72 ಗಂಟೆಯಲ್ಲಿ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ

Written by Ramlinganna

Updated on:

Pension will arrive within 72 hours ಹಲೋ ಕಂದಾಯ ಸಚಿವರೇ ಎಂದು ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ. ಹೌದು, ರಾಜ್ಯ ಸರ್ಕಾರವು ಈಗ ಪಿಂಚಣಿ ಸೌಲಭ್ಯವನ್ನು ಮನೆಬಾಗಿಲಿಗೆ ತಲುಪಿಸುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಿದೆ. ಇಂದು ಪಿಂಚಣಿ ಸೌಲಭ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.

ಈಗ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಇಂದು ನಾಳೆ ಎಂದು ಸುತ್ತಾಡಬೇಕಿಲ್ಲ. ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಕರೆ ಮಾಡಿದರೆ ಸಾಕು, 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ ಸೌಲಭ್ಯ.

Pension will arrive within 72 hours ಪಿಂಚಣಿ ಸೌಲಭ್ಯ ಪಡೆಯಲು ಏನು ಮಾಡಬೇಕು?

ನಾಗರಿಕರು ಶುಲ್ಕರಹಿತ ಟಾಲ್ ಫ್ರೀ ನಂಬರ್ 155245 ಗೆ ಉಚಿತವಾಗಿ ದೂರವಾಣಿ ಕರೆ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು. ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆಬಾಗಿಲಿಗೆ ಭೇಟಿ ನೀಡಿ ನವೋದಯ ಮೊಬೈಲ್ ಆ್ಯಪ್  ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ ಮಾಡಲಾಗುವುದು.

ಯಾವ ಯಾವ ದಾಖಲೆ ಸಲ್ಲಿಸಬೇಕು?

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಸಲ್ಲಿಸಬೇಕು. ಬ್ಯಾಂಕ್ ಅಥವಾ ಅಂಚೆ ಖಾತೆ ಪಾಸ್ ಬುಕ್ ಪ್ರತಿ ನೀಡಬೇಕು. ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ) ನೀಡಬೇಕು. ಮೊಬೈಲ್ ಆ್ಯಪ್ ಮೂಲಕ ನಾಗರಿಕರ ಭಾವಚಿತ್ರ ತೆಗೆದುಕೊಳ್ಳಲಾಗುವುದು.

ಪಿಂಚಣಿ ಸೌಲಭ್ಯ ಪಡೆಯಲು ಯಾರು ಅರ್ಹರು?

ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಕಡಿಮೆಯಿರುವ 60 ವರ್ಷ ಮೇಲ್ಪಟ್ಟವರು, ವಿಧವೆಯರು, ವಿಚ್ಛೇದಿತ ಮಹಿಳೆಯರು, ವಿಶೇಷ ಚೇತನರು, ಮಾಸಿಕ ಪಿಂಚಣಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಶೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ ನೀಡಲಾಗುವುದು. ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಾಲಗುವುದು.

ಏನಿದು ಮನೆಬಾಗಿಲಿಗೆ ಪಿಂಚಣಿ?

ಕಂದಾಯ ಇಲಾಖೆಯು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ, ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆಗಳು ಕಾರ್ಯಕ್ರಮಗಳ ಮೂಲಕ ನಾಗರಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ನೇರವಾಗಿ ಹಂಚಿಕೊಳ್ಳಲು ಮತ್ತು ತಾವಿರುವಲ್ಲಿಯೇ ದಾಖಲೆಗಳನ್ನುಪಡೆಯುವ ಮತ್ತು ಸ್ವಾವಲಂಬಿ ಮೊಬೈಲ್ ಆ್ಯಪ್ ಮೂಲಕ ತಮ್ಮ ಸ್ವಂತಖಾಸಗಿ ಜಮೀನಿನ ನಕ್ಷೆಯನ್ನು ಸ್ವಯಂ ಸರ್ವೆ ಮಾಡಿಕೊಳ್ಳುವ ಕಲ್ಪಿಸಿದೆ.ಈಗ ಇದೇ ರೀತಿ ಮನೆಬಾಗಿಲಿಗೆ ಪಿಂಚಣಿ ಯೋಜನೆಯಡಿ ದೂರವಾಣಿ ಮೂಲಕ ಪಿಂಚಣಿ ಕೋರಿಕೆ ಸ್ವೀಕರಸಿ 72 ಗಂಟೆಯಲ್ಲಿ ಪಿಂಚಣಿ ಮಂಜೂರಾತಿ ಮಾಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕೇಂದ್ರ ಸರ್ಕಾರ ಪ್ರಾಯೋಜಿತಎನ್.ಎಸ್.ಎ.ಪಿ ಯೋಜನೆಯಡಿ ವೃದ್ಧರು, ವಿಶೇಷ ಚೇತನರು, ವಿಧವೆಯರು ಸೇರಿದಂತೆ ಒಟ್ಟು13.98 ಲಕ್ಷ ಫಲಾನುಭವಿಗಳು ನೇರ ನಗದು ವರ್ಗಾವಣೆ ಮೂಲಕ ಮಾಸಿಕ ಪಿಂಚಣಿ ಸೌಲಭ್ಯನೀಡಲಾಗುತ್ತಿದೆ. ಈಗ ಹೊಸದಾಗಿ ಪಿಂಚಣಿ ಸೌಲಭ್ಯ ಪಡೆಯುವವರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಯಾವ ಅಧಿಕಾರಿಗಳ ಮುಂದೆ ಕೈಚಾಚಿ ನಿಲ್ಲಬೇಕಿಲ್ಲ.ಸರತಿಯಲ್ಲಿ ನಿಲ್ಲಬೇಕಿಲ್ಲ.  ನಾಗರಿಕರ ಮನೆ ಬಾಗಿಲಿಗೆ ಅಧಿಕಾರಿಗಳು ಬಂದು ಪಿಂಚಣಿ ಸೌಲಭ್ಯ ಕಲ್ಪಿಸುವರು.ಇದಕ್ಕಾಗಿ ನಾಗರಿಕರು ಹಲೋ ಕಂದಾಯ ಸಚಿವರೇ ಎಂಬ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು, 72 ಗಂಟೆಯೊಳಗೆ ನಾಗರಿಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಿಕೊಡುವರು.

ಹೆಚ್ಚಿನ ಮಾಹಿತಿಗಾಗಿನಾಗರಿಕರು ತಮ್ಮ ವ್ಯಾಪ್ತಿಯ ತಾಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು.

Leave a Comment