ಈ ವಾರದೊಳಗೆ ರೈತರ ಖಾತೆಗೆ ಬರ ಪರಿಹಾರ ಜಮೆ

Written by Ramlinganna

Updated on:

Parihara Payments : ಕೇಂದ್ರ ಸರ್ಕಾರ ರಾಜ್ಯಕ್ಕೆ 18172 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಬೇಕಿತ್ತು. ಆದರೆ ಶೇ. 20 ರಷ್ಟು  ಹಣವನ್ನು ಮಾತ್ರ ಬಿಡುಗಡೆ ಮಾಡುವ ಮೂಲಕ ರೈತರಿಗೆ ಮತ್ತೊಮ್ಮೆ ಅನ್ಯಾಯ ಮಾಡಿದೆ. ಈ ಹಣವನ್ನು 1 ವಾರದಲ್ಲಿ ರೈತರ ಖಾತೆಗೆ ವರ್ಗಾಯಿಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಕರ್ನಾಟಕ ವಿಪರೀತ ಬರಗಾಲ ಎದುರಿಸಿದ್ದಲ್ಲದೆ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಕೇಂದ್ರ ತಂಡ ಕೂಡ ಕರ್ನಾಟಕಕ್ಕೆ ಬಂದು ಅಧ್ಯಯನ ನಡೆಸಿತ್ತು. ಆದರೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿ, ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗೆ ಸಂಬಂಧಿಸಿ, ಕೇಂದ್ರ ಅಟಾರ್ನಿ ಜನರಲ್ (ಎಜಿ) ಸುಪ್ರಿಂಕೋರ್ಟ್ ಗೆ ಅಧಿಕೃತ ಹೇಳಿಕೆ ನೀಡಿರುವುದರಿಂದ ಕೇಂದ್ರದಿಂದ ಪರಿಹಾರ ಪ್ರಮಾಣ ಪ್ರಕಟವಾಗುವ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ

ಚುನಾವಣಾ ನೀತಿ ಸಂಹಿತಿ ಜಾರಿಯಾದ ಬಳಿಕ ಅನುದಾನ ಬಿಡುಗಡೆ ಅಥವಾ ಯೋಜನೆಗಳ ಬಗ್ಗೆ ಸರ್ಕಾರಗಳು ಯಾವುದೇ ಘೋಷಣೆ ಮಾಡುವಂತಿಲ್ಲ.  ಹೀಗಾಗಿ ಕೇಂದ್ರ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚೆ ನಡೆಸಿದ ಬಳಿಕ ಈ ಹೇಳಿಕೆಯನ್ನು ಸುಪ್ರಿಂ ಕೋರ್ಟ್ ಮುಂದಿಟ್ಟಿದೆ. ಚುನಾವಣೆ ಘೋಷಣೆಗೆ ಮುನ್ನವೇ ಕೇಂದ್ರ ಸರ್ಕಾರ ಪರಿಹಾರಕ್ಕೆ ಸಂಬಂಧಿಸಿದ ಕ್ರಮ ಕೈಗೊಂಡಿದ್ದರೆ, ಸುಪ್ರಿಂಕೋರ್ಟ್  ಮೆಟ್ಟಲೇರುವ ಅಗತ್ಯವೇ ಇರುತ್ತಿರಲಿಲ್ಲ ಮತ್ತು ನೀತಿ ಸಂಹಿತೆಯ ನೆಪವೊಡ್ಡುವ ಸನ್ನಿವೇಶವೂ ಸೃಷ್ಟಿಯಾಗುತ್ತಿರಲಿಲ್ಲ ಎಂದು ರಾಜ್ಯದ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಸುಮಾರು 17 ಸಾವಿರ ಕೋಟಿ ರೂಪಾಯಿ ಪರಿಹಾರದ ಬೇಡಿಕೆಯನ್ನು ರಾಜ್ಯ ಕೇಂದ್ರದ ಮುಂದಿಟ್ಟಿದೆ.

Parihara Payments ಬರ ಪರಿಹಾರ ಎಷ್ಟು ಪರಿಹಾರ ಕೇಳಿದೆ?

18177 ಕೋಟಿ ಪರಿಹಾರ ರಾಜ್ಯ ಸರ್ಕಾರ ಕೇಳಿತ್ತು. ಇದರಲ್ಲಿ 4663 ಕೋಟಿ ರೂಪಾಯಿ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಬಿಡುಗಡೆ ಮಾಡಬೇಕಿತ್ತು. ಇಷ್ಟೂ ಹಣ ಬಂದರೆ ರೈತರಿಗೆ ಹೆಚ್ಚು ಬರ ಪರಿಹಾರ ದೊರೆಯಲಿದೆ ಎಂದು ಹೇಳಿದರು.

ಬರ ಪರಿಹಾರ

ರಾಜ್ಯಕ್ಕೆ ನೀಡಬೇಕಿದ್ದ18177 ಕೋಟಿ ರೂಪಾಯಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ನರೇಂದ್ರ ಮೋದಿ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಲ್ಲಿ ಮುಖಭಂಗವಾಗಿದೆ. ಆ ಮೂಲಕ ಪ್ರಧಾನ ಮಂತ್ರಿಗಳು ಗೃಹ ಮಂತ್ರಿಗಳ ರೈತ ವಿರೋಧಿ ನಿಲುವಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ.

– ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ

ರಾಜಕೀಯ ಲಾಭ ಪಡೆವ ಉದ್ದೇಶವಿಲ್ಲ

ರಾಜ್ಯ ಸರ್ಕಾರದ ಹೋರಾಟಕ್ಕೆ ಸಂದ ಜಯ ಇದಾಗಿದೆ. ಕರ್ನಾಟಕಕ್ಕೆ ಬರಬೇಕಿದ್ದ ಪರಿಹಾರವನ್ನು ಕೋರ್ಟ್ ಮೂಲಕ ಪಡೆಯುವಂತಾಯಿತು. ಚುನಾವಣೆ ಹೊತ್ತಲ್ಲಿ ಬರ ಪರಿಹಾರ ಬಿಡುಗಡೆ ಮಾಡಿ ಅದರ ಲಾಭ ಪಡೆಯುವ ಉದ್ದೇಶ ನಮಗಿಲ್ಲ. ನಮಗೆ ರೈತರು ಮುಖ್ಯ ಹೊರತು ರಾಜಕೀಯ ಅಲ್ಲ.

ಕೃಷ್ಣಭೈರೇಗೌಡ- ಕಂದಾಯ ಸಚಿವ

 

Leave a Comment