ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

Prematric and postmatric scholarship ಪ್ರಸಕ್ತ 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ 1 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಒಂದನೇ ತರಗತಿಯಿಂದ 10ನೇ ತರಗತಿಯವರಿಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

https://ssp.karnataka.gov.in

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಶಿಷ್ಯವೇತನದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ವಿದ್ಯಾರ್ಥಿಗಳು click here to apply for prematric scholarship 2022-23ಮೇಲೆ ಕ್ಲಿಕ್ ಮಾಡಬೇಕು. ನಂತರ ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಶಾಲೆಯ ಮಾರ್ಕ್ಸ್ ಕಾರ್ಡ್ ನಲ್ಲಿರುವ SATS ID ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು 1 ರಿಂದ 10ನೇ ತರಗತಿಯವರೆಗೆ  ಓದುತ್ತಿರಬೇಕು. ಯಾವ ತರಗತಿಯಲ್ಲಿ ಉತ್ತೀರ್ಣರಾಗಿದ್ದಾರೋ ಆ ತರಗತಿ ಅಂಕಪಟ್ಟಿ ಇರಬೇಕು. ವಿದ್ಯಾರ್ಥಿಯ ಹೆಸರಿನ ಮೇಲೆ ಬ್ಯಾಂಕ್ ಅಕೌಂಟ್ ಇರಬೇಕು. ಆಧಾರ್ ಕಾರ್ಡ್ ಇರುವುದು ಕಡ್ಡಾಯವಾಗಿದೆ.

Prematric and postmatric scholarship ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1 ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಹಾಗೂ ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಜನವರಿ 31 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಡಿಸೆಂಬರ್ 31 ರವರೆಗೆ ನಿಗದಿಪಡಿಸಲಾಗಿತ್ತು. ಪೋಷಕರು, ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಪ್ರಯುಕ್ತ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ

https://ssp.postmatric.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪುಟ ಓಪನ್ ಆಗುವುದು. ನಿಮ್ಮ ಆಧಾರ್ ಇದೆಯೆ ಎಂಬ ಮಾಹಿತಿ ಕಾಣುತ್ತದೆ. ಅಲ್ಲಿ ಹೌದು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಆಧಾರ್ ಸಂಖ್ಯೆ ನಮೂದಿಸಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ಲಿಂಗ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಒಂದು ಕೋಡ್ ಕೇಳಲಾಗಿರುತ್ತದೆ. ಅಂದರೆ ಕೂಡಿಸಿ, ಕಳೆಯಿರಿ,ಭಾಗಿಸಿ ಅಥವಾ ಗುಣಾಕಾರ ಮಾಡಲು ಎರಡು ಅಂಕಿಗಳಿರುತ್ತವೆ. ಅಲ್ಲಿ ನಿಮ್ಮ ಉತ್ತರ ನಮೂದಿಸಬೇಕು. ನಂತರ ವಿದ್ಯಾರ್ಥಿವೇತನ ವಿತರಣೆಯ ಉದ್ದೇಶಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶವು ನನ್ನ ಆಧಾರ್ ಅನ್ನ ಬಳಸಿ ಮೇಲ್ಗಡೆ ಬಾಕ್ಸ್ ಆಯ್ಕೆಮಾಡಿಕೊಳ್ಳಬೇಕು. ನಂತರ ಮುದುವರೆಸು ಮೇಲೆ ಕ್ಲಿಕ್ ಮಾಡಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಾಂತ್ರಿಕ ಸಮಸ್ಯೆಯಾಗುತ್ತಿದ್ದರೆ ವಿದ್ಯಾರ್ಥಿಗಳು ಸಹಾಯವಾಣಿ 8050770005 ಅಥವಾ 080 35254757 ಗೆ ಕರೆ ಮಾಡಬಹುದು.

Leave a Comment