ಪಿಎಂ ಕಿಸಾನ್ ಮುಂದಿನ ಕಂತು ಜಮೆಯಾಗಲು ಈ ಕೆಲಸ ಮಾಡಿ

Written by Ramlinganna

Updated on:

Pm kisan beneficiary ekyc ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಜಮೆಯಾಗಬೇಕಾದರು ರೈತರೂ ಕೂಡಲೇ ಇಕೆವೈಸಿ ಮಾಡಿಸಬೇಕು. ಇಕೆವೈಸಿ ಆಗಿದೆಯೋ ಇಲ್ಲವೋ? ಎಲ್ಲಿ ಮಾಡಿಸಬೇಕು? ಇಲ್ಲಿದೆ ಮಾಹಿತಿ.

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಅಂದರೆ 18ನೇ ಕಂತಿನ ಹಣ ಜಮೆಗಾಗಿ ಕಾಯುತ್ತಿರುವ ರೈತರು ಇನ್ನೂ ಮುಂದೆ ಇಕೆವೈಸಿ ಮಾಡಿಸಿದರೆ ಮಾತ್ರ ಅವರಿಗೆ ಮುಂದಿನ ಕಂತು ಜಮೆಯಾಗುತ್ತದೆ, ಇಲ್ಲದಿದ್ದರೆ ಮುಂದಿನ ಕಂತು ಎಲ್ಲಾ ಅರ್ಹತೆಗಳಿದ್ದರೂ ಸಹ ಹಣ ಜಮೆಯಾಗುವುದಿಲ್ಲ.  ಅಂದರೆ ಪಿಎಂ ಕಿಸಾನ್ ಇಕೆವೈಸಿ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ.

Pm kisan beneficiary ekyc ಆಗಿದೆಯೋ ಇಲ್ಲವೋ ಹೇಗೆ ಚೆಕ್ ಮಾಡಿ?

ಪಿಎಂ ಕಿಸಾನ್ ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಓಟಿಪಿ ಬೇಸಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಒಂದು ಸಂದೇಶ ಕಾಣಿಸುತ್ತದೆ. ನೀವು ಒಂದು ವೇಳೆ ಇಕೆವೈಸಿ ಮಾಡಿಸಿದ್ದರೆ EKYC is Already Done ಎಂಬ ಮೆಸೆಜ್ ಕಾಣಿಸುತ್ತದೆ.

ನೀವು ಇಕೆವೈಸಿ ಮಾಡಿಸಿಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರ್ ನಮೂದಿಸಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇಕೆವೈಸಿ ಮಾಡಿಕೊಳ್ಳಬಹುದು.

ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿ ಇಕೆವೈಸಿ ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ : ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ

ಪಿಎಂ ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು ಇಕೈವಸಿ ಕಡ್ಡಾಯಗೊಳಿಸಲಾಗಿದೆ. ಇಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದಾಗಿ ಆರ್ಥಿಕ ನೆರವು ವರ್ಗಾವಣೆ ಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ 158ನೇ ಕಂತು ಜೂನ್ ತಿಂಗಳು ಜಮೆಯಾಗುವ ಸಾಧ್ಯತೆಯಿದೆ. ಏಕೆಂದರು ಈ ಯೋಜನೆಯಡಿ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿ ಹೀಗೆ ಮೂರು ಕಂತುಗಳಲ್ಲಿ ಒಟ್ಟು  ಒಂದು ವರ್ಷದಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆಯಾಗಲಿದೆ.

ಪಿಎಂ ಕಿಸಾನ್ ಫಲಾನುಭವಿಗಳ ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಫಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ successfully Authenticated   ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿರುವ ರೈತರು ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿರುತ್ತಾರೆ. ಪಟ್ಟಿಯಲ್ಲಿ ಇರದ ರೈತರಿಗೆ ಮುಂದಿನ ಕಂತು ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

Leave a Comment