ಕೊರೋನಾ ಸೋಂಕು ತಡೆಯುವುದಕ್ಕಾಗಿ ಹೇರಲಾದ ಲಾಕ್ಡೌನ್ ನಿಂದಾಗಿ ಸಾಕಷ್ಟು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅಷ್ಟೇ 20 ಸಾವಿರಕ್ಕೂ ಹೆಚ್ಚು ಬಡ ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗಾಗಿ ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೊಳಗಾಗಿ ಸಾವನ್ನಪ್ಪಿದ ಕುಟುಂಬಕ್ಕೆ 1 ಲಕ್ಷ ಪರಿಹಾರ (1 lakh compensation) ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ದೇಶದಲ್ಲಿಯೇ ಮೊದಲಬಾರಿಗೆ ಕರ್ನಾಟಕ ಈ ರೀತಿಯ ಪರಿಹಾರ ನೀಡುತ್ತಿದೆ. ದೇಶದ ಯಾವ ರಾಜ್ಯಗಳಲ್ಲಿಯೂ ಕೋವಿಡ್ ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ಪರಿಹಾರ ನೀಡಿಲ್ಲ. ಕರ್ನಾಟಕ ಸರ್ಕಾರವೇ ಈ ಪರಿಹಾರ ನೀಡಿದ್ದ ಮೊದಲನೆಯದ್ದಾಗಿದೆ.
ಕೊರೋನಾ ವಾರಿಯರ್ಸ್ ಗಳು ಕೊರೋನಾದಿಂದಾಗಿ ಮೃತಪಟ್ಟರೆ ಸರ್ಕಾರದ ವತಿಯಿಂದ 30 ಲಕ್ಷ ರೂಪಾಯಿ ಪರಿಹಾರ ಆ ಕುಟುಂಬಕ್ಕೆ 30 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದೆ. ಕೊರೋನಾದಿಂದಾಗಿ ದುಡಿಯುವ ವರ್ಗವೇ ಹೆಚ್ಚು ಪ್ರಾಣ ಕಳೆದುಕೊಂಡಿವೆ. ಇದರಿಂದ ಕುಟುಬಗಳು ಸಂಕಷ್ಟಕ್ಕೆ ಈಡಾಗಿವೆ. ಇದಕ್ಕಾಗಿ ಸರ್ಕಾರ ಸಾಂತ್ವನ (santvana scheme) ವಿಶೇಷ ಪ್ಯಾಕೇಜ್ ನಡಿ ಪರಿಹಾರ ಒದಗಿಸಲು ಮುಂದಾಗಿದೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯ ನಂತರ ಈ ಮಾಹಿತಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ.
ಲಾಕ್ಡೌನ್ ನಿಂದಾಗಿ ಸಾವನ್ನಪ್ಪಿದ ವ್ಯಕ್ತಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಸಿಗಲಿದೆ. ಕೋವಿಡ್ ನಿಂದ ಮೃತಪಟ್ಟ ಆ ಕುಟುಂಬದ ದುಡಿಯುವ ವಯಸ್ಕರ ಹೆಸರಿನಲ್ಲಿ ಪರಿಹಾರ ಮೊತ್ತ ನೀಡಾಲಗುವುದು ಎಂದ ಅವರು ಕೋವಿಡ್ ನಿಂದಾಗಿ ಹಲವಾರು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕುಟುಂಬಗಳು ತೀವ್ರ ಸಂಕಷ್ಟಕ್ಕೊಳಲಾಗಿದ್ದರಿಂದ ಅವರ ನೆರವಿಗೆ ಪರಿಹಾರ ನೀಡಲಾಗುತ್ತಿದೆ. ಈ ಕುರಿತು ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ ಎಂದರು.
ರಾಜ್ಯದಲ್ಲಿ ಕೋವಿಡ್ ನಿಂದಾಗಿ ಸುಮಾರು 20 ಸಾವಿರಿಕ್ಕೂ ಹೆಚ್ಚು ಜನ ಬಿಪಿಎಲ್ ಕುಟುಂಬಗಳ ಸದಸ್ಯರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಸರ್ಕಾರದ ಈ ತೀರ್ಮಾನ ಬಡ ಕುಟುಂಬಗಳ ಪಾಲಿಗೆ ಸ್ವಲ್ಪಮಟ್ಟಿಗಾದರೂ ಆಶಾಭಾವನೆ ಮೂಡಿಸಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಇರುವವರೆಗೂ ಈ ಯೋಜನೆ ಮುಂದುವರೆಯಲಿದೆ. ಕೋವಿಡ್ ಲಸಿಕೆಗಾಗಿ ಮೀಸಲಿಟ್ಟಿದ್ದ ಹಣವನ್ನು ಈ ಯೋಜನೆಗೆ ಬಳಸಲಾಗುವದು. ಕೇಂದ್ರಸರ್ಕಾರವು ಲಸಿಕೆ ಖರೀದಿ ಮಾಡಿ ಕೊಡುವುದರಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಯಶವಂತಪೂರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ ಕೊರೋನಾದಿಂದಾಗಿ ಮೃತಪಟ್ಟ ಕುಟುಂಬಕ್ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.