One lakh rupees subsidy: 1 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

One lakh rupees subsidy: ಸ್ವಯಂ ಉದ್ಯೋಗ ಯೋಜನೆಯಡಿ  ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಅಧಾರಿತ ಚಟುವಟಿಕೆಗಳಿಗೆ 1 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿಗಳ  ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ವಯಂ ಉದ್ಯೋಗ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಅಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುತ್ತದೆ. ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ (One lakh rupees subsidy)1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.

ಇದನ್ನೂ ಓದಿ :

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 81 ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದವರಿಗೆ 1,03,000 ರೂಪಾಯಿಗಳನ್ನು ಮೀರಬಾರದು. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 55 ವರ್ಷದೊಳಗಿರಬೇಕು.ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ, ರಾಜ್ಯ ಸರ್ಕಾರದ ಉದ್ಯೋಗಿಯಾಗಿರಬಾರದು.

ಅರ್ಹ ಅಭ್ಯರ್ಥಿಗಳು https://kmdconline.karnataka.gov.in

ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ ಫೆಬ್ರವರಿ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ

ಬೆಳಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ ಕರ್ನಾಟಕದ ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ 080 22860999 ಗೆ ಸಂಪರ್ಕಿಸಲು ಕೋರಲಾಗಿದೆ. 24 X7 ಸಹಾಯವಾಣಿ ನಂಬರ್ 8277799990 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 232425 ಗೆ ಸಂಪರ್ಕಿಸಲು ಕೋರಲಾಗಿದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://kmdconline.karnataka.gov.in/Portal/login

ಲಿಂಕ್ಮೇಲೆ ಕ್ಲಿಕ್ ಮಾಡಬೇಕು.  ಆಗ ತೆರದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕೇಳಲಾದ  ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ನಲ್ಲಿ ಅರ್ಹಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವಯೋಮಾನದೊಳಗಿರಬೇಕು. ಅರ್ಜಿದಾರರ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಿರಬಾರದು. ಅರ್ಜಿದಾರರು ಕೆಎಂಡಿಸಿಯಲ್ಲಿ ಸುಸ್ತಿದಾರರಾಗಿರಬಾರದು.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಸಲ್ಲಿಸಬೇಕು?

ಸಕ್ರಮ ಪ್ರಾಧಿಕಾರದಿಂದ ನೀಡಲಾದ ಜಾತಿ  ಅಲ್ಪಸಂಖ್ಯಾತ ಪ್ರಮಾಣ ಪತ್ರ ಸಲ್ಲಿಸಬೇಕು. ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ) ಸಲ್ಲಿಸಬೇಕು. ಯೋಜನಾ ವರದಿ ಸಲ್ಲಿಸಬೇಕು.

ಇದನ್ನೂ ಓದಿ : ಜಮೀನಿಗೆ ಹೋಗಲು ಕಾಲುದಾರಿ ಬಂಡಿದಾರಿ ಇದೆಯೇ? ಇಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಿದ ನಂತರ ಫಲಾನುಭವಿಗಳ ಅರ್ಜಿ ಸ್ಟೇಟಸ್ ಸಹ ಚೆಕ್ ಮಾಡಬಹುದು. ಅಲ್ಲಿ ಮೊಬೈಲ್ ನಂಬರ್ ಹಾಗೂ ಅರ್ಜಿದಾರರ ಹುಟ್ಟಿದ ದಿನ ನಮೂದಿಸಿ ಸ್ಟೇಟಸ್ ಚೆಕ್ ಮಾಡಬಹುದು.

Leave a Comment