ಪಿಂಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ.  ಜನವರಿ 1 ರಂದು ಹೊಸ ವರ್ಷಕ್ಕೆ ದೇಶದ ರೈತರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಸದ ಸುದ್ದಿ ನೀಡಲಿದ್ದಾರೆ.

ಹೌದು, ಕೇಂದ್ರ ಸರ್ಕಾರದ ಕೃಷಿ ಸಚಿವರ ಮಾಹಿತಿಯ ಪ್ರಕಾರ ಜನವರಿ 1 ರಂದು ಶನಿವಾರ 12 ಗಂಟೆಗೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಯೋಜನೆ 10ನೇ ಕಂತಿನ ಹಣ ಬಿಡುಗಡೆ ಮಾಡಿ ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಸುಮಾರು 12 ಕೋಟಿಗಿಂತ ಹೆಚ್ಚು ರೈತರಿಗೆ ಆನ್ಲೈನ್ ಮೂಲಕ ಏಕಕಾಲದಲ್ಲಿ 10ನೇ ಕಂತಿನ ಹಣ ಜಮೆಯಾಗಲಿದೆ. ಆದರೆ 10ನೇ ಕಂತಿನಿಂದ ಕೆಲವು ರೈತರ ಹೆಸರನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಈ ಸಲ ಪಿಎಂ ಕಿಸಾನ್ ಯೋಜನೆಯ ಹಣ ಕೆಲವು ರೈತರಿಗೆ ಜಮೆಯಾಗುವುದಿಲ್ಲ.

ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿತ್ತು. ಕೆಲವು ರೈತರು ಇ-ಕೆವೈಸಿ ಮಾಡಿಸಿದ್ದಾರೆ. ಪಿಎಂ ಕಿಸಾನ್ ಯೋಜನೆಯ 9ನೇ ಕಂತಿನ ಹಣ ಪಡೆದ ರೈತರ ಹೆಸರನ್ನೂ ಕೈಬಿಡಲಾಗಿದೆ. ಫಲಾನುಭವಿಗಳ ಹೆಸರು ಕೈಬಿಟ್ಟಿರುವುದಕ್ಕೆ ಇನ್ನೂ ಕೇಂದ್ರ ಸರ್ಕಾರ ನಿಖರವಾದ ಕಾರಣ ನೀಡಿಲ್ಲ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಸ್ಟೇಟಸ್ ಚೆಕ್ ಮಾಡಲು ಹೋದರೆ installment payment stopped by on request of District ಎಂಬುದಾಗಿ ಕಾಣುತ್ತಿದೆ. ಹೀಗಾಗಿ ಇಂತಹ ರೈತರ ಖಾತೆಗೆ ಪಿಎಂ ಕಿಸಾನ್ ಜಮೆಯಾಗುವುದು ಇಲ್ಲವೋ ಎಂಬುದು ಜನವರಿ 1 ರಂದೇ ಗೊತ್ತಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು. ರೈತರು ಈ https://pmkisan.gov.in/BeneficiaryStatus.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ತೆರೆಯಲ್ಪಡುತ್ತದೆ. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಈಗಿನ ಕಂತಿನಲ್ಲಿ ನಿಮ್ಮ ಹೆಸರು ರದ್ದು ಪಡಿಸಿದ್ದರೆ installment payment stopped by state on request of District ಎಂಬುದು ಕಂಡರೆ ಪಿಎಂ ಕಿಸಾನ್ ಯೋಜನೆಯ ಹಣ ಬರುವ ಸಾಧ್ಯತೆ ಕಡಿಮೆಯಿರುತ್ತದೆ.  Rft Signed by State for installment ಇದ್ದರೆ ನಿಮಗೆ 10ನೇ ಕಂತಿನ ಹಣ ನಿಮ್ಮ ಖಾತೆಗೆ ಬರಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 1 ರಂದು ಮಧ್ಯಾಹ್ನ 12 ಗಂಟೆಗೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಬಿಡುಗಡೆ ಮಾಡಿದ ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.  ಅಂದು ನಡೆಯುವ ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಲು ರೈತರು ಈ https://pmindiawebcast.nic.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಈ ಕಾರ್ಯಕ್ರಮ ದೂರದರ್ಶನದಲ್ಲಿಯೂ ಪ್ರಸಾರವಾಗಲಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *