Self employment : ಸ್ವಯಂ ಉದ್ಯೋಗ ಕೈಗೊಳ್ಳಲು ನಿರುದ್ಯೋಗಿಗಳಿಗೆ ಶೇ. 20 ರಷ್ಟು ಅಥವಾ ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ವೀರಶೈವ ಲಿಂಗಾಯತ ಸಮುದಾಯ ಹಾಗ ಉಪಜಾತಿಗೆ ಸೇರಿದ ಜನರ (ಪ್ರವರ್ಗ – 3ಬಿ) ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರು ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ Self employment ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ, ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಹಾಗೂ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ಚಿಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ 1 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡಲಾಗುವುದು.
ಭೋಜನಾಲಯ ಕೇಂದ್ರ ತೆರೆಯಲು ಸಹಾಯಧನ
ವೀರಶೈವ ಲಿಂಗಾಯತ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ 5 ಲಕ್ಷ ರೂಪಾಯಿ ಇದರಲ್ಲಿ 4.60 ಲಕ್ಷ ರೂಪಾಯಿ ಸಾಲ ಮತ್ತು 40 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20 * 30 ಅಳತೆಯ ನಿವೇಶನ ಹೊಂದಿರಬೇಕು.
ಸ್ವಾವಲಂಬಿ ಸಾರಥಿ ಯೋಜನೆಯಡಿ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರವಾಹನ (ಹಳದಿಬೋರ್ಡ್) ಖರೀದಿಗೆ ಸಹಾಯಧನ ನೀಡಲಾಗುವುದು. ಹೌದು, ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ. 50 ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು.ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.
ಇದನ್ನೂ ಓದಿ : Annabhagya DBT Status: ಅನ್ನಭಾಗ್ಯ ಹಣ ಜಮೆಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಗಮವೂ ಅನುಷ್ಠಾನಗೊಳಿಸುವ ಈ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ಅಥವಾ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ / ಇಲಾಖೆಗಳಲ್ಲಿ ಯೋಜನೆಯ ಯಾವುದೇ ನಿಗಮ / ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522 / 9900012351 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.