pm kisan 20th installment : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ರೈತ ಮಿತ್ರರೇ, ಇದೇ ವಾರದಲ್ಲಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರ ಖಾತೆಗೆ ಹಣ ಜಮೆಯಾಗಲಿದೆ? ಯಾವ ದಿನಾಂಕದಂದು ಜಮೆಯಾಗಲಿದೆ? ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಬೇಕಾದರೆ ರೈತರೇನು ಮಾಡಬೇಕು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಫೆಬ್ರವರಿ 24 ರಂದು ಜಮೆಯಾಗಿತ್ತು. ಈಗ 20ನೇ ಕಂತಿನ ಹಣ ಇದೇ ತಿಂಗಳು ಈ ವಾರದಲ್ಲಿ ರೈತರ ಖಾತೆಗೆ ಜಮೆಯಾಗಲಿದೆ. ಪ್ರತಿ ನಾಲ್ಕು ತಿಂಗಳಿಗೆ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಲಿದೆ. ಫೆಬ್ರವರಿ 24 ರಂದು ಜಮೆಯಾಗಿದ್ದರಿಂದ ನಾಲ್ಕು ತಿಂಗಳ ಪ್ರಕಾರ ಜೂನ್ ತಿಂಗಳ 24 ರಂದು ರೈತರ ಖಾತೆಗೆ ಜಮೆಯಾಗಬೇಕು? ಈ ವಾರದಲ್ಲಂತು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
2019 ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಗೆಚಾಲನೆ ನೀಡಿತ್ತು. ವಾರ್ಷಿಕವಾಗಿ ಮೂರುಸಮಾನ ಕಂತಿನಲ್ಲಿ ಒಟ್ಟು 6 ಸಾವಿರ ರೂಪಾಯಿ ಹಣ ರೈತರಿಗೆ ಸಿಗಲಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಪೋಬರ್ 5 ರಂದು ಬಿಡುಗಡೆಯಾಗಿತ್ತು. ಈಗ 19ನೇ ಕಂತಿನ ಹಣ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.
pm kisan 20th installment ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಇದನ್ನೂ ಓದಿ : ರೈತರ ಎಫ್ಐಡಿ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ.
pm kisan 20th installment ಇಕೆವೈಸಿ ಆದ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
ಒಂದು ವೇಳೆ ಇಕೆವೈಸಿ ಆಗಿಲ್ಲವಾದರೆ ಕೂಡಲೇ ನಿಮ್ಮ ಬಳಿ ಇರುವ ಮೊಬೈಲ್ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು.





