ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಬೇಕಾದರೆ ಇನ್ನೂ ಮುಂದೆ ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಹಾಗಾಗಿ 10ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರು ಇ-ಕೆವೈಸಿ ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ. ಇ-ಕೆವೈಸಿ ಮಾಡಿಸಲು ರೈತರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಇ-ಕೆವೈಸಿ ಲಿಂಕ್ ಮಾಡಬಹುದು.
ಇನ್ನೂ ಮುಂದೆ ಇ-ಕೆವೈಸಿ ಪೂರ್ಣಗೊಳಿಸಿದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ 10ನೇ ಕಂತಿನ ಹಣ ಸಿಗಲಿದೆ. ಇಲ್ಲದಿದ್ದರೆ 10ನೇ ಕಂತಿನ ಹಣ ಸ್ಥಗಿತಗೊಳ್ಳಬಹುದು.
ಇ-ಕೆವೈಸಿ ಮಾಡಿಸುವುದು ಹೇಗೆ? How to do E-KYC?
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ https://pmkisan.gov.in/aadharekyc.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಅಲ್ಲಿ ಆಧಾರ್ ನಂಬರ್ ನಮೂದಿಸಿ ಇಮೇಜ್ ಟೆಕ್ಸ್ಟ್ ಬಾಕ್ಸ್ ನಲ್ಲಿ ಮುಂದುಗಡೆ ಕಾಣುವ ಕೋಡ್ ಹಾಕಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಮೊಬೈಲ್ ನಂಬರ್ ನಮೂದಿಸಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಅಲ್ಲಿ ನಮೂದಿಸಿದ ನಂತರ EKYC Successfully submitted ಎಂಬ ಸಂದೇಶ ಕಾಣುತ್ತದೆ. ಆಗ ನಿಮ್ಮಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಒಂದು ವೇಳೆ ಇ-ಕೆವೈಸಿ Invalid ಅಂತ ಕಂಡರೆ ನೀವು ಹತ್ತಿರದ CSC ಸೆಂಟರ್ ಗೆ ಹೋಗಿ ಸರಿಪಡಿಸಬಹುದು. ಅಥವಾ ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ 155261 ಅಥವಾ 011 24300606 ಗೆ ಕರೆ ಮಾಡಬಹುದು.
ಏನಿದು ಇ-ಕೆವೈಸಿ (what is E-kYC)
EKYC means Electronic Know your Client ಅಂದರೆ ಬ್ಯಾಂಕುಗಳಂತಹ ಸಂಸ್ಥೆಗಳು ಬಳಸುವ ನಿವಾಸಿ ದೃಢೀಕರಣದ ಮಾರ್ಗವಾಗಿದೆ. ಆಧಾರ್ ಆಧಾರಿತ ದೃಢೀಕರಣದ ಮೂಲಕ ನಿಮ್ಮ ಗುರುತನ್ನು ವಿದ್ಯುನ್ಮಾನವಾಗಿ ಪರಿಶೀಲಿಸುವುದರಿಂದ ಇಕೆವೈಸಿಯನ್ನು ಆಧಾರ್ ಆಧಾರಿತ ಇಕೆವೈಸಿ ಎಂದು ಕರೆಯಲಾಗುವುದು. ಆಧಾರ್ ಆಧಾರಿತ ಇಕೆವೈಸಿ ನಿಮ್ಮ ಗುರುತು ಮತ್ತು ವಿಳಾಸದ ಪುರಾವೆಯನ್ನು ಸೇವಾ ಪೂರೈಕೆದಾರರಿಗೆ ತಕ್ಷಣವೇ ಒದಗಿಸುತ್ತದೆ.
ಆದಾರ್ ಕಾರ್ಡ್ ನಂತಹ ದಾಖಲೆ ಬಳಸಿಕೊಂಡು ನಮ್ಮ ಗುರುತು ಮತ್ತು ಇತರ ಮಾಹಿತಿ ನಿರ್ಧಿಷ್ಟತೆಗಳನ್ನು ಪರಿಶೀಲಿಸಲು ಬಳಸುವುದಕ್ಕಾಗಿ ಇಕೆವೈಸಿ ಮಾಡಲಾಗುವುದು.
ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಮೊಬೈಲ್ ನಲ್ಲಿಯೇ ನೋಡಬಹುದು. ಇದರಿಂದಾಗಿ ಹಿಂದಿನ ಎಷ್ಟು ಕಂತುಗಳು ನಿಮ್ಮ ಖಾತೆಗೆ ಬಂದಿದೆ ಈಗಿನ ಕಂತಿನ ಸ್ಟೇಟಸ್ ಏನೆಂಬುದರ ಮಾಹಿತಿಯನ್ನು ನೋಡಬಹುದು. ನಿಮ್ಮ ಮೊಬೈಲ್ ನಲ್ಲಿ ಈ https://pmkisan.gov.in/BeneficiaryStatus.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆ ಪೇಜ್ ಓಪನ್ ಆಗುತ್ತದೆ.ಅಲ್ಲಿ ನೀವು ನಿಮ್ಮ ಆಧಾರ್ ನಂಬರ್, ಅಥವಾ ಬ್ಯಾಂಕ್ ಅಕೌಂಟ್ ನಂಬರ್ ಅಥವಾ ಮೊಬೈಲ್ ಈ ಮೂರರಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಉದಾಹರಣೆ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಿ Get Data ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಆಧಾರ್ ಕಾರ್ಡ್ ನಂಬರ್ ಸೆಲೆಕ್ಟ್ ಮಾಡಿಕೊಂಡರೆ ಆಧಾರ್ ಕಾರ್ಡ್ ನಂಬರ್ ನಮೂದಿಸಿ Get Data ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಮೊಬೈಲ್ ನಂಬರ್, ಜಿಲ್ಲೆ ಸೇರಿದಂತೆ ಇಲ್ಲಿಯರೆಗೆ ಎಷ್ಟು ಕಂತುಗಳು ಯಾವ ದಿನಾಂಕದಂದು ನಿಮ್ಮ ಖಾತೆಗೆ ಜಮೆಯಾಗಿದೆ ಎಂಬುದು ಕಾಣುತ್ತದೆ.