ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲವೇ ಈ ಕೆಲಸ ಮಾಡಿ

Written by Ramlinganna

Published on:

PM kisan ekyc check now  : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಕೆಲವು ರೈತರಿಗೆ ಅರ್ಹತೆ ಇದ್ದರೂ ಹಣ ಜಮೆಯಾಗುತ್ತಿಲ್ಲ. ಆರಂಭದಲ್ಲಿ ಪಿಎಂ ಕಿಸಾನ್ ಕಂತಿನ ಹಣ ಜಮೆಯಾಗುತ್ತಿತ್ತು. ಆದರೆ ಇತ್ತೀಚೆಗೆ ಕೆಲವು ರೈತರ ಖಾತೆಗೆ ಹಣ ಜಮೆಯಾಗುತ್ತಿಲ್ಲ. ಆದರೆ ಬಹುತೇಕ ರೈತರಿಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬುದು ಗೊತ್ತಿಲ್ಲ. ಅಂತಹ ರೈತರಿಗೆ ಇಲ್ಲಿದೆ ಮಾಹಿತಿ

ಏನಿದು ಪಿಎಂ ಕಿಸಾನ್ ಯೋಜನೆ ?

ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು 2019 ರಲ್ಲಿ ರೈತರಿಗೆ ಆರ್ಥಿಕವಾಗಿ ಸಹಾಯವಾಗಲೆಂದು ಆರಂಭಿಸಿದೆ. ಹೌದು, ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ  ಮೂರು ಕಂತುಗಳಂತೆ ಅಂದರೆ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಫಲಾನುಭವಗಳ ಖಾತೆಗೆ ಜಮೆ ಮಾಡಲಾಗುವುದು.

ಪಿಎಂ ಕಿಸಾನ್ ಯೋಜನೆಯ ಹಣವನ್ನು ಆರಂಭದಲ್ಲಿ ನೋಂದಣಿ ಮಾಡಿಸಿದ ಎಲ್ಲಾ ರೈತರ ಖಾತೆಗೆ ಜಮೆಯಾಗುತ್ತಿತ್ತು. ಆದರೆ ನಂತರ ಕೆಲವು ಕಾರಣಗಳಿಂದ ಹಣ ಜಮೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ ಅರ್ಹತೆ ಇಲ್ಲದವರೂ ನೋಂದಣಿ ಮಾಡಿಸಿದ್ದಾರೆ ಎಂಬ ಕಾರಣಕ್ಕೆ ಕೆಲವು ರೈತರಿದಗೆ ಜಮೆ ಮಾಡುವುದದನ್ನು ತಡೆ ಹಿಡಿಯಲಾಗಿದೆ. ಅಂದರೆ ಸರ್ಕಾರಿ ನೌಕರಸ್ಥರು ಮತ್ತು ಸರ್ಕಾರಕ್ಕೆ ತೆರಿಗೆ ಪಾವತಿಸುವವರು ಪಿಎಂ ಕಿಸಾನ್ ಯೋಜನೆ ನೋಂದಣಿ ಮಾಡಿಸಿದ್ದರು. ಅಂತಹವರಿಗೆ ಜಮೆಯಾಗುತ್ತಿಲ್ಲ.

PM kisan ekyc check now ಎಲ್ಲಾ ಅರ್ಹತೆ ಇದ್ದರೂ ಏಕೆ ಜಮೆಯಾಗುತ್ತಿಲ್ಲ ?

ಪಿಎಂ ಕಿಸಾನ್ ಯೋಜನೆಗೆ ಎಲ್ಲಾ ಅರ್ಹತೆ ಇದ್ದರೂ ಸಹ ಜಮೆಯಾಗುತ್ತಿಲ್ಲ. ಏಕೆಂದರೆ ಇಕೆವೈಸಿ ಪಕ್ರಿಯೆ ಪೂರ್ಣಗೊಳಿಸಿಲ್ಲ. ಹೌದು, ಯಾರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಈಗಲೂ ಇಕೆವೈಸಿ ಮಾಡಿಸಿಕೊಳ್ಳಬಹುದು. ಮೂರು ವಿಧಾನಗಳ ಮೂಲಕ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಪಿಎಂ ಕಿಸಾನ್ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್  ನಲ್ಲಿ ಆಧಾರ್ ಲಿಂಕ್ ಮಾಡಿದ ಸಕ್ರೀಯ ಮೊಬೈಲ್ ಸಂಖ್ಯೆ ನಮೂದಿಸಿದ ಓಟಿಪಿ ಆಧಾರಿತವಾಗಿ ಇಖೆವೈಸಿಯನ್ನು ಪೂರ್ಣಗೊಳಿಸಬಹುದು.

ಸಿಎಸ್ಕೆ ಕೆಂದ್ರಗಳಲ್ಲಿ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ತೆಗೆದುಕೊಂಡು ಹೋಗಿ ಬಯೋಮೆಟ್ರಿಕ್ ನೀಡಿ ಸಹ ಇಕೆವೈಸಿ  ಮಾಡಿಸಬಹುದು. ಇಕೆವೈಸಿ ಮಾಡಿಸಿದ ನಂತರ 24 ಗಂಟೆಯ ಬಳಿಕ ಇಕೆವೈಸಿಯು ವೆಬ್ಸೈಟ್ ದಲ್ಲಿ ಅಪಡೇಟ್ ಆಗಲಿದ್ದು, ನಂತರ ಪರಿಶೀಲಿಸಬಹುದು.

ಇದನ್ನೂ ಓದಿ : ನೀವು ನಿಂತಿರುವ ಜಮೀನಿನ ಮಾಲಿಕರು ಯಾರಿದ್ದಾರೆ? ಹೀಗೆ ಚೆಕ್ ಮಾಡಿ

ಕೃಷಿ ಇಲಾಖೆಯು ಪಿಎಂ ಕಿಸಾನ್ ಯೋಜನೆಯ ನೋಡೆಲ್ ಏಜೆನ್ಸಿಯಾಗಿದ್ದು, ಅಧಿಕಾರಿಗಳ ಮೂಲಕ ರೈತರಿಗೆ ಮಾಹಿತಿ ನೀಡಿ ಹಣ ಬರುವಂತೆ ಮಾಡಬೇಕಾದ ಜವಾಬ್ದಾರಿಯಾಗಿದೆ.

ರಾಜ್ಯದಲ್ಲಿ 2.27 ಲಕ್ಷಕ್ಕಿಂಗ ಹೆಚ್ಚು ಆಧಾರ್ ಲಿಂಕ್ ಇಲ್ಲದೆ ಇನ್ನೂ 2.80 ಲಕ್ಷ ರೈತರು ಇಕೆವೈಸಿ ಇಲ್ಲದ ಕಾರಣದಿಂದ ಅವರಿಗೆ ಹಣ ಜಮಯಾಗುತ್ತಿಲ್ಲ. ಹೀಗಾಗೆ 3 ಲಕ್ಷಕ್ಕೂ ಹೆಚ್ಚು ರೈತರು ಇಕೆವೈಸಿ ಮಾಡಿಸದೆ ಇರುವ ಕಾರಣದಿಂದಾಗಿ ಪಿಎಂ ಕಿಸಾನ್ ಯೋಜನೆಯಿಂದ ವಂಚಿತರಾಗಿದ್ದಾರೆ.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ

Pm kisan release amount  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ನಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಅವರ ಹೆಸರು ಕಾಣಿಸುತ್ತದೆ.

Leave a Comment