ಈ list ನಲ್ಲಿದ್ದವರಿಗೆ ಪ್ಲಾಟ್ ಪಕ್ಕಾ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Plot purchase beneficiary list ಪ್ಲಾಟ್ ಖರೀದಿಗೆ ಅರ್ಜಿ ಸಲ್ಲಿಸಿದವರೆಗೆ ಸಂತಸದ ಸುದ್ದಿ. ಪ್ಲಾಟ್ ಖರೀದಿಗೆ ಅರ್ಜಿ ಸಲ್ಲಿಸಿದವರ ಅರ್ಹ ಮತ್ತು ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಹೌದು, 2019 -20 ರಿಂದ 2023-24ನೇ ಸಾಲಿನವರೆಗೆ ಅನುಷ್ಠಾನಗೊಳ್ಳಲಿರುವ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 2023-24ನೇ ಸಾಲಿಗಾಗಿ ಪರಿಶಿಷ್ಟ ಜಾತಿಯ ಪೌರ ಕಾರ್ಮಿಕರು, ಖಾಯಂ / ಗುತ್ತಿಗೆ / ಲೋಡರ್ಸ್ / ಡ್ರೈವರ್/ ಸಫಾಯಿ ಕರ್ಮಚಾರಿ / ಸ್ಕ್ಯಾವೆಂಜರ್ಸ್ ಗಳಿಗೆ ನಿವೇಶನ ಖರೀದಿಗಾಗಿ ಸಹಾಯಧನಕ್ಕೆ ಸಂಬಂಧಿಸಿದಂತೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ನೋಟಿಸ್ ಬೋರ್ಡ್ ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು 2024 ರ ಜನವರಿ 17 ರಿಂದ 31 ರವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಜನವರಿ 31 ರೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಹಿಂದೆ ಸದರಿ ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 14 ರಿಂದ 2024 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತೆಂದು ಅವರು ತಿಳಿಸಿದ್ದಾರೆ.

Plot purchase beneficiary list ಮನೆ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

2021-22ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅಡಿಯಲ್ಲಿ  ಪಕ್ಕಾ ಮನೆ ನಿರ್ಮಾಣಕ್ಕಾಗಿ ಸಹಾಯಧನ ಸೇರಿದಂತೆ ಇತರ ಯೋಜನೆಗಳಡಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (ಎಂ.ಜಿ.ನ.ವಿ.ವೈ) ಅನುಮೋದಿತ ಕ್ರಿಯಾ ಯೋಜನೆ ಹಾಗೂ ಎಸ್.ಎಫ್.ಸಿ ಮುಕ್ತ ನಿಧಿ ಯೋಜನೆಯಡಿ ನಿಗದಿಪಡಿಸಿದ ವಿವಿಧ ಯೋಜನೆಗಳಿಗೆ ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2023-24 ನೇ ಸಾಲಿಗೆ ಸೌಲಭ್ಯ ಪಡೆಯಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

2021-22ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಪಕ್ಕಾ ಮನೆ ನಿರ್ಮಾಣಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಈ ಮೊದಲು ಮಹಾನಗರ ಪಾಲಿಕೆಯ ಅಥವಾ ಸರ್ಕಾರದ ವಿವಿಧ ಯೋಜನೆಯ ಸಹಾಯಧನ ಪಡೆದವರು ಪುನಃ ಸಹಾಯಧನಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ರ ಶಾಖೆಯಿಂದ 2024ರ ಜನವರಿ 25 ರ ಸಂಜೆ 5.30 ಗಂಟೆಯೊಳಗಾಗಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಜನವರಿ 30 ರ ಸಂಜೆಯ 4.30 ಗಂಟೆಯೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪಾಲಿಕೆಯ ಕಚೇರಿಯ ಶೇ. 24.10 ಶಾಖೆಯನ್ನು ಹಾಗೂ

www.kalburagicity.gov.in

ವೆಬ್ಸೈಟ್ ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ಲಾಟ್ ಖರೀದಿಗೆ ಅರ್ಜಿ ಸಲ್ಲಿಸಿದವರು ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ನಂತರ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಕಾಲಾವಿಕಾಶವಿದೆ. ಅರ್ಹರಾಗಿದ್ದರೆ ನೀವು ಕೂಡಲೇ ಅರ್ಜಿ ಸಲ್ಲಿಸಿ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದು.

ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಯಾರಿಗೆ ಮನೆಯಿಲ್ಲವೋ ಅಂತಹವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡುವರು. ಸರಿಯಾದ ದಾಖಲೆ ಹೊಂದಿರುವ ಹಾಗೂ ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ಲಾಟ್ ಖರೀದಿಸಲು ಸಬ್ಸಿಡಿ ನೀಡಲಾಗುವುದು.

Leave a Comment