Pm kisan 19th installment : ಪಿಎಂಕಿಸಾನ್ ಯೋಜನೆಯ 19ನೇ ಕಂತಿನ ಫಲಾನುಭವಿಗಳ ಪಟ್ಟಿ ಈಗ ಬಿಡುಗಡೆಯಾಗಿದೆ ಈ ಪಟ್ಟಿಯಲ್ಲಿರುವ ರೈತರಿಗೆ ಇನ್ನೂ ಮುಂದೆ 19ನೇ ಕಂತಿನ ಹಣ ಜಮೆಯಾಗಲಿದೆ.
ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ
ಹೌದು, ರೈತರು ಈ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮಹೆಸರಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.ಅದು ಹೇಗೆ ಅಂದುಕೊಂಡಿದ್ದೀರಾ ? ಇಲ್ಲಿದೆ ನೋಡಿ ಮಾಹಿತಿ.
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ 5 ರಂದು ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದು ತಮಗೆಲ್ಲಾ ಗೊತ್ತಿದ್ದ ಸಂಗತಿ. ದೇಶದ 9.5 ಕೋಟಿ ರೈತರ ಖಾತೆಗೆ ಸುಮಾರು 20 ಸಾವಿರ ಕೋಟಿ ರೂಪಾಯಿಯನ್ನು ಏಕಕಾಲದಲ್ಲಿ ಜಮೆ ಮಾಡಲಾಗಿತ್ತು. ಆದರೆ ಆಗ ಕೆಲವುರೈತರಿಗೆ ಜಮೆಯಾದರೆ ಇನ್ನೂ ಕೆಲವು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಿರಲಿಲ್ಲ. ಯಾವ ಕಾರಣಕ್ಕಾಗಿ ಜಮೆಯಾಗುತ್ತಿಲ್ಲ ಎಂಬುದನ್ನು ಸಹ ಇಲ್ಲಿ ಮಾಹಿತಿ ನೀಡಲಾಗುವುದು.
Pm kisan 19th installment ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ : ನಿಮ್ಮ ಜಮೀನಿನ ಪೋಡಿ ನೀವೇ ಮಾಡಿ ಇಲ್ಲಿದೆ ಮಾಹಿತಿ
ಅಲ್ಲಿ ಹೆಸರುಗಳು ಎ ಅಕ್ಷರದಿಂದ ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೀವು ಚೆಕ್ ಮಾಡಲು ಅಲ್ಲಿ ಕಾಣುವ ಮುಂದಿನ ಪೇಜ್ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಜಮೆಯಾಗುವ ಸಾಧ್ಯತೆಯಿದೆ.
ಪಿಎಂ ಕಿಸಾನ್ ಈ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಜಮೆಯಾಗಲ್ಲ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಪಟ್ಟಿಯಲ್ಲಿ ನಿಮ್ಮಹೆಸರಿದ್ದರೆ ಸಾಲದು, ಈ ಪಟ್ಟಿಯಲ್ಲಿರುವ ರೈತರು ಅರ್ಹತೆ ಪಡೆದಿದ್ದರೂ ಕೆಲವರಿಗೆ ಜಮೆಯಾಗುವುದಿಲ್ಲ. ಏಕೆಂದರೆ ಕೆಲವರಿಗೆ ಇಕೆವೈಸಿ ಮಾಡಿಸಿರುವುದಿಲ್ಲ. ಹಾಗಾಗಿ ಕೆಲವು ರೈತರಿಗೆ ಜಮೆಯಾಗುತ್ತಿಲ್ಲ.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇಕೆವೈಸಿ ಮಾಡಿಸಿರುವುದು ಕಡ್ಡಾಯವಾಗಿರುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದರೆ ಮಾತ್ರ ರೈತರಿಗೆ ಮುಂದಿನ ಕಂತು ಜಮೆಯಾಗಲಿದೆ. ಇಲ್ಲದಿದ್ದರೆ ಮುಂದಿನ ಕಂತು ಜಮೆಯಾಗುವುದಿಲ್ಲ. ನಿಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಮೂದಿಸಬೇಕು.ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇಕೆವೈಸಿ ಆಗಿದ್ದರೆ ಸಕ್ಸೆಸಫುಲಿ ಇಕೆವೈಸಿ ಡನ್ ಎಂಬ ಸಂದೇಶಬರುತ್ತದೆ. ಒಂದುವೇಳೆ ಇಕೆವೈಸಿ ಆಗಿಲ್ಲವಾದರೆ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬೇಕು.
ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ?
ಪಿಎಂ ಕಿಸಾನ್ ಯೋಜನೆಯ 19 ನೇ ಕಂತು ಜಮೆಯಾಗಿಲ್ಲವೇ? ನಿಮಗೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತು ಜಮೆಯಾಗದಿದ್ದರೆ 155261 ಅಥವಾ 011 2430024300606 ಗೆ ಕರೆ ಮಾಡಿ ವಿಚಾರಿಸಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು