Parihara list 2024: ಈ ಲಿಸ್ಟ್ ನಲ್ಲಿದ್ದವರಿಗೆ ಮಾತ್ರ ಬರ ಪರಿಹಾರ ಜಮೆ

Written by Ramlinganna

Updated on:

Parihara payment farmers eligibility ಬರಗಾಲ ಪರಿಹಾರ ಹಣ ಈಗಾಗಲೇ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ.ಈ ಕೆಳಗಿನ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಬರ ಪರಿಹಾರ ಹಣ ಜಮೆ ಮಾಡಲಾಗುವುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದ 200 ಕ್ಕೂ ಹೆಚ್ಚು ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಬರ ಪರಿಹಾರ ನೀಡಲು ರಾಜ್ಯ ಸರ್ಕಾರವು ಈಗಗಲೇ ಮನವಿ ಮಾಡಿದೆ. ಅದಕ್ಕಿಂತ ಮುಂಚಿತವಾಗಿ ರಾಜ್ಯ ಸರ್ಕಾರವು ರೈತರಿಗೆ ನೆರವಾಗಲೆಂದು ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪರಿಹಾರ ಜಮೆ ಮಾಡಬೇಕೆಂದು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಹಾರ ತಂತ್ರಾಂಶದಲ್ಲಿರೈತರ ಹೆಸರುಗಳನ್ನು ಸೇರ್ಪಡೆ ಕಾರ್ಯವು ನಡೆಯುತ್ತಿದೆ. ಈಗಾಗಲೇ  ಪರಿಹಾರ ತಂತ್ರಾಂಶದಲ್ಲಿ ಹೆಸರು ಸೇರ್ಪಡೆಯಾದ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಅನುಮೋದನೆ ನೀಡಿದ್ದಾರೆ.

ಬರಗಾಲ ಪರಿಹಾರ ಹಣ ಜಮೆಯಾಗದಿದ್ದರೆ ಯಾರಿಗೆ ಸಂಪರ್ಕಿಸಬೇಕೆಂದು ತಾಲೂಕುವಾರು ಸಂಪರ್ಕದ ನಂಬರ್ ಗಳನ್ನು ನೀಡಲಾಗುತ್ತಿದೆ.

2022-23 ನೇ ಸಾಲಿನಲ್ಲಿ ನಿಮಗೆಷ್ಟು ಪರಿಹಾರ ಹಣ ಜಮೆಯಾಗಿದೆ? ಚೆಕ್ ಮಾಡಿ

ಮುಂಗಾರು ಹಂಗಾಮಿನ 2022-23ನೇ ಸಾಲಿನಲ್ಲಿ ನಿಮಗೆಷ್ಟು ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service87/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪರಿಹಾರ ಬೆನಿಫಿಶಿಯರಿ ಪೇಮೆಂಟ್ ರಿಪೋರ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಊರು ಆ?್ಕೆ ಮಾಡಿಕೊಳ್ಳಬೇಕು.

ನಂತರ select Year 2022-23  ಆಯ್ಕೆ ಮಾಡಿಕೊಳ್ಳಬೇಕು. ನಂತರ select Season ನಲ್ಲಿ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು.  Select Calamity  ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರಿಗೆ ಎಷ್ಟು ಹಣ ಜಮೆಯಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ. ಮೊದಲ ಪೇಜ್ ನಲ್ಲಿ ನಿಮ್ಮಹೆಸರು ಕಾಣಿಸದಿದ್ದರೆ ನಂತರದ ಪೇಜ್ ಚೆಕ್ ಮಾಡಬೇಕು. ಅಥವಾ ನಿಮ್ಮಹೆಸರು ಟೈಪ್ ಮಾಡಿ ಎಂಟರ್ ಅಥವಾ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಹೆಸರು ಕಾಣಿಸುತ್ತದೆ.

Parihara payment farmers eligibility ಬರ ಪರಿಹಾರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಚೆಕ್ ಮಾಡಿ

ರೈತರು ತಮ್ಮ ಹೆಸರಿಗೆ ಪ್ರೂಟ್ಸ್ ಐಡಿ ಇದೆಯೋ ಇಲ್ಲವೋ ಹಾಗೂ ಬರ ಪರಿಹಾರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ನಂತರ Find the details ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನ್ನು ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಕಾಣಿಸುತ್ತದೆ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು. ಒಂದು ವೇಳೆ ನಿಮ್ಮ ಹೆಸರಿಗೆ ಫ್ರೂಟ್ಸಐಡಿ ಇಲ್ಲದಿದ್ದರೆ ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬೇಕು.

ಫ್ರೂಟ್ಸ್ ತಂತ್ರಾಂಶದಲ್ಲಿ ಕೂಡಲೇ ಭೂ ವಿವರ ನೋಂದಾಯಿಸಿ                                   

ರೈತರು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ಭೂ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ಹೌದು, ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದೆ. ಕೂಡಲೇ ರೈತರು ತಮ್ಮಮಾಲಿಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳನ್ನು ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಾಡುವಂತೆ ಕೋರಲಾಗಿದೆ.

ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ  ಒಳಗೊಂಡಿರುತ್ತದೆ. ಹಾಗಾಗಿ ರೈತರು ಜಮೀನಿನ ದಾಖಲೆಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಫೋಟೋದೊಂದಿಗೆ ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.

Leave a Comment