Pm kisan 16th installment ಗಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಸಂತಸದ ಸುದ್ದಿ. ಹೌದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯುತ್ತಿರುವ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ 15 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ಅತೀ ಶೀಘ್ರದಲ್ಲಿ 16ನೇ ಕಂತು ಜಮೆಯಾಗುವ ಸಾಧ್ಯತೆಯಿದೆ.
ಹೌದು, 16ನೇ ಕಂತಿನ ಕುರಿತಂತೆ ಇಲ್ಲಿಯವರೆಗೆ ಕೃಷಿ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗದಿದ್ದರೂ ಸಹ ಮಾಧ್ಯಮಗಳಿಗೆ ಲಭಿಸಿದ ಮೂಲಗಳ ಪ್ರಕಾರ ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ರೈತರ ಖಾತೆಗೆ 16ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ.
Pm kisan 16th installment ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ?
ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಲಿಸ್ಟ್ ನಲ್ಲಿ ರೈತರ ಹೆಸರಿದೆಯೋ ಇಲ್ಲವೋ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ….. ಇಲ್ಲಿದೆ ನೋಡಿ ಮಾಹಿತಿ.
Pm kisan 16th installment ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು.ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾವ ಯಾವ ರೈತರು ಫಲಾನುಭವಿಗಳಾಗಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.
ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸಲಾಗುವುದೇ?
ಪಿಎಂ ಕಿಸಾನ್ ಯೋಜನೆಯ16ನೇ ಕಂತಿನಿಂದ ಆರು ಸಾವಿರ ರೂಪಾಯಿ ಬದಲಾಗಿ ಎಂಟು ಸಾವಿರ ರೂಪಾಯಿ ಹೆಚ್ಚಿಸಲಾಗುತ್ತದೆ ಎಂಬ ಮಾಹಿತಿಗಳು ಕೇಳಿ ಬರುತ್ತಿವೆ. ಏಕೆಂದರೆ ಏಪ್ರೀಲ್ ತಿಂಗಳಿಂದ ಲೋಕಸಭಾ ಚುನಾವಣೆ ನಡೆಯಲಿದೆ. ಹಾಗಾಗಿ ಪಿಎಂ ಕಿಸಾನ್ ಫಲಾನುಭವಿಗಳಿಗೆ ಜಮೆ ಮಾಡುವ ಹಣವನ್ನು ಹೆಚ್ಚಿಸುವ ಸಾಧ್ಯತೆಯಿದೆ.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ ಬಂಡಿದಾರಿ ಮೊಬೈಲ್ ನಲ್ಲೇ ನೋಡಿ
ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಚುನಾವಣೆ ಪೂರ್ವದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಿಸುವ ಕುರಿತು ಘೋಷಣೆ ಮಾಡಿದರೂ ಮಾಡಬಹುದು. ಏನೇ ಇರಲಿ, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ.