ಈ ಜಿಲ್ಲೆಗಳ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ

Written by Ramlinganna

Updated on:

Parihara payment report check 2022-23ನೇ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ. ಹೌದು, ಪ್ರಸಕ್ತ 2022-23ನೇ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಭೂಮಿ ತಂತ್ರಾಂಶದಲ್ಲಿ ದಾಖಲಾಗಿರುವವರ ಪೈಕಿ ಕಲಬುರಗಿ ಜಿಲ್ಲೆಯ ರೈತರಿಗೆ  10 ಹಂತಗಳಲ್ಲಿ, ಧಾರವಾಡ ಜಿಲ್ಲೆಯ ರೈತರಿಗೆ 8 ಹಂತಗಳಲ್ಲಿ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ 3239 ರೈತರಿಗೆ 3.30 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಬಿಡುಗಡೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೋಮವಾರ ಅನುಮೋದನೆ ನೀಡಿದ್ದಾರೆ..

ಕಳೆದ ಜುಲೈ- ಆಗಸ್ಟ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 1.70 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯನ್ನು ಜಂಟಿ ಸಮೀಕ್ಷೆ ಮೂಲಕ ಅಂದಾಜಿಸಲಾಗಿತ್ತು. ಬೆಳೆ ಪರಿಹಾರಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಅನುಮೋದನೆ ನೀಡಿದ ಪರಿಹಾರ ಹಣ 2 ದಿನದಲ್ಲಿ ರೈತರ ಖಾತೆಗೆ ಜಮೆ ಆಗಲಿದೆ.

ಇದೀಗ ಅನುಮೋದನೆ ನೀಡಿರುವುದು ಸೇರಿದಂತೆ ಒಟ್ಟಾರೆ 10 ಹಂತದಲ್ಲಿ 2,62,683 ರೈತರಿಗೆ 243.21 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ನೀಡಿದಂತಾಗಿದೆ ಎಂದು ಜಿಲ್ಲಾಧಿಕಾರಿ  ಯಶವಂತ ವಿ. ಗುರುಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Parihara payment report check ನಿಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆಯೇ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಜಮೆಯಾಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಂಡ ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಆಯ್ಕೆ ಮಾಡಿಕೊಂಡು ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2022-23 ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಧಾರವಾಡ ಜಿಲ್ಲೆಯ ರೈತರಿಗೆ 208.31 ಕೋಟಿ ಪರಿಹಾರ ಹಣ ವಿತರಣೆ

ಧಾರವಾಡ ಜಿಲ್ಲೆಯ ರೈತರಿಗೆ ಇಲ್ಲಿಯವರೆಗೆ ಒಟ್ಟು8 ಹಂತಗಳಲ್ಲಿ 1,25,541 ರೈತ ಫಲಾನುಭವಿಗಳಿಗೆ ಒಟ್ಟು 208.31 ಕೋಟಿ ರೂಪಾಯಿ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2022ರ ಸೆಪ್ಟೆಂಬರ್ 7 ರಂದು 2049 ರೈತ ಫಲಾನುಭವಿಗಳಿಗೆ 3.91 ಕೋಟಿ ರೂಪಾಯಿಜಮೆ ಮಾಡಲಾಗಿತ್ತು. ಅದೇ ರೀತಿ ಸೆಪ್ಟೆಂಬರ್ 15 ರಂದು 18538 ಫಲಾನುಭವಿಗಳಿಗೆ 34.53 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಸೆಪ್ಟೆಂಬರ್ 22 ರಂದು 15608 ರೈತರಿಗೆ 27.27 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿತ್ತು. ಅಕ್ಟೋಬರ್ 12 ರಂದು29987 ಫಲಾನುಭವಿಗಳಿಗೆ 50.59 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಅಕ್ಟೋಬರ್ 14 ರಂದು 30787 ರೈತ ಫಲಾನುಭವಿಗಳಿಗೆ 50.23 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿತ್ತು. ಅಕ್ಟೋಬರ್ 29 ರಂದು 13108 ಫಲಾನುಭವಿಗಳಿಗೆ 20.83 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ ಈ ಗ್ರೀನ್ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಸಾಲಮನ್ನಾ: ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ನವೆಂಬರ್ 10 ರಂದು 8626 ರೈತ ಫಲಾನುಭವಿಗಳಿಗೆ 12.34 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಜನವರಿ 6 ರಂದು 5806 ರೈತ ಫಲಾನುಭವಿಗಳಿಗೆ 8.59 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಹೀಗೆ ಒಟ್ಟು 8  ಹಂತಗಳಲ್ಲಿ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ  ಜಮೆ ಮಾಡಲಾಗಿದೆ. ಇನ್ನುಳಿದ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರವನ್ನು ಹಂತ ಹಂತವಾಗಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment