ನಾಳೆ ಪಿಎಂ ಕಿಸಾನ್ ಹಣ ಜಮೆ ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Updated on:

Pm kisan amount released : ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ನವೆಂಬರ್ 15 ರಂದು ಬೆಳಗ್ಗೆ 11.30 ಗಂಟೆಗೆ ದೇಶದ ಎಲ್ಲ ರೈತರ ಖಾತೆಗೆ ಜಮೆಯಾಗಲಿದೆ.

ಹೌದು, ಈ ಕುರಿತು ಅಧಿಕೃತ ಅದೇಶ ಹೊರಬಿದ್ದಿದೆ. ಜಾರ್ಖಂಡ್ ರಾಜ್ಯದ ಖುಂಟಿ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನವೆಂಬರ್ 15 ರ ಬೆಳಗ್ಗೆ 11.30 ಗಂಟೆಗೆ ರೈತರ ಖಾತೆಗೆ ಹಣ ಜಮೆಯಾಗಲಿದೆ.

9 ಕೋಟಿಗೂ ಅಧಿಕ ರೈತರಿಗೆ 18 ಕೋಟಿಗೂ ಅಧಿಕ ಹಣ ಏಕಕಾಲದಲ್ಲಿ ರೈತರ ಖಾತೆಗೆ ಜಮೆಯಾಗಲಿದೆ. ಹೌದು, ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಹಾಗೂ ಎಲ್ಲಾ ಅರ್ಹತೆಯಿರುವ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.

ಯಾರಿಗೆ ಜಮೆಯಾಗಲಿದೆ ಯಾರಿಗೆ ಜಮೆಯಾಗಲ್ಲ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು  ಮನೆಯಲ್ಲಿಯೇ ಕುಳಿತು ಪಿಎಂ ಕಿಸಾನ್ ಹಣ ತಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Get Data ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ನಿಮ್ಮ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ know your Registration no ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ನೋಂದಣಿ ಸಂಖ್ಯೆ ಪಡೆದಕೊಂಡು ಚೆಕ್ ಮಾಡಿಕೊಳ್ಳಬಹುದು.

Pm kisan amount released ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ? ಈ ನಂಬರಿಗೆ ಕರೆ ಮಾಡಿ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಇಂದು ನಿಮಗೇಕೆ ಜಮೆಯಾಗಿಲ್ಲವೆಂಬುದರ ಕುರಿತು ವಿಚಾರಿಸಲು 155261 ಅಥವಾ 011 24300606 ಗೆ ಕರೆ ಮಾಡಬಹುದು.

ಇಕೆವೈಸಿ ಮಾಡಿಸಿದ್ದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಮೊಬೈಲ್ ನಲ್ಲಿ ಇಕೆವೈಸಿ ಮಾಡಸಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.  ಒಂದು ವೇಳೆ ನೀವು ಈಗಾಗಲೇ ಇಕೆವೈಸಿ ಮಾಡಿದ್ದರೆ ಇಕೆವೈಸಿ ಸಕ್ಸೆಸ್ ಫುಲಿ ಡನ್ ಎಂಬ ಮೆಸೆಜ್ ಬರುತ್ತದೆ. ಇಲ್ಲದಿದ್ದರೆ ನೀವ ನಿಮ್ಮ ಮೊಬೈಲ್ ನಂಬರ್ ಹಾಕಬೇಕಾಗುತ್ತದೆ. ನಂತರ ನಿಮ್ಮ ಪಿಎಂ ಕಿಸಾನ್ ಯೋಜನೆಗೆ ನೋಂದಣಿಯಾದ ಮೊಬೈಲ್ ನಂಬರಿಗೆ ಓಟಿಪಿ ಕಳಿಸಲಾಗುವುದು.  ಅದನ್ನು ಹಾಕಿ ಇಕೆವೈಸಿ ಮಾಡಿಸಬಹುದು.

ಇದನ್ನೂ ಓದಿ : ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳು ಬ್ಯಾಂಕ್ ಅಕೌಂಟ್ ಗೆ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ ಮಾಡಲಾಗಿದೆ.,

Leave a Comment