ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 10ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 1 ರಂದು ಮಧ್ಯಾಹ್ನ 12.00 ಗಂಟೆಗೆ (PM kisan fund release today) ಬಿಡುಗಡೆ ಮಾಡಲಿದ್ದಾರೆ.
ಇಂದು ಮಧ್ಯಾಹ್ನ 12.00 ಗಂಟೆಗೆ ವಿಡಿಯೇ ಕಾನ್ಫರೆನ್ಸ್ ಮೂಲಕ 10 ಕೋಟಿಗೂ ಕೋಟಿಗೂ ಅಧಿಕ ರೈತರಿಗೆ ಪಿಎಂ ಕಿಸಾನ್ ಯೋಜನೆಯ 10ನೇ ಹಣವನ್ನು ಬಿಡುಗಡೆ ಮಾಡಲಿದ್ದಾರೆ. 20ಕೋಟಿಗೂ ಅಧಿಕ ಹಣವನ್ನು ರೈತರ ಖಾತೆಗೆ ವರ್ಗಾಯಿಸಲಾಗುವುದು.
ದೇಶದ ರೈತರಿಗೆ ಈಗಾಗಲೇ 9 ಕಂತುಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಅಂದರೆ ಇದುವರೆಗೆ ಪಿಎಂ ಕಿಸಾನ್ ಯೋಜನೆಯಡಿ 9 ಕಂತುಗಳ ಹಣ ಒಟ್ಟು 18 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.
ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ರೈತರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು, https://pmkisan.gov.in/beneficiarystatus.aspx ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ಅಕೌಂಟ್ ನಂಬರ್ ಅಥವಾ ಮೊಬೈಲ್ ನಂಬರ್ ಈ ಮೂರರಲ್ಲಿ ಯಾವುದಾದರೊಂದನ್ನು ಸೆಲೆಕ್ಟ್ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಮೊಬೈಲ್ ನಂಬರ್ ಸೆಲೆಕ್ಟ್ ಮಾಡಿಕೊಂಡರೆ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಗೆಟ್ ಡಾಟಾ (Get Data) ಮೇಲೆ ಕ್ಲಿಕ್ ಮಾಡಬೇಕು. ಆಗ ಇಲ್ಲಿಯವರೆಗೆ ನಿಮ್ಮ ಯಾವ ಖಾತೆಗೆ ಎಷ್ಟು ಕಂತಿನ ಹಣ ಜಮೆಯಾಗಿದೆ. ಹಾಗೂ ಈಗ ಅಂದರೆ 10ನೇ ಕಂತಿನ ಹಣ ಜಮೆಯಾಗಲಿರುವ ಸ್ ಸ್ಟೇಟಸ್ ತಿಳಿದುಕೊಳ್ಳಬಹುದು.
ಜನವರಿ 1 ಹೊಸ ವರ್ಷಕ್ಕೆ ದೇಶದ ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ ಮಾಡಿದ ನಂತರ ದೇಶದ ಜನರನ್ನುದ್ದೇಶಿಸಿ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಲಿದ್ದಾರೆ. ರೈತರು ನೇರವಾಗಿ ಕ್ರಾಯಕ್ರಮ ವೀಕ್ಷಿಸಬಹುದು.
ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಲು ರೈತರು ಈ https://pmindiawebcast.nic.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಈ ಕಾರ್ಯಕ್ರಮ ದೂರದರ್ಶನದಲ್ಲಿಯೂ ಪ್ರಸಾರವಾಗಲಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ಏನಿದು ಪಿಎಂ ಕಿಸಾನ್ ಯೋಜನೆ?
ಕೇಂದ್ರ ಸರ್ಕಾರ ಆರಂಭಿಸಿದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ಯೋಜನೆಯಡಿಯಲ್ಲಿ ಪ್ರತಿವರ್ಷ ಕೇಂದ್ರ ಸರ್ಕಾರವು ರೈತರ ಖಾತೆಗೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆ ಮಾಡಲಿದೆ. ಈಗಾಗಲೇ 9 ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಶನಿವಾರ 10ನೇ ಕಂತಿನ ಹಣವನ್ನು ದೇಶದ 10 ಕೋಟಿಗೂ ಅಧಿಕ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಿದೆ.