Online Training on Dairy ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವೆ ಇಲಾಖೆ ವಿಜಯಪುರ ಕೃಷಿ ಇಲಾಖೆ, ಆತ್ಮ ಯೋಜನೆ ಸಹಯೋಗದಲ್ಲಿ ಜುಲೈ 2 ರಂದು 4 ಗಂಟೆಗೆ ಪಶುಪಾಲನೆ ಮಾಡುತ್ತಿರುವ ರೈತರಿಗೆ ಆನ್ಲೈನ್ ತರಬೇತಿ ಹಮ್ಮಿಕೊಳ್ಳಲಾಗಿದೆ.
ಜಾನುವಾರುಗಳಲ್ಲಿ ಶಸ್ತ್ರ ಚಿಕಿತ್ಸಾ ತೊಂದರೆಗಳು ಹಾಗೂ ಅವುಗಳ ನಿವಾರಣೆ ಹೇಗೆ ಮಾಡಬೇಕೆಂಬುದರ ಕುರಿತು ರೈತರಿಗೆ ಆನ್ಲೈನ್ ಮೂಲಕ ತರಬೇತಿ ನೀಡಲಾಗುವುದು.
ಆಸಕ್ತ ರೈತರು meet.google.com/ymt–quve-zjw ಲಿಂಕ್ ಮೇಲೆ ಕ್ಲಿಕ್ ಕ್ಲಿಕ್ ಮಾಡಿ ತರಬೇತಿಯಲ್ಲಿ ಭಾಗವಹಿಸಬಹುದು. ತಿಡಗುಂದಿ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯಾಧಿಕಾರಿ ಡಾ. ರಮೇಶ ರಾಠೋಡ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ತರಬೇತಿ ನೀಡುವರು.
ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವೆ ಇಲಾಖೆಯ ಉಪನಿರ್ದೇಶಕ ಡಾ. ಪ್ರಾಣೇಶ ಜಹಾಗೀರದಾರ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಇದನ್ನೂ ಓದಿ PM kisan Mandhan Yojane ಯಡಿ ರೈತರಿಗೆ ಸಿಗಲಿದೆ 3 ಸಾವಿರ Pension
ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿ ಉಳ್ಳವರು ಮೊದಲು ತಮ್ಮ ಸ್ಮಾರ್ಟ್ ಫೋನ್ನಲ್ಲಿ ಗೂಗಲ್ ಮೀಟ್ ಅಪ್ಲಿಕೇಷನ್ (ಆ್ಯಪ್) ಅನ್ನು ಡೌನ್ಲೋಡ್ ಮಾಡಿಕೊಂಡು, ಬಳಿಕ ಮೇಲೆ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ತರಬೇತಿಯಲ್ಲಿ ಭಾಗವಹಿಸಬಹುದು.
ಸೂಚನೆಗಳು: ಗೂಗಲ್ ಮೀಟ್ ವೇದಿಕೆಗೆ ಹಾಜರಾದ ಕೂಡಲೇ ಸದಸ್ಯರು ತಮ್ಮ ಆಡಿಯೋ ಮತ್ತು ವಿಡಿಯೋವನ್ನು ಮ್ಯೂಟ್ ಮಾಡಬೇಕು. ತರಬೇತಿ ಆರಂಭದಲ್ಲಿ ‘ಪ್ರಸೆಂಟ್ ನೌ’ ಮೇಲೆ ಕ್ಲಿಕ್ ಮಾಡದೆ, ‘ಆಸ್ಕ್ ಟು ಜಾಯಿನ್’ ಮೇಲೆ ಒತ್ತಬೇಕು.
Online Training on Dairy ದೇಶದ ಮೊದಲ ಪ್ರಾಣಿ ಕಲ್ಯಾಣ ಸಹಾಯವಾಣಿ ಆರಂಭ
ಜಾನುವಾರು ಸಾಕಾಣಿಕೆದಾರರಿಗೆ ಕಾಲಕಾಲಕ್ಕೆ ಮಹತ್ವಹ ಮಾಹಿತಿಗಳನ್ನು ನೀಡಲು ಹಾಗೂ ಜಾನುವಾರು ಸಾಕಣೆದಾರರಿಗೆ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಮತ್ತಷ್ಟು ಹತ್ತಿರವಾಗಲು ನೆರವಾಗುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್ ರೂಮ್) ಆರಂಭಿಸಲಾಗಿದೆ.
ಇದನ್ನೂ ಓದಿ ನಿಮ್ಮ ಹೆಸರಿಗೆ ಯಂತ್ರೋಪಕರಣ ಪಡೆಯಲಾಗಿದೆಯೇ? ಚೆಕ್ ಮಾಡಿ
ಹೆಬ್ಬಾಳದ ಪಶುಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಿದ ನಂತರ ಮಾತನಾಡಿ, ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್ ರೂಂ) ರೈತರಿಗಾಗಿ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ, ದಿನ 24 ಗಂಟೆಯೂ ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. 8277100200 ಸಹಾಯವಾಣಿಗೆ ರೈತರು ಕರೆ ಮಾಡಿ ಪಶುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು., ಜಾನುವಾರುಗಳ ಆರೋಗ್ಯ ಕಾಪಾಡುವಲ್ಲಿ ವಾರ್ ರೂಂ ಮಹತ್ವದ ಕಾರ್ಯವಹಿಸಲಿದೆ. ಇದರ ಪ್ರಯೋಜನವನ್ನು ಎಲ್ಲಾ ಜಾನುವಾರು ಸಾಕಾಣಿಕೆದಾರರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಡಿದ್ದಾರೆ.
ರೈತರಿಗಾಗಿ ಆರಂಭವಾದ ಉಚಿತ ಸಹಾಯವಾಣಿಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಹೌದು, ರಾಜ್ಯದ ಮೂಲೆ ಮೂಲೆಗಳಿಂದ ರೈತರು ಈ ಉಚಿತ ಸಹಾಯವಾಣಿಗೆ ಕರೆ ಮಾಡುತ್ತಿದ್ದಾರೆ.