ಇಂದಿನಿಂದ ಒಂದು ವಾರ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Written by Ramlinganna

Published on:

one week rain : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ 9 ಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

one week rain ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಗದಗ, ಬೆಳಗಾವಿ ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಹಾಗೂ ಭಾರಿ ಗಾಳಿ ಸಹಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಾರ್ಚ್ 27 ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 24 ರಿಂದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಜಿಲ್ಲೆಯಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್ 21 ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 21 ರಂದು ಸಾಧಾರಣವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಓಂದೆರಡು ಕಡೆ ಬಿರುಗಾಳಿಯೊಂದಿಗೆ ಗುಡುಗು ಮಿಂಚಿನೊಂದಿಗೆ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇಱುವ ಸಾಧ್ಯತೆಯಿದೆ.

one week rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

one week rain ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಪೋಡಿ ನಕ್ಷೆ ಮೊಬೈಲ್ ನಲ್ಲಿ ಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment