ಫೆ. 28 ರಂದು ಈ ರೈತರಿಗೆ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮೆ

Written by Ramlinganna

Published on:

Pm kisan 16th installment date announced : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಇದೇ ತಿಂಗಳ ಫೆಬ್ರವರಿ 28 ರಂದು ದೇಶದ ರೈತರಿಗೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆಯಾಗಲಿದೆ.

ಹೌದು, ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಏಕ ಕಾಲದಲ್ಲಿ 16ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ? ಪಿಎಂ ಕಿಸಾನ್ ಯೋಜನೆಗೆ ಯಾವ ರೈತರು ಅರ್ಹತೆ ಪಡೆದಿದ್ದಾರೆ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು.

Pm kisan 16th installment date announced ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವ ಯಾವ ರೈತರ ಹೆಸರಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಕಾಣಿಸುತ್ತದೆ. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿಕಾಣಿಸುತ್ತದೆ. ಇಲ್ಲಿ ಅಲ್ಪಾಬೆಟಿಕ್ ಪ್ರಕಾರ ಹೆಸರುಗಳಿರುತ್ತವೆ. ಅಂದರೆ ಎ ದಿಂದ ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ಕೆಳಗೆ ನೀಡಲಾದ ಮುಂದಿನ ಪೇಜ್ ಅಂದರೆ ನಂಬರ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರಿರುವುದನ್ನುಪರಿಶೀಲಿಸಿಕೊಳ್ಳಬಹುದು.

ಫಲಾನುಭವಿಗಳ ಪಟ್ಟಿಯಲ್ಲಿದ್ದವರಿಗೆಲ್ಲರಿಗೂ ಹಣ ಜಮೆಯಾಗುವುದೇ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಎಲ್ಲಾ ರೈತರಿಗೆ 16ನೇ ಕಂತಿನ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಏಕೆಂದರೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆಲ್ಲರಿಗೂ ಇಕೆವೈಸಿ ಮಾಡಿಸುವುದು ಕಡ್ಡಾಯವೆಂದು ಸೂಚಿಸಲಾಗಿತ್ತು. ಅದೇ ರೀತಿ ನಾಲ್ಕೈದು ಸಲ ರೈತರಿಗೆ ಇಕೆವೈಸಿ ಮಾಡಿಸಲು ಗಡುವು ಸಹ ನೀಡಲಾಗಿತ್ತು.

ಇದನ್ನೂ ಓದಿಗ್ರಾಪಂ ವ್ಯಾಪ್ತಿಯ ಈ ಆಸ್ತಿಗಳ ದಾಖಲೆ ಹೀಗೆ ಡೌನ್ಲೋಡ್ ಮಾಡಿ

ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದಾರೋ ಅವರಿಗೆಲ್ಲರಿಗೂ ಮುಂದಿನ ಕಂತು ಅಂದರೆ 16ನೇ ಕಂತಿನ ಹಣ ಜಮೆಯಾಗಲಿದೆ. ಇಕೆವೈಸಿ ಮಾಡಿಸದೆ ಇರುವ ರೈತರಿಗೆ ಇನ್ನೂ ಕಾಲಾವಕಾಶವಿದೆ. ಹಾಗಾಗಿ ಕೂಡಲೇ ನಿಮ್ಮಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ? ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ಯಾವ ಯಾವ ರೈತರ ಇಕೆವೈಸಿ ಆಗಿದೆ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಇಕೆವೈಸಿ ಆಗಿದ್ದರೆ EKYC done successfully ಎಂಬ ಮೆಸೆಜ್ ಕಾಣಿಸುತ್ತದೆ. ಇಲ್ಲಿದ್ದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಲು ಕೇಳುತ್ತದೆ. ಆಗ ನಿಮ್ಮ ಮೊಬಲ್ ನಂಬರ್ ನಮೂದಿಸಿ ನಿಮ್ಮ ಮೊಬೈಲ್ ನಿಂದಲೇ ನೀವು ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

Leave a Comment