ಈ ಪಟ್ಟಿಯಲ್ಲಿದ್ದ ರೈತರಿಗೆ ಪಿಎಂ ಕಿಸಾನ್ ಹಣ ಜಮೆ

Written by Ramlinganna

Updated on:

PM kisan Beneficiary  list: ಪಿಎಂ ಕಿಸಾನ್ ಯೋಜನೆಯ ಈ ಕೆಳಗಿನ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆಯಾಗಲಿದೆ.

ಹೌದು, ಅತೀ ಶೀಘ್ರದಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ 16ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ಫಲಾನುಭವಿಗಳು ಒಮ್ಮ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಏಕೆಂದರೆ ಇಕೆವೈಸಿ ಆಗದೆ ಇರುವ ರಾಜ್ಯ ಬಹುತೇಕ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಹಾಗಾಗಿ ಒಮ್ಮೆ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

PM kisan Beneficiary  list: ನಿಮ್ಮ ಹೆಸರು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಈಗ 16ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ  ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಲ್ಲೆ ಆಯ್ಕೆ ಮಾಡಿಕೊಳ್ಳಬೇಕು.  ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

PM kisan Beneficiary  list ಇಕೆವೈಸಿ ಮಾಡಿಸಿದ್ದಾರೋ ಇಲ್ಲವೋ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕಾಗುತ್ತದೆ.  ಇಕೆವೈಸಿ ಆಗಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮೆಯಾಗುವುದು?

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಜಮೆಯಾಗಿತ್ತು. ಪ್ರತಿನಾಲ್ಕು ತಿಂಗಳಿಗೊಮ್ಮೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ. ಹಾಗಾಗಿ ಮುಂದಿನ ತಿಂಗಳ ಜಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ : Baragala parihara ನನ್ನ ಖಾತೆಗೆ ಜಮೆ: ನಿಮಗೆಷ್ಟು ಜಮೆ? ಚೆಕ್ ಮಾಡಿ  

ಪಿಎಂ ಕಿಸಾನ್ ಯೋಜನೆಯ ಹಣ ಪ್ರತಿ ವರ್ಷ ಮೂರು ಕಂತುಗಳಲ್ಲಿ ಜಮೆಯಾಗುತ್ತದೆ. ಹೌದು ಏಪ್ರೀಲ್ –ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆಯಾದರೆ, ಆಗಸ್ಟ್ – ನವೆಂಬರ್ ತಿಂಗಳ ಮಧ್ಯದಲ್ಲಿ ಎರಡನೇ ಕಂತು ಜಮೆಯಾಗಲಿದೆ. ಅದೇ ರೀತಿ ಡಿಸೆಂಬರ್ – ಮಾರ್ಚ್ ತಿಂಗಳಲ್ಲಿ ಮೂರನೇ ಕಂತು ಜಮೆಯಾಗಲಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಕಳೆದ ತಿಂಗಳ ಆಧಾರದ ಮೇಲೆ ಮುಂದಿನ ತಿಂಗಳ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ.

Leave a Comment