ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಇದೇ ತಿಂಗಳ ಎರಡನೇ ವಾರದಲ್ಲಿ ಪಿಎಂ ಕಿಸಾನ್ ಫಲಾನುಭವಿಗಳಿಗೆ 11ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ. ಇಕೆವೈಸಿ ಕಡ್ಡಾಯಗೊಳಿಸಿದರೂ ಸಹ ಮೇ 31ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹಾಗಾಗಿ ಇಕೆವೈಸಿ ಮಾಡಿಸದ ರೈತರಿಗೂ ಪಿಎಂ ಕಿಸಾನ್ 11ನೇ ಕಂತಿನ ಹಣ ಬರುವ ಸಾಧ್ಯತೆಯಿದೆ. ಆದರೆ ಪಿಎಂ ಕಿಸಾನ್ ಸ್ಟೇಟಸ್ ನಲ್ಲಿ Rft signed by state for installment ಅಥವಾ Rft sign ಇದ್ದವರಿಗೆ ಇದೇ ತಿಂಗಳು ಪಿಎಂ ಕಿಸಾನ್ ಹಣ ಪಕ್ಕಾ ಜಮೆಯಾಗಲಿದೆ.

ಒಂದು ವೇಳೆ ಒಂದೇ ಕುಟುಂಬದಲ್ಲಿ ಪತಿ ಪತ್ನಿ ಅಥವಾ ಕುಟುಂಬದಲ್ಲಿ ಇನ್ನಿತರ ಸದಸ್ಯರಿಗೆ ಇದಕ್ಕಿಂತ ಮುಂಚಿತವಾಗಿ ಪಿಎಂ ಕಿಸಾನ್ ಹಣ ಜಮೆಯಾಗುತ್ತಿದ್ದರೆ ಈಗ ಒಬ್ಬರಿಗೆ ಮಾತ್ರ ಜಮೆಯಾಗಲಿದೆ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಆರಂಭದಲ್ಲಿ ಪತಿ ಪತ್ನಿ ಹಾಗೂ ಕುಟುಂಬದ ಸದಸ್ಯರ ಹೆಸರಲ್ಲಿ ಜಮೀನು ಇದ್ದರೆ ಅಂತಹ ರೈತರೂ ಸಹ ಪಿಎಂ ಕಿಸಾನ್ ನೋಂದಣಿ ಮಾಡಿಸಿದ್ದರು. ಹಾಗಾಗಿ 10ನೇ ಕಂತಿನವರೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿದೆ. ಆದರೆ ಇನ್ನೂಮುಂದೆ ನೋಂದಣಿಯಾದ ಎಲ್ಲಾ ಸದಸ್ಯರಿಗೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ.

ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಜಮೆಯಾಗಲಿದೆ.10ನೇ ಕಂತು ಬಿಡುಗಡೆ ಮಾಡಿದಾಗ ಒಂದೇ ಕುಟುಂಬದ ಹೆಚ್ಚು ಸದಸ್ಯರು ನೋಂದಣಿ ಮಾಡಿಸಿದ್ದರೆ ಅಥವಾ ಪತಿ ಪತ್ನಿ ಇಬ್ಬರೂ ಫಲಾನುಭವಿಯಾಗಿದ್ದರೆ ಅಂತಹವರಿಗೂ ಪಿಎಂ ಕಿಸಾನ್ ಹಣ ಜಮೆ ಮಾಡಲಾಗುತ್ತಿತ್ತು. ಇನ್ನೂ ಮುಂದೆ ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಜಮೆಯಾಗಲಿದೆ.

ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆಯೇ ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮೊಬೈಲ್ ನಲ್ಲೇ ಚೆಕ್ ಮಾಡಲು ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು. ನಿಮಗೆ ಇಲ್ಲಿಯವರೆಗೆ ಜಮೆಯಾಗಿರುವ ಕಂತಿನ ಸ್ಟೇಟಸ್ ನೋಡಬಹುದು. 11 ನೇ ಕಂತಿನ ಹಣ ಜಮೆಯಾಗಲು Rft signed by state for installment ಇದ್ದರೆ ಮುಂದಿನ ಕಂತಿನ ಹಣ ಜಮೆಯಾಗುವ ಎಲ್ಲಾ ಸಾಧ್ಯತೆಯಿದೆ.

ಒಂದೇ ಕುಟುಂಬದ ಇಬ್ಬರೂ ಮೂವರು ಸದಸ್ಯರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿದ್ದರೆ ಅಂತಹವರಲ್ಲಿ ಒಬ್ಬರಿಗೆ ಬಿಟ್ಟು ಉಳಿದ ಸದಸ್ಯರು ಪಿಎಂ ಕಿಸಾನ್ ಯೋಜನೆಯ ಜಮೆಯಾದ ಹಣವನ್ನು ಹಿಂದಿರುಗಿಸುವ ಪರಿಸ್ಥಿತಿ ಬರಬಹುದು. ಏಕೆಂದರೆ ಈಗಾಗಲೇ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ನಲ್ಲಿ Refund Online ಕಾಲಂ ತೆರೆಯಲಾಗಿದೆ. ಹೀಗಾಗಿ ಮುಂದೆ ಪಿಎಂ ಕಿಸಾನ್ ಯೋಜನೆಯಲ್ಲಿ ಬದಲಾವಣೆ ತರುವ ಸಾಧ್ಯತೆಯೂ ಕಾಣುತ್ತಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಅರ್ಹತೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲಿಚ್ಚಿಸುವ ರೈತರಿಗೆ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಈ ಯೋಜನೆಯ ಲಾಭ ಸಿಗಲಿದೆ. ಇನ್ನೂ ಮುಂದೆ  ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಫಲಾನುಭವಿಯಾಗಲು ಅವಕಾಶವಿದೆ. ಹಾಗಾಗಿ ಪಿಎಂ ಕಿಸಾನ್ ನೋಂದಣಿಗೆ ಪಡಿತರ ಚೀಟಿ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ- ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮೆ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯಲ್ಲಿ ಹೆಸರು ನೋಂದಣಿ ಮಾಡಿಸಿದರೆ ವಾರ್ಷಿಕವಾಗಿ ರೈತರಿಗೆ 6 ಸಾವಿರ ರೂಪಾಯಿಯನ್ನು ಪ್ರತಿ ನಾಲ್ಕು ತಿಂಗಳಿಗೆ ಒಂದು ವರ್ಷದಲ್ಲಿ ಮೂರು ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗುವುದು.

ಪಿಎಂ ಕಿಸಾನ್ ಯೋಜನೆಯ ನೋಂದಣಿಗೆ ಬೇಕಾಗುವ ದಾಖಲೆಗಳು

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ರೈತರಿಗೆ ಆಧಾರ್ ಕಾರ್ಡ್ ಇರಬೇಕು. ರೈತರ ಹೆಸರಿನ ಮೇಲೆ ಜಮೀನು ಇರಬೇಕು.  ಬ್ಯಾಂಕಿನ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಜಮೀನಿನ ದಾಖಲೆಗಳಿದ್ದ ರೈತರು ಪಿಎಂ ಕಿಸಾನ್ ಯೋಜನೆಗೆ ಫಲಾನುಭವಿಯಾಗಬಹುದು. ಆದರೆ ಒಂದು ಕುಟುಂಬಕ್ಕೆ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯ ಫಲಾನುಭವಿಯಾಗಬಹುದು.

Leave a Reply

Your email address will not be published. Required fields are marked *