ಕೊನೆಗೂ ಪಿಎಂ ಕಿಸಾನ್ ಯೋಜನೆಯ ಎಂಟನೇ ಕಂತಿನ ಹಣ ರೈತರ ಖಾತೆಗೆ (pm kisan fund released) ಜಮೆಯಾಯಿತು. ಏಪ್ರೀಲ್ ತಿಂಗಳ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರ ರೈತರ ಖಾತೆಗೆ ಹಣ ಜಮೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಎರಡು ವಾರಗಳ ನಂತರ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ.
ದೇಶಾದ್ಯಂತ ಸುಮಾರು 9 ಕೋಟಿ ರೈತರ ಖಾತೆಗೆ 7ನೇ ಕಂತಿನ ಹಣ ಕಳೆದ ವರ್ಷ ಡಿಸೆಂಬರ್ 25 ರಂದು ಜಮೆ ಮಾಡಲಾಗಿತ್ತು. ಈಗ 8ನೇ ಕಂತಿನ ಶುಕ್ರವಾರ 9.5 ಕೋಟಿಗಿಂತ ಹೆಚ್ಚಿನ ರೈತರ ಖಾತೆಗೆ ಬಸವ ಜಯಂತಿ, ರಂಜಾನ್ ಹಾಗೂ ಅಕ್ಷಯ ತೃತೀಯ ದಿನದಂದು ಜಮೆ ಮಾಡಿದ್ದಾರೆ. ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ (PM kisan scheme) 8ನೇ ಕಂತಿನಹಣ ಜಮೆಯಾಗಿರುವ ಸ್ಟೇಟಸ್ ಮನೆಯಲ್ಲಿಯೇ ಕುಳಿತು ನೋಡಿಕೊಳ್ಳಬಹುದು.
pm kisan fund released ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿ
ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ಮಾಹಿತಿ. ಸ್ಟೇಟಸ್ ನೋಡಲು ಈ ಮುಂದಿನ ಲಿಂಕ್ https://pmkisan.gov.in/beneficiarystatus.aspx ಮೇಲೆ ಕ್ಲಿಕ್ ಮಾಡಿದರೆ ಸಾಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿ ಮೊಬೈಲ್ ನಂಬರ್ ನಮೂದಿಸಿ ಗೋ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು ಸ್ಟೇಟಸ್ ನೋಡಬಹುದು.
ನಿಮ್ಮ ಖಾತೆಗೆ ಹಣ ಜಮೆಯಾಗಿದ್ದಲ್ಲವೆಂದರೆ ಈ ಕೆಳಗೆ ನೀಡಿದ ಸಹಾಯವಾಣಿ ನಂಬರಿಗೆ ಸಂಪರ್ಕಿಸಬಹುದು. ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಅಥವಾ ಈ Email ID: pmkisan-ict@gov.in ಗೆ ಮೇಲ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಯಾರು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ರೈತರು ಭಾರತದ ನಿವಾಸಿಯಾಗಿರಬೇಕು. ರೈತರ ಹೆಸರಿಗೆ 2 ಎಕರೆ ಜಮೀನು ಇರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ರೈತರು ತಮ್ಮ ಹೆಸರನ್ನು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿರಬೇಕು. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯು ಸರ್ಕಾರಿ ನೌಕರರಾಗಿರಬಾರದು. ಇದರೊಂದಿಗೆ ಆ ಕುಟುಂಬದ ಯಾವ ಸದಸ್ಯರೂ ಸರ್ಕಾರಿ ನೌಕರರಾಗಿರಬಾರದು. ತೆರಿಗೆ ಪಾವತಿಸುವವರಾಗಿರಬಾರದು. ಪಿಂಚಣಿ ಸೌಲಭ್ಯ ಪಡೆಯುವವರಾಗಿಬಾರದು. ಈ ಮೇಲಿನ ಅರ್ಹತೆ ಹೊಂದಿದ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಲಾಭ ಸಿಗಲಿದೆ.
ಏನಿದು ಪಿಎಂ ಕಿಸಾನ್ ಯೋಜನೆ?
ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಯಿತು. ಬಡ ರೈತರಿಗೆ ಆರ್ಥಿಕವಾಗಿ ಸಹಾಯವಾಗಲೆಂಬ ಉದ್ದೇಶದಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲಾಯಿತು.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಈ ಯೋಜನೆಯು ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿಯೇ ಅತೀ ಪ್ರಸಿದ್ಧಿ ಹೊಂದಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಪ್ರತಿ ವರ್ಷ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿಯನ್ನು ರೈತರಿಗೆ ಜಮೆ ಮಾಡಲಾಗುವುದು.