ಪಿಎಂ ಕಿಸಾನ್ ರೈತರ 13ನೇ ಕಂತಿನ ಪಟ್ಟಿ ಬಿಡುಗಡೆ

Written by Ramlinganna

Updated on:

Pm kisan 13th installment  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್. ಹೌದು, ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆಯಾಗಲಿದೆ. ಆದರೆ ಈಗ ಇಕೆವೈಸಿ ಕಡ್ಡಾಯಗೊಳಿಸಿದ್ದರಿಂದ ಬಹಳಷ್ಟು ರೈತರ ಹೆಸರನ್ನು ಕೈಬಿಡಲಾಗಿತ್ತು. ಈಗ 13ನೇ ಕಂತಿನ ಹಣ ಯಾವಯಾವ ರೈತರ ಖಾತೆಗೆ ಜಮೆಯಾಗಲಿದೆ ಎಂಬುದರ ಪಟ್ಟಿ ಬಿಡುಗಡೆಯಾಗಿದೆ.

Pm kisan 13th installment  13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಮನೆಯಲ್ಲಿಯೇ ಕುಳಿತು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ  ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ  ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು Submit ಆಯ್ಕೆ ಮಾಡಿಕೊಳ್ಳಬೇಕು.  ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು Aadhaar Authentication Status ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿಕಾಣುವ Successfully Authenticated  ಲಿಸ್ಟ್ ನಲ್ಲಿರುವ ರೈತರಿಗೆ ಮಾತ್ರ  13ನೇ ಕಂತಿನ ಹಣ ಜಮೆಯಾಗುತ್ತದೆ.

ಒಂದು ವೇಳೆ ನಿಮ್ಮ ಹೆಸರು ಆ ಲಿಸ್ಟ್ ನಲ್ಲಿ ಇಲ್ಲದಿದ್ದರೆ ಕೂಡಲೇ ನೀವು ಇಕೆವೈಸಿ ಮಾಡಿಸಿಕೊಳ್ಳಬೇಕು. ಒಂದು ವೇಳೆ ಇಕೆವೈಸಿ ಮಾಡಿಸಿದ ನಂತರವೂ ಅಲ್ಲಿ ನಿಮ್ಮ ಹೆಸರು ಕಾಣದಿದ್ದರೆ ಇಕೆವೈಸಿ ಸಕ್ಸೆಸ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.

ಇದನ್ನೂ ಓದಿ ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಈ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ

ಇಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿದ್ದ ನಂತರವೂ ಲಿಸ್ಟ್ ನಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಮೀನಿನ ಪಹಣಿ ಈ ಮೂರು ದಾಖಲೆಗಳೊಂದಿಗೆ ಗ್ರಾಮ ಒನ್, ಬೆಂಗಳೂರು ಒನ್, ಸಿ.ಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಇಕೆವೈಸಿ ಮಾಡಿಸಿಕೊಳ್ಳಬೇಕು.  ರೈತರು ಮೊಬೈಲ್ ನಲ್ಲಿಯೂ ಇಕೆವೈಸಿ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ ನಿಜವಾದ ಫಲಾನುಭವಿಗಳಿಗೆ ಇಕೆವೈಸಿ ಏಕೆ ಕಡ್ಡಾಯಗೊಳಿಸಲಾಗಿದೆ?

ಪಿಎಂ ಕಿಸಾನ್ ಯೋಜನೆಯನ್ನು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವಾಗಲೆಂದು ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ ಪಿಎಂ ಕಿಸಾನ್ ಯೋಜನೆಗೆ ಅರ್ಹತೆಯಿಲ್ಲದವರೂ ಸಹ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಈಗ ನಿಜವಾದ ಫಲಾನುಭವಿಗಳಿಗೆ ಈ ಸೌಲಭ್ಯ ಸಿಗಲೆಂದು ಇಕೆವೈಸಿ ಕಡ್ಡಾಯಗೊಳಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ13ನೇ ಕಂತು ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಫೆಬ್ರವರಿ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಪ್ರತಿ ವರ್ಷ ನೀಡಲಾಗುವ  6 ಸಾವಿರ ರೂಪಾಯಿಯನ್ನು ಫೆಬ್ರವರಿ ತಿಂಗಳಿನಿಂದ 8 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ. ಒಂದು ವೇಳೆ ಪಿಎಂ ಕಿಸಾನ್ ಹಣವನ್ನು 8 ಸಾವಿರಕ್ಕೆ ಹೆಚ್ಚಿಸಿದರೆ ರೈತರಿಗೆ ಪ್ರತಿ ಮೂರು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟು ನಾಲ್ಕು ಕಂತುಗಳಲ್ಲಿ ವರ್ಷದಲ್ಲಿ 8 ಸಾವಿರ ರೂಪಾಯಿ ಜಮೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ

ರೈತರಿಗೆ ಈಗಿರುವ 6 ಸಾವಿರ ರೂಪಾಯಿ ಸಿಗುತ್ತೋ ಅಥವಾ 8 ಸಾವಿರಕ್ಕೆ ಹೆಚ್ಚಿಸಲಾಗುವುದೋ ಎಂಬುದು ಫೆಬ್ರವರಿ 1 ರಂದು ಮಂಡನೆಯಾಗುವ ಕೇಂದ್ರ ಬಜೆಟ್ ನಲ್ಲಿ ಗೊತ್ತಾಗುವುದು.

Leave a Comment