Parihara payment released ಕಳೆದ ಸಾಲಿನಲ್ಲಿ ಹಾಗೂ ಹಾಗೂ ಪ್ರಸಕ್ತ ವರ್ಷ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ.
ಹೌದು, ಚಿತ್ರದುರ್ಗ , ಕೋಲಾರ ಹಾಗೂ ಇತರ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ. ಯಾವ ಜಿಲ್ಲೆಯ ಎಷ್ಟು ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
Parihara payment released ಕೋಲಾರ ಜಿಲ್ಲೆಯಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ 5.78 ಕೋಟಿ ಜಮೆ
ಕೋಲಾರ ಜಿಲ್ಲೆಯಲ್ಲಿ ಮಾರ್ಚ್ ಹಾಗೂ ಮೇ ತಿಂಗಳಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕೆ ಬೆಳೆ ಹಾನಿಗೆ ಹಾನಿ ಸಂಬಂಧ ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆನಡೆಸಿದ್ದರು. ಅದರಂತೆ ಜಿಲ್ಲೆಯಲ್ಲಿ ಒಟ್ಟು 4956 ಹೆಕ್ಟೇರ್ ಪ್ರದೇಶದಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಮಾವು, ಸೀಬೆ, ಪಪ್ಪಾಯ, ಗೋಡಂಬಿ ಹಾಗೂ ಇತರೆ ಹಣ್ಣುಗಳು ಮತ್ತು 672 ಹೆಕ್ಟೇರ್ ಪ್ರದೇಶದಲ್ಲಿ ವಾರ್ಷಿಕ ತೋಟಗಾರಿಕೆ ಬೆಳೆಗಳಾದ ಟೋಮ್ಯಾಟೋ, ಕಲ್ಲಂಗಡಿ, ಬಾಳೆ, ಎಲೆಕೋಸು, ಬೀಟ್ ರೂಟ್, ಕ್ಯಾಪ್ಸಿಕಂ, ಹಸಿರು ಮೆಣಸಿನಕಾಯಿ ಹಾಗೂ ಇತರೆ ತರಕಾರಿ ಹಾಗೂ ಹೂವಿನ ಬೆಳೆಗಳ ನಷ್ಟ ವರದಿಯನ್ನು ಸಂಬಂಧಿಸಿದ ತಹಶೀಲ್ದಾರ ಕಚೇರಿಗೆ ಸಲ್ಲಿಸಲಾಗಿತ್ತು. ಈ ರೈತರ ವಿವರಗಳನ್ನುಗ್ರಾಮ ಲೆಕ್ಕಿಗರ ಲಾಗಿನ್ ಮೂಲಕ ಪರಿಹಾರ ತಂತ್ರಾಂಶದಲ್ಲಿಮಾಹಿತಿ ಅಪ್ಲೋಡ್ಮಾಡಲಾಗಿತ್ತು.
ಸರ್ಕಾರದಿಂದ ಜಿಲ್ಲೆಗೆ ಮೊದಲನೇ ಕಂತಿನ 5.78 ಕೋಟಿರ ರೂಪಾಯಿ ಪರಿಹಾರ ಹಣ ಬಿಡುಗಡೆಯಾಗಿದೆ. ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರಿಗೆ 22500 ರೂಪಾಯಿ, ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 17000 ರೂಪಾಯಿ ಯನ್ನು ಮದಲ ಕಂತಿನಲ್ಲಿ ಒಟ್ಟು 4264 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮಗೆಷ್ಟು ಬೆಳೆ ಹಾನಿ ಪರಿಹಾರ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಬೆಳೆ ಹಾನಿಯಾದ ರೈತರು ತಮಗೆಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿಟೈಪ್ ನಲ್ಲಿ ಫ್ಲಡ್ ಹಾಗೂಸ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ರೈತರ ಖಾತೆಗಳಿಗೆ 12.35 ಕೋಟಿ ರೂಪಾಯಿ ಜಮೆ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ 6117 ರೈತರ ಖಾತೆಗಳಿಗೆ 12.35 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮೆ ಮಾಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ : ಈ ತೋಟಗಾರಿಕೆ ಬೆಳೆಗಳಿಗೆ ಜುಲೈ 31 ರೊಳಗೆ ವಿಮೆ ಮಾಡಿಸಿ ವಿಮೆ ಹಣ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ವರ್ಷ ರೈತರು 14506 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳಿಗೆ 58,72,000 ರೂಪಾಯಿ ಹಣವನ್ನು ಬೆಳೆ ವಿಮೆ ಕಂತು ಕಟ್ಟಿದ್ದರು. ತಾಲೂಕಿನಲ್ಲಿ ಅಧಿಕ ಮಳೆಯಿಂದ ಹೆಚ್ಚು ಬೆಳೆ ಹಾನಿ ಆಗಿತ್ತು. ಇದರಿಂದ ನಮ್ಮ ತಾಲೂಕಿಗೆ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಬೆಳೆ ವಿಮೆ ಹಣ ಜಮೆಯಾಗಿದೆ. ಈ ವರ್ಷವೂ ರೈತರು ವಿಮಾ ಕಂತು ಪಾವತಿ ಮಾಡುವ ಮೂಲಕ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.