ಬೆಳೆ ಹಾನಿ ಪರಿಹಾರ ಹಣ ಯಾವ ಖಾತೆಗೆ ಎಷ್ಟು ಹಣ ಹಾಗೂ ಯಾವಾಗ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ಕೇವಲ ಆಧಾರ್ ಕಾರ್ಡ್ ನಮೂದಿಸಿ ಕಳೆದ ಎರಡು ವರ್ಷಗಳ ಹಿಂದೆ ಹಾಗೂ ಪ್ರಸ್ತುತ ವರ್ಷ ಯಾವ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಇದಕ್ಕಾಗಿ ರೈತರು ಎಲ್ಲಿಯೂ ಹೋಗಬೇಕಿಲ್ಲ. ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಯಾವ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಮೊಬೈಲ್ ನಲ್ಲಿ ಕಳೆದ ಎರಡು ವರ್ಷ ಹಾಗೂ ಪ್ರಸ್ತುತ ವರ್ಷ ಅಂದರೆ 2022-23ನೇ ಸಾಲಿನಲ್ಲಿ ಯಾವ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ Parihara Payment Report ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಆಧಾರ್ ಸಂಖ್ಯೆ ಬಾಕ್ಸ್ ಆಯ್ಕೆ ಮಾಡಿದ ತಕ್ಷಣ ನಿಮಗೆ ಎರಡು ಆಯ್ಕೆಗಳು ಕಾಣುತ್ತವೆ. Select Calamity Type ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ  2022-23 ಆಯ್ಕೆ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಕಳೆದ ವರ್ಷ ಅಂದರೆ 2021-22ನೇ ಸಾಲಿನಲ್ಲಿ ಯಾವ ಬ್ಯಾಂಕಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು 2021-22 ಆಯ್ಕೆ ಮಾಡಿಕೊಳ್ಳಬೇಕು.ಇದೇ ರೀತಿ 2020-21 ನೇ ಸಾಲಿನ ಬೆಳೆ ಹಾನಿ ಪರಿಹಾರ ಜಮೆ ಕುರಿತು ಸಹ ಚೆಕ್ ಮಾಬಹುದು.   Enter Adhar ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ Captcha Fetch details ಬಾಕ್ಸ್ ನಲ್ಲಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನಿಮ್ಮ ಜಿಲ್ಲೆ, ಯಾವ ಬ್ಯಾಂಕ್ ನಲ್ಲಿ ಜಮೆಯಾಗಿದೆ ಎಂಬ ಬ್ಯಾಂಕಿನ ಹೆಸರು ಇರುತ್ತದೆ. ನಂತರ ನಿಮ್ಮ ಹೆಸರು, ತಂದೆಯ ಹೆಸರು ಬ್ಯಾಂಕಿನಲ್ಲಿರುವಂತೆ ನಂತರ ಬ್ಯಾಂಕ್ ಅಕೌಂಟಿನ ಕೊನೆಯ ನಾಲ್ಕು ಅಂಕಿಗಳು ಕಾಣಿಸುತ್ತದೆ. ಪೇಮೆಂಟ್ ಸಕ್ಸೆಸ್ ಆಗಿದ್ದರೆ ಸಕ್ಸೆಸ್ ಎಂಬ ಮೆಸೆಜ್ ಇರುತ್ತದೆ. ಇಲ್ಲದಿದ್ದರೆ ಯಾವ ಕಾರಣಕ್ಕಾಗಿ ನಿಮ್ಮ ಹಣ ತಡೆಹಿಡಿಯಲಾಗಿದೆ ಎಂಬುದನ್ನು ತೋರಿಸಲಾಗಿರುತ್ತದೆ.

ಇದನ್ನೂ ಓದಿ ನಿಮ್ಮ ಜಮೀನು ಯಾವ ವರ್ಷ ನಿಮ್ಮ ಹೆಸರಿಗೆ ವರ್ಗಾವಣೆಯಾಗಿದೆ? ಇಲ್ಲೆ ಚೆಕ್ ಮಾಡಿ ಖಾತಾ ನಂಬರ್, ಮುಟೇಶನ್ ನಂಬರ್

ಯಾವ ದಿನಾಂಕದಂದು ಹಣ ಜಮೆಯಾಗಿದೆ ಎಂಬುದು ಸಹ ಅಲ್ಲಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ನಿಮ್ಮ ಜಮೀನಿನ ಸರ್ವೆ ನಂಬರ್, ಯಾವ ಬೆಳೆ ಹಾಗೂ ಎಷ್ಟು ಎಕರೆಗೆ ಹಣ ಜಮೆ ಮಾಡಲಾಗಿದೆ ಎಂಬುದು ಕಾಣಿಸುತ್ತದೆ.

ಯಾವ ಬೆಳೆಗೆ ಎಷ್ಟು ಬೆಳೆಹಾನಿ ಪರಿಹಾರ ಹಣ ಜಮೆಯಾಗುವುದು?

ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 13600 ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಬೆಳೆಗೆ 25000 ರೂಪಾಯಿ ಹಾಗೂ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ 28000 ರೂಪಾಯಿ ಬೆಳೆ ಹಾನಿಪರಿಹಾರ ಹಣ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಬೆಳೆ ಹಾನಿಯೂ ಯಾವ ಬೆಳೆ ಹಾಳಾಗಿದೆ ಎಂಬ ಆಧಾರದ ಮೇಲೆ ರೈತರ ಖಾತೆಗೆ ಜಮೆ ಮಾಡಲಾಗುವುದು.

Leave a Reply

Your email address will not be published. Required fields are marked *