ಪಿಎಂ ಕಿಸಾನ್ 15 ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ

Written by Ramlinganna

Updated on:

ಪಿಎಂ ಕಿಸಾನ್ ಫಲಾನಭವಿಗಳಿಗಿಲ್ಲಿದೆ ಗುಡ್ ನ್ಯೂಸ್.  ಪಿಎಂ ಕಿಸಾನ್ ಯೋಜನೆಯ ( Pmkisan 15th beneficiary list ) 15ನೇ ಕಂತಿನ ಫಲಾನುಭವಿಗಳ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ.

ಹೌದು  ರೈತರು ಮನೆಯಲ್ಲಿಯೇ ಕುಳಿತು ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರಿಗೆ ಈಗಾಗಲೇ ಜುಲೈ ತಿಂಗಳಲ್ಲಿ 14ನೇ ಕಂತು ಜಮೆ ಮಾಡಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆಈ ಹಣ ಜಮೆ ಮಾಡಲಾಗುತ್ತಿದೆ. ಹಾಗಾಗಿ ನವೆಂಬರ್ ತಿಂಗಳಲ್ಲಿ ಹಣ ಜಮೆಯಾಗುವ ಸಾಧ್ಯತೆಯಿದೆ.

ಕಳೆದ ಐದಾರು ತಿಂಗಳುಗಳಿಂದ ಇಕೆವೈಸಿ ಮಾಡಿಸುವುದು ಕಡ್ಡಾಯವೆಂದು ಕೃಷಿ ಇಲಾಖೆ ಪತ್ರಿಕೆ ಪ್ರಕಟಣೆಗಳ ಮೂಲಕ ಹಲವಾರು ಬಾರಿ ಮನವಿ ಮಾಡಿತ್ತು. ಕಾರ್ಯಕ್ರಮಗಳಲ್ಲಿಯೂ ಸಹ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ರೈತರಲ್ಲಿ ಮನವಿ ಮಾಡಲಾಗಿತ್ತು. ಇದರಿಂದಾಗಿ ಬಹುತೇಕ ರೈತರು ಇಕೆವೈಸಿ ಮಾಡಿಸಿದ್ದಾರೆ. ಆದರೂ ಇನ್ನೂ ಹಲವಾರು ರೈತರು ಇಕೆವೈಸಿ ಮಾಡಿಸಿಲ್ಲ. ಮುಂದಿನ ಕಂತು ಜಮೆಯಾಗಬೇಕಾದರೆ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

Pmkisan 15th beneficiary list ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಫಲಾನುಭವಿಗಳ ಹೆಸರು ಚೆಕ್ ಮಾಡಲು ಈ ಲಿಂಕ್

https://pmkisan.gov.in/Rpt_BeneficiaryStatus_pub.aspx

ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನೀವು Get Report ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Crop loan ಈ ಪಟ್ಟಿಯಲ್ಲಿದ್ದವರಿಗೆ ಮಾತ್ರ ಬೆಳೆ ಸಾಲ ಮನ್ನಾ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ನೀವು ಆಯ್ಕೆ ಮಾಡಿಕೊಂಡ ಗ್ರಾಮದಲ್ಲಿ ಯಾವ ಯಾವ ರೈತರು ನೋಂದಣಿ ಮಾಡಿಸಿದ್ದಾರೆ ಅವರ ಹೆಸರು ಕಾಣಿಸುತ್ತದೆ.

ಮೊಬೈಲ್ ನಲ್ಲೇ ಚೆಕ್ ಮಾಡಿ ಇಕೆವೈಸಿ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ತಮ್ಮಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಏಕೆಂದರೆ ನೀವು ಇಕೆವೈಸಿ ಮಾಡಿಸಿದರೆ ಮಾತ್ರ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ. ಹಾಗಾದರೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ ನಿಮ್ಮ ಇಕೆವೈಸಿ ಸಕ್ಸೆಸಫುಲಿ ಆಗಿದೆ ಎಂಬ ಮೆಸೆಜ್ ಕಾಣಿಸುತ್ತದೆ. ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಓಟಿಪಿ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬಹುದು.

ಪಿಎಂ ಕಿಸಾನ್ 15 ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ 15 ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೆ 2000 ರೂಪಾಯಿಯಂತೆ ಒಟ್ಟು ಒಂದು ವರ್ಷಕ್ಕೆ 6 ಸಾವಿರ ರೂಪಾಯಿ ರೈತರ ಖಾತೆಗೆ  ಜಮೆ ಮಾಡಲಾಗುವುದು. 14ನೇ ಕಂತಿನ ಹಣ  ಜುಲೈ 27 ರಂದು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ  ಜಮೆಯಾಗಿತ್ತು. ಈ ಆಧಾರದ ಮೇಲೆ 15 ನೇ ಕಂತಿನ ಹಣ  ನವೆಂಬರ್ ತಿಂಗಳಲ್ಲಿ ಬಹುತೇಕ ಖಚಿತವಾಗಿದೆ. ಹಾಗಾಗಿ ಇಕೆವೈಸಿ ಮಾಡಿಸದೆ ಇರುವ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ.

Leave a Comment