್ರದುರ್ಗದಲ್ಲಿ ಮೇ 20 ರಂದು ಉದ್ಯೋಗ ಮೇಳ: ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ

Written by Ramlinganna

Published on:

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹುಬ್ಬಳ್ಳಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 20 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೌದು, ಹುಬ್ಬಳ್ಳಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ಮೇ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 6 ರಿಂದ 8 ಖಾಸಗಿ ರಂಗದ ಉದ್ಯೋಗದಾತರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿಯ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ (ಮೆಕ್ಯಾನಿಕಲ್) ಡಿಪ್ಲೋಮಾ (ಮೆಕ್ಯಾನಿಕಲ್) ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳು 18 ರಿಂದ 35 ವಯಸ್ಸಿನವರು ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಹಾಜರಾಗುವವರು ಕಡ್ಡಾಯವಾಗಿ

 https://surveyheart.com/form/643ce5a6bc01c4083b072455

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ವೆಹರ್ಟ್ ಪೇಜ್ ಓಪನ್ ಆಗುತ್ತದೆ. ಅಲ್ಲಿಕಾಣುವ Job Drive  ಕೆಳಗಡೆ ಕಾಣುವ Start ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಹೆಸರು, ಲಿಂಗ, ಹುಟ್ಟಿದ ದಿನ,  ಮೊಬೈಲ್ ನಂಬರ್, ಇ ಮೇಲ್ ಐಡಿ, ಆಧಾರ್ ಕಾರ್ಡ್ ನಂಬರ್, ಶೈಕ್ಷಣಿಕ ಅರ್ಹತೆ, ಅಂಕಗಳು, ತಾಲೂಕು, ಜಿಲ್ಲೆ, ವಿಳಾಸ ಹಾಗೂ ಕೆಟಗೇರಿ ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ತಮ್ಮ 1 ಭಾವಚಿತ್ರ, ಆಧಾರ್ ಕಾರ್ಡ್, ಬಯೋಡಾಟಾಗಳ ಹೆಚ್ಚಿನ ಪ್ರತಿಗಳೊಂದಿಗೆ (ಕನಿಷ್ಟ 5 ಪ್ರತಿಗಳು) ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ನವನಗರ ಹುಬ್ಬಳ್ಳಿ ಕಚೇರಿ, ಅಥವಾ ದೂರವಾಣಿ ಸಂಖ್ಯೆ 0836 2225288, ಮೊಬೈಲ್ ನಂಬರ್ 9480869880, 8453208555, 8197440155 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿಯೂ ಮೇ 20 ರಂದು ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಇದನ್ನೂಓದಿ : ವಿವಿಧ ಕಂಪನಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಮೇ 17 ಮತ್ತು 18 ರಂದು ಉದ್ಯೋಗ ಮೇಳ

ಸಂದರ್ಶನದಲ್ಲಿ ಕರಾವಳಿ ಟೀಚರ್ಸ್ ಹೆಲ್ಪ್ ಲೈನ್ ಸಂಸ್ಥೆಯಲ್ಲಿ ಖಾಲಿಯಿರುವ ಟೀಚರ್ಸ್, ನಾನ್ ಟೀಚಿಂಗ್, ವಾರ್ಡನ್ ಮುಂತಾದ ಹುದ್ದೆಗಳು ಹಾಗೂ ಮತ್ತೂಟ್ ಫೈನಾನ್ಸ್ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಧಾರವಾಡದ ಕರಾವಳಿ ಟೀಚರ್ಸ್  ಹೆಲ್ಪ್ ಲೈನ್ ಸಂಸ್ಥೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ 60 ಟೀಚರ್ಸ್ ಹುದ್ದೆಗಳಿಗೆ ಬಿಎಂ, ಬಿಕಾಂ, ಬಿಸಿಎ, ಬಿಎಸ್ಸಿ, ಡಿಇಡಿ, ಬಿಇಡಿ, ಎಂ.ಎ, ಎಂಕಾಂಸ ಎಂಸಿಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು.

ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ ನಾನ್ ಟೀಚಿಂಗ್ 50 ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ, ಬಿಎ, ಬಿಕಾಂ, ಬಿಸಿಎ, ಬಎಸ್ಸಿ, ಎಂಎ, ಎಂಕಾಂ, ಎಂಎಸ್ಸಿ, ವಿದ್ಯಾರ್ಹತೆ ಹೊಂದಿರುವವರು ಭಾಗವಹಿಸಬಹುದು.

ಚಿತ್ರದುರ್ಗ ಮುತ್ತೂಟ್ ಫೈನ್ಸ್ ನಲ್ಲಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಖಾಲಿಯಿರುವ ಜೆಆರ್ಇ 15 ಹುದ್ದಗಳಿಗೆ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ 2021 ರಿಂದ 2023 ರೊಳಗೆ ಉತ್ತೀರ್ಣರಾಗಿರಬೇಕು.

ಆಸಕ್ತರು ಬಯೋಡಾಟಾ, ವಿದ್ಯಾರ್ಹತೆ ಪ್ರಮಾಣ ಪತ್ರಗಳು ಙಾಗೂ ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment