ಈ ಪಟ್ಟಿಯಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ

Written by Ramlinganna

Updated on:

PM kisan ineligibility list ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಯಾವ ಯಾವ ರೈತರಿಗೆ ಬರುವುದಿಲ್ಲ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಯಾವ ಯಾವ ರೈತರಿಗೆ ಜಮೆಯಾಗುತ್ತದೆ. ಯಾವ ರೈತರ ಆಧಾರ್ ಇಕೆವೈಸಿಯಾಗಿಲ್ಲ? ಯಾವ ರೈತರ ಇಕೆವೈಸಿ ಆಗಿದೆಯ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

PM kisan ineligibility list ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ 13ನೇ ಕಂತು ಯಾವ ಯಾವ ರೈತರಿಗೆ ಜಮೆಯಾಗಲ್ಲ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ  ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಯಾವ ಜಿಲ್ಲೆಗೆ ಸಂಬಂಧಿಸಿದ್ದಾರೋ ಆ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಂಡ ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ ರೈತರು Submit ಮೇಲೆ ಕ್ಲಿಕ್ ಮಾಡಬೇಕು.  ಆಗ  ನಿಮಗೆ Summary, Payment status, Aadhaar Authentication Status, ಹಾಗೂ Online Registration Status ಹೀಗೆ ನಾಲ್ಕು ಆಯ್ಕೆಗಳು ಕಾಣುತ್ತವೆ.ಅದರಲ್ಲಿ ನೀವು Aadhar Authentication status ಮೇಲೆ ಕ್ಲಿಕ್ ಮಾಡಬೇಕು. ಆಗ ಎಷ್ಟು ಜನ ರೈತರು ಪಿಎಂ ಕಿಸಾನ್ ಯೋಜನೆಗೆ ಆಧಾರ್ ಕಾರ್ಡ್ ದೃಢೀಕರಣಕ್ಕಾಗಿ ಕಳುಹಿಸಲಾಗಿದೆ. ಅದರಲ್ಲಿ ಎಷ್ಟು ಜನ ರೈತರ ಆಧಾರ್ ದೃಢೀಕರಣಗೊಂಡಿದೆ? ಎ ಷ್ಟು ಜನ ರೈತರ ಹೆಸರು ತಿರಸ್ಕೃತಗೊಂಡಿದೆ ಎಂಬ ಪಟ್ಟಿ ಕಾಣುತ್ತದೆ.

ಪಿಎಂ ಕಿಸಾನ್ ಯೋಜನೆಯ ಅನರ್ಹ ರೈತರ ಪಟ್ಟಿ

Total ineligible  ಅಂದರೆ ಪಿಎಂ ಕಿಸಾನ್ ಯೋಜನೆಗೆ ಅನರ್ಹ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ನಿಮ್ಮ ಹೆಸರು ಪಿಎಂ ಕಿಸಾನ್ ಯೋಜನೆಗೆ ಆಧಾರ್ ದೃಡೀಕರಣಗೊಂಡರೂ ಸಹ ಕೆಲವು ರೈತರ ಹೆಸರನ್ನು ಅನರ್ಹರ ಪಟ್ಟಿಯಲ್ಲಿ ಸೇರಿಸಲಾಗಿರುತ್ತದೆ. ಹಾಗಾಗಿ ರೈತರು ತಮ್ಮ ಹೆಸರು ಅನರ್ಹರ ಪಟ್ಟಿಯಲ್ಲಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಒಂದು ವೇಳೆ ನಿಮ್ಮ ಹೆಸರು ಅನರ್ಹ ರೈತರ ಪಟ್ಟಿಯಲ್ಲಿದ್ದರೆ ನಿಮ್ಮ ಹೆಸರು ಯಾವ ಕಾರಣಕ್ಕಾಗಿ ಅನರ್ಹರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬುದನ್ನು ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ ನಂಬರಿಗೆ ಕರೆ ಮಾಡಿ ವಿಚಾರಿಸಬಹುದು.

ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ

ರೈತರು ಪಿಎಂ ಕಿಸಾನ್ ಯೋಜನೆ ಕುರಿತಂತೆ  ಸಹಾಯವಾಣಿ ನಂಬರ್ 155261 ಅಥವಾ 011 24300606 ಗೆ ಕರೆ ಮಾಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಹೆಸರು ಅನರ್ಹರ ಪಟ್ಟಿಯಲ್ಲಿ ಏಕೆ ಸೇರಿಸಲಾಗದೆ ಎಂಬುದನ್ನು ವಿಚಾರಿಸಬಹುದು. ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿರುವುದರಿಂದ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿ ಅರ್ಹರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಇದೇ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಿಂತ ಮುಂಚಿತವಾಗಿ ರೈತರ ಖಾತೆಗೆ ಜಮೆಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Leave a Comment