PM kisan Beneficiary ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

PM kisan Beneficiary  ಪಟ್ಟಿಯಲ್ಲಿ ರೈತರ ಹೆಸರಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಚೆಕ್ ಮಾಡಲು ಏನು ಮಾಡಬೇಕು? ಹೇೆೆೆಗೆ ಮಾಡಬೇಕು? ಇಲ್ಲಿದೆ ಮಾಹಿತಿ

ಹೌದು, ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ರೈತರು ಯಾರ ಸಹಾಯವೂ ಇಲ್ಲದೆ ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು.

PM kisan Beneficiary ಪಟ್ಟಿಯಲ್ಲಿ ಹೆಸರು ಹೇಗೆ ಚೆಕ್ ಮಾಡಬೇಕು?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಸಬ್ ಡಿಸ್ಟ್ರಿಕ್ಟ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಬ್ಲಾಕ್ ನಲ್ಲಿಯೂ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಆಗ  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕಾಣುತ್ತದೆ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಎ ದಿಂದ ಆರಂಭವಾಗಿರುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ? ಆ ಆಧಾರದ ಮೇಲೆ ನಿಮ್ಮ ಹೆಸರನ್ನು ಕೆಳಗಡೆ ಕಾಣುವ ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡುತ್ತಾ ಹೋಗಿ ಹೆಸರು ಹುಡುಕಬಹುದು.

PM kisan Beneficiary  ಪಟ್ಟಿಯಲ್ಲಿರುವ ಎಲ್ಲಾ ರೈತರಿಗೂ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆಯೇ?

ಪಿಎಂ ಕಿಸಾನ್ ಯೋಜನೆಯ ಬೆನಿಫಿಶಿಯರಿ ಲಿಸ್ಟ್ ನಲ್ಲಿರುವ ಎಲ್ಲಾ ರೈತರಿಗೆ ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಇತ್ತೀಚೆಗೆ ಇಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ಏಕೆಂದರೆ ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಸಿಗಲೆಂಬ ಉದ್ದೇಶದಿಂದ ಇಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ಈಗ ರೈತರು ಇಕೆವೈಸಿ ಮಾಡಿಸಿದರೂ ಸಹ ಕೆಲವು ರೈತರಿಗೆ ಯೋಜನೆಯ ಲಾಭ ಸಿಗುತ್ತಿಲ್ಲ.

ಇಕೆವೈಸಿ ಮಾಡಿಸಿದರೂ ಕೆಲವು ರೈತರಿಗೇಕೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿಲ್ಲ?

ಹೌದು, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿದರೂ ಸಹ ಕೆಲವು ರೈತರಿಗೆ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ. ಅಂದರೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆಯಾಗಿಲ್ಲ. ಇದಕ್ಕೆ ಹಲವಾರು ಕಾರಣಗಳನ್ನು ಹೇಳಲಾಗುತ್ತಿದೆ.

ಇದನ್ನೂ ಓದಿ : ಯಾವ ಬ್ಯಾಂಕಿನಲ್ಲಿ ಎಷ್ಟು ಸಾಲ ಪಡೆದಿದ್ದೀರಿ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಉದ್ದೇಶ ಬಡ ರೈತರಿಗೆ ಆರ್ಥಿಕ ಸಹಾಯವಾಗಲೆಂದು 6 ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ಜಮೆ ಮಾಡಲಾಗುತ್ತಿತ್ತು. ಆದರೆ ಸರ್ಕಾರಿ ನೌಕರರು, ತೆರಿಗೆ ಪಾವತಿಸುತ್ತಿರುವವರು, ಒಂದೇ ಕುಟುಂಬದಲ್ಲಿ ಒಬ್ಬ ಸದಸ್ಯರಿಗಿಂತ ಹೆಚ್ಚಿನ ಸದಸ್ಯರು ಸೌಲಭ್ಯ ಪಡೆಯುತ್ತಿದ್ದರು. ಇಂತಹ ರೈತರನ್ನು ಗುರುತಿಸಿ ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ಸಿಗಲೆಂದು ಕೆಲವು ರೈತರಿಗೆ ಯೋಜನೆಯ ಲಾಭ ತಡೆಹಿಡಿಯಲಾಗಿದೆ.

ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ ಹಣ ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.  ಏಪ್ರೀಲ್  ತಿಂಗಳಿಂದ ಜುಲೈ ತಿಂಗಳ ಮಧ್ಯದಲ್ಲಿ ಒಂದು ಕಂತು ಅಂದರೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಆಗಸ್ಟ್ ತಿಂಗಳಿಂದ ನವೆಂಬರ್ ತಿಂಗಳ ಮಧ್ಯದಲ್ಲಿ ಎರಡನೇ ಕಂತು ಜಮೆ ಮಾಡಲಾಗುವುದು. ಅದೇ ರೀತಿ ಡಿಸೆಂಬರ್ ತಿಂಗಳಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಮೂರನೇ ಕಂತು ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು. ಇಲ್ಲಿಯವರೆಗೆ ರೈತರ ಖಾತೆಗೆ ಒಟ್ಟು 15 ಕಂತುಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡಲಾಗಿದೆ.

Leave a Comment