ಅಕ್ಟೋಬರ್ 5 ರಂದು ಪಿಎಂ ಕಿಸಾನ್ ಹಣ ಈ ರೈತರ ಖಾತೆಗೆ ಜಮೆ

Written by Ramlinganna

Published on:

Pm kisan 18th installment ಪಿಎಂ ಕಿಸಾನ್ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ನೀವು ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗುತ್ತದೆ? ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತಿದ್ದರೆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಸುದ್ದಿ.

ಇದೇ ತಿಂಗಳು ಅಕ್ಟೋಬರ್ 5ರಂದು ಪಿಎ ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಹೌದು, ಮಹಾರಾಷ್ಟ್ರ ರಾಜ್ಯದ ವಾಶೀಮ್ ನಗರದಿಂದ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬಿಡುಗಡೆ ಮಾಡಲಾಗುವುದು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ದೇಶದ 9.5 ಕೋಟಿ ರೈತರ ಖಾತೆಗೆ ಸುಮಾರು 20 ಸಾವಿರ ಕೋಟಿ ರೂಪಾಯಿಯನ್ನು ಏಕಕಾಲದಲ್ಲಿ ಜಮೆ ಮಾಡಲಾಗುವುದು. ಇದು 18ನೇ ಕಂತು ಇರಲಿದೆ. ಅಂದರೆ 18ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನೀವು  ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮ ಹೆಸರು ನೀವು ಚೆಕ್ ಮಾಡಿಕೊಳ್ಳಬಹುದು.

ಅಲ್ಲಿ ಹೆಸರುಗಳು ಎ ಅಕ್ಷರದಿಂದ ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೀವು ಚೆಕ್ ಮಾಡಲು ಅಲ್ಲಿ ಕಾಣುವ ಮುಂದಿನ ಪೇಜ್ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಜಮೆಯಾಗುವ ಸಾಧ್ಯತೆಯಿದೆ.  ಈ ಪಟ್ಟಿಯಲ್ಲಿ ನಿಮ್ಮಹೆಸರಿದ್ದರೆ ಸಾಲದು, ಈ ಪಟ್ಟಿಯಲ್ಲಿರುವ ರೈತರು ಅರ್ಹತೆ ಪಡೆದಿರುತ್ತಾರೆ.  ಆದರೆ ಇವರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ ನಿಮ್ಮ ಹೊಲಕ್ಕೆ ಹೋಗಲು ಬಂಡಿದಾರಿ ಇದೆಯೇ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇಕೆವೈಸಿ ಮಾಡಿಸಿರುವುದು ಕಡ್ಡಾಯವಾಗಿರುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದರೆ ಮಾತ್ರ ರೈತರಿಗೆ ಮುಂದಿನ ಕಂತು ಜಮೆಯಾಗಲಿದೆ. ಇಲ್ಲದಿದ್ದರೆ ಮುಂದಿನ ಕಂತುಜಮೆಯಾಗುವುದಿಲ್ಲ.

ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ?

ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ಜಮೆಯಾಗಿಲ್ಲವೇ? ನಿಮಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತು ಜಮೆಯಾಗದಿದ್ದರೆ 155261 ಅಥವಾ 011 2430024300606 ಗೆ ಕರೆ ಮಾಡಿ ವಿಚಾರಿಸಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು.

ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮೆಯಾಗಿದೆ?

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳಿಂದ ಎಷ್ಟು ಹಣ ಜಮೆಯಾಗಿದೆ ನಿಮಗೆ ಗೊತ್ತಾ. ಪ್ರತಿ ಕಂತಿನ 2 ಸಾವಿರ ರೂಪಾಯಿಯಂತೆ ಒಟ್ಟು 17 ಕಂತುಗಳು 34 ಸಾವಿರ ರೂಪಾಯಿ ಹಣ ಜಮೆಯಾಗಿದೆ. ಈಗ 18ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ.

Leave a Comment