ಈ ರೈತರ ಖಾತೆಗಳಿಗೆ ಬರ ಪರಿಹಾರ ಜಮೆ: ಚೆಕ್ ಮಾಡಿ

Written by Ramlinganna

Updated on:

Parihara payment ಎರಡು ದಿನಗಳೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023-24ನೇ ಸಾಲಿನ  ಮುಂಗಾರು ಹಂಗಾಮಿನಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ಆರು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಬೆಳೆ ನಷ್ಟದ ಮಾಹಿತಿಯು ಭೂಮಿ ಪರಿಹಾರ ತಂತ್ರಾಂಶದ ಮೂಲಕ ಅನುಮೋದನೆ ನೀಡಲಾಗಿದೆ.

1 ನೇ ಮತ್ತು 2 ನೇ ಹಂತದಲ್ಲಿ ಒಟ್ಟು 36,130 ರೈತ ಫಲಾನುಭವಿಗಳಿಗೆ 7,11,57,819 ಕೋಟಿ ರೂಪಾಯಿಗಳು ಸರ್ಕಾರದ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ.

ಸದರಿ ಇನ್ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆಗೆ ಜೋಡಣೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಅನುಮೋದನೆ ನೀಡಲಾಗಿದೆ. ಸದರಿ ಇನ್ಪುಟ್ ಸಬ್ಸಿಡಿ 2 ದಿನದ ಒಳಗಡೆ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Parihara payment ಬರ ಪರಿಹಾರ ಜಮೆಯ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು?

ಬರ ಪರಿಹಾರ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಸಂಖ್ಯೆ ಆಯ್ಕೆ ಮಾಡಿ, ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. 2023-24 ಆಯ್ಕೆ ಮಾಡಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಯಾವ ರೈತರಿಗೆ ಬರಗಲಾ ಪರಿಹಾರ ಹಣ ಜಮೆಯಾಗಲಿದೆ?

ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ  ಯಾವ ಯಾವ ರೈತರು ಎಫ್ಐಡಿ ಮಾಡಿಸಿದ್ದಾರೋ ಆ ರೈತರಿಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ.  ಹೌದು, ಬರಗಾಲ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲು ಎಫ್ಐಡಿ ಮಾಡಿಸುವುದು ಕಡ್ಡಾಯವಾಗಿದೆ.

:ಎಫ್ಐಡಿ ಮಾಡಿಸದೆ ಇರುವ ರೈತರಿಗೆಬೆಳೆ ಹಾನಿ, ಬೆಳೆ ವಿಮೆ ಪರಿಹಾರ ಹಣ ಜಮೆಯಾಗುವ ಸಾಧ್ಯತೆ ತುಂಬ ಕಡಿಮೆ ಇರುತ್ತದೆ. ಈಗಲೂ ರೈತರು ಎಫ್ಐಡಿ ಮಾಡಿಸಿಕೊಳ್ಳಬಹುದು.

ರೈತರ ಎಫ್ಐಡಿ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಅಂದರೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಒಂದು ವೇಳ ನಿಮ್ಮ ಹೆಸರಿಗೆ ಎಫ್ಐಡಿ ಆಗದೆ ಇದ್ದರೆ ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ನಿಮ್ಮ ಆಧಾರ್ ಕಾರ್ಡ್. ಜಮೀನಿನ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ದಾಖಲೆಗಳನ್ನು ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.

ಯಾವ ಬೆಳೆಗೆ ಎಷ್ಟು ಬರಗಾಲ ಪರಿಹಾರ ಹಣ ಜಮೆಯಾಗುವುದು?

ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಶೇ. 33 ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರ್ಣಕ್ಕೆ ಪ್ರತಿ ಹೆಕ್ಟೇರ್ ಗೆ ಪರಿಹಾರ ನಿಗದಿ ಮಾಡಲಾಗುವುದು.

ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ 8500 ರೂಪಾಯಿ, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್  ಗೆ 17 ಸಾವಿರ ರೂಪಾಯಿ ನಿಗದಿ ಮಾಡಲಾಗಿದೆ. ಅದೇ ರೀತಿ ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ ಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.  ಸದ್ಯ ರೈತರಗೆ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಬರ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು  ತಿಳಿಸಿದ್ದಾರೆ. ಹಾಗಾಗಿ ಈಗ ರೈತರ ಖಾತೆಗೆ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿಹಣಜಮೆ ಮಾಡಲಾಗುತ್ತಿದೆ.

ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ                  

ರೈತರಗೆ ಮೊದಲ ಹಂತದಲ್ಲಿ 2 ಸಾವಿರ ರೂಪಾಯಿಯವರಗೆ ನೀಡಲು ಘೋಷಿಸಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿಬಿಟಿ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಪರಿಹಾರ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸೂಚನೆ ನೀಡಿದ್ದಾರೆ.

Leave a Comment