ಬರ ಪರಿಹಾರ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

Written by Ramlinganna

Published on:

Parihara payment beneficiary list ಬರ ಪರಿಹಾರ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬರ ಪರಿಹಾರ ಲಿಸ್ಟ್ ನಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡುವುದರೊಂದಿಗೆ ತಮಗೆಷ್ಟು ಹಣ ಜಮೆಯಾಗಿದೆ? ಯಾವ ವರ್ಷದಲ್ಲಿ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

Parihara payment beneficiary list ಬರ ಪರಿಹಾರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?

ಬರ ಪರಿಹಾರ ಲಿಸ್ಟ್ ನಲ್ಲಿ ತಮ್ಮ ಹೆಸರು ಇರುವುದನ್ನು ಚೆಕ್ ಮಾಡಲು ಈ

https://parihara.karnataka.gov.in/service87/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪರಿಹಾರ ಬೆನಿಫಿಶಿಯರಿ ಪೇಮೆಂಟ್ ರಿಪೋರ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮಊರು ಆಯ್ಕೆ ಮಾಡಿಕೊಳ್ಳಬೇಕು.

ಯಾವ ವರ್ಷದ ಬೆಳೆ ಹಾನಿ ಪರಿಹಾರ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ವರ್ಷವನ್ನು select Year ನಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ನಂತರ select Season ನಲ್ಲಿ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು.  Select Calamity  ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾರು ಯಾರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಹಾಗೂ ಅವರಿಗೆ ಎಷ್ಟು ಹಣ ಜಮೆಯಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ View Status ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆ, ಬ್ಯಾಂಕ್ಹೆಸರು ಹಾಗೂ ನಿಮಗೆ ಎಷ್ಟು ಹಣ ಜಮೆಯಾಗಿದೆ? ನಿಮ್ಮ ಹೆಸರು ಹಾಗೂ ಪೇಮೆಂಟ್ ಸ್ಟೇಟಸ್ ಕಾಣಿಸುತ್ತದೆ. ಅದರ ಕೆಳಗಡೆ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆ, ಹಾಗೂ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಯಾವ ಬೆಳೆಗೆ ಎಷ್ಟು ಪರಿಹಾರ ಹಣ ಜಮೆಯಾಗಲಿದೆ?

ಕೇಂದ್ರ ಸರ್ಕಾರ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಬಹುವಾರ್ಷಿಕ ಬೆಳೆಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.

ಇದನ್ನೂ ಓದಿ : ಸಾಲಮನ್ನಾಕ್ಕೆ ಮಾಜಿ ಸಿಎಂ ಆಗ್ರಹ ಸಾಲ ಮನ್ನಾ ಎಷ್ಟಾಗಲಿ ಕಾಮೆಂಟ್ ಮಾಡಿ

ತಾತ್ಕಾಲಿಕವಾಗಿ ಬರಗಾಲ ಘೋಷಣೆಯಾದ ತಾಲೂಕುಗಳ ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದರು. ಮುಂದಿನ ವಾರದೊಳಗೆ ಎಲ್ಲಾ ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಲು ಕ್ರಮಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಹಾಗಾಗಿ ಮುಂದಿನ ವಾರದಲ್ಲಿ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮಯಾಗುವ ಸಾಧ್ಯತೆಯಿದೆ.

ಬರಗಾಲ ಪರಿಹಾರ ಹಣ ಜಮೆಯಾಗಲು ಫ್ರೂಟ್ಸ್ ಐಡಿ ಇರುವುದು ಕಡ್ಡಾಯ

ಬರಗಾಲ ಪರಿಹಾರ, ಬೆಳೆ ವಿಮೆ ಪರಿಹಾರ ಹಾಗೂ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಜಮೆಯಾಗಬೇಕಾದರೆ ಫ್ರೂಟ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಯಾರೂ ಫ್ರೂಟ್ಸ್ ಐಡಿ ಮಾಡಿಸಿಕೊಂಡಿಲ್ಲವೋ ಕೂಡಲೇ ತಮ್ಮಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Leave a Comment