8 ಕೋಟಿ ರೈತರಿಗೆ ಪಿಎಂ ಕಿಸಾನ್ ಹಣ ಜಮೆ

Written by Ramlinganna

Updated on:

Pmkisan 4th installment status ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಇದು ರೈತರ ಖಾತೆಗೆ ಜಮೆಯಾಗಿದೆ. ಯಾರಿಗೆ ಜಮೆಯಾಗಿದೆ ಯಾರಿಗೆ ಜಮೆಯಾಗಿಲ್ಲ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು 17,000 ಕೋಟಿ ರೂಪಾಯಿಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು (ಗುರುವಾರ) ಬಿಡುಗಡೆ ಮಾಡಿದ್ದಾರೆ.

ಈ ನಿಧಿಯು ಒಟ್ಟು 8.5 ಕೋಟಿ ರೈತರಿಗೆ ಪಿಎಂ ಕಿಸಾನ್ ಹಣ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕಂತು ಪೂರ್ಣ ಬಿಡುಗಡೆ ಮೂಲಕ ಒಟ್ಟು ಬಿಡುಗಡೆಯಾದ ಮೊತ್ತ 2.59 ಲಕ್ಷ ಕೋಟಿ ರೂಪಾಯಿಗೆ ತಲುಪಲಿದೆ. ಈ ಪೈಕಿ ಒಬ್ಬ ರೈತರಿಗೆ 2000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

Pmkisan 4th installment status ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಮನೆಯಲ್ಲಿಯೇ ಕುಳಿತು ಪಿಎಂ ಕಿಸಾನ್ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Get Data ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ನಿಮ್ಮ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ know your Registration no ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ನೋಂದಣಿ ಸಂಖ್ಯೆ ಪಡೆದಕೊಂಡು ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಯಾರಿಗೆ ಜಮೆಯಾಗುತ್ತದೆ ಯಾರಿಗೆ ಜಮೆಯಾಗಲ್ಲ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಈ ಸಲ ಇಕೆವೈಸಿ ಮಾಡಿದವರಿಗೆ ಮಾತ್ರ ಜಮೆಯಾಗುತ್ತದೆ. ಇಕೆವೈಸಿಯೊಂದಿಗೆ ಸ್ಟೇಟಸ್ ಪೇಜ್ ನಲ್ಲಿ ಲ್ಯಾಂಡ್ ಸೀಡಿಂಗ್ ಯಸ್ ಇರಬೇಕು. ಅಂದರೆ ಜಮೀನಿನ ದಾಖಲೆಗಳು ಸರಿಯಾಗಿ ಅಪ್ಲೋಡ್ ಆಗಿರಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಪಡೆಯುವವರ ಫಲಾನುಭವಿಗಳ ಕುಟುಂಬದಲ್ಲಿ ಪತಿ, ಪತ್ನಿ ಅಥವಾ ತಮ್ಮ ಮಕ್ಕಳು  ಸರ್ಕಾರಿ ನೌಕರರು, ಪಿಂಚಣಿ ಪಡೆಯುವವರಾಗಿದ್ದರೆ ಅವರಿಗೆ  ಜಮೆಯಾಗುವ ಸಾಧ್ಯತೆ ಕಡಿಮೆಯಿರುತ್ತದೆ. ರೈತರ ಹೆಸರಿನಲ್ಲಿ ಜಮೀನು ಇರದಿದ್ದರೆ ಅವರಿಗೆ ಜಮೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ.

ರೈತರೊಂದಿಗೆ ಪಿಎಂ ಸಂವಾದ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಬಿಡುಗಡೆ ಕಾರ್ಯಕ್ರಮದಲ್ಲಿ ದೇಶದ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಆನ್ಲೈನ್ ಮೂಲಕ ನೋಂದಣಿ ಮಾಡಿಸಿದ ರೈತರು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ? ಈ ನಂಬರಿಗೆ ಕರೆ ಮಾಡಿ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಇಂದು ನಿಮಗೇಕೆ ಜಮೆಯಾಗಿಲ್ಲವೆಂಬುದರ ಕುರಿತು ವಿಚಾರಿಸಲು 155261 ಅಥವಾ 011 24300606 ಗೆ ಕರೆ ಮಾಡಬಹುದು.

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಕೆಲವು ರೈತರಿಗೇಕೆ ಜಮೆಯಾಗುತ್ತಿಲ್ಲ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಆರಂಭದಲ್ಲಿ ಹಣ ಜಮೆಮಾಡಲಾಗುತ್ತಿತ್ತು. ಆದರೆ ಇಕೆವೈಸಿಯನ್ನು ಕಡ್ಡಾಯಗೊಳಿಸಿದ ನಂತರ ಬಹುತೇಕ ರೈತರಿಗೆ ಯೋಜನೆ ಹಣ ಜಮೆಯಾಗುವುದನ್ನು ತಡೆಹಿಡಿಯಲಿದೆ. ದಾಖಲಾತಿಗಳ ಪರಿಶೀಲನೆ ಮಾಡಲಾಗುತ್ತಿದ್ದರಿಂದ ಕೆಲವು ದಾಖಲಾತಿಗಳಲ್ಲಿ ಫಲಾನುಭವಿಗಳ ವಿವರ ತಪ್ಪು ಹಾಗೂ ಹೊಂದಾಣಿಕೆಯಾಗದೆ ಇರುವುದರಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ.

Leave a Comment