ಈ ಲಿಸ್ಟ್ ನಲ್ಲಿದ್ದವರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ

Written by Ramlinganna

Updated on:

PM kisan Ineligible list  ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಅನರ್ಹ ರೈತರ ಪಟ್ಟಿ ಬಿಡುಗಡೆಯಾಗಿದೆ. ಹೌದು ಈ ಲಿಸ್ಟ್ ನಲ್ಲಿರುವ ರೈತರಿಗೆ ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ.

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಅನರ್ಹ ರೈತರಿಗೇಕೆ ಜಮೆಯಾಗಲ್ಲ? ಯಾವ ರೈತರು ಅನರ್ಹರಾಗಿದ್ದಾರೆ? ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಕೆಲವು ರೈತರಿಗೆ ತಡೆಹಿಡಿಯಲಾಗಿದೆ? ಎಂಬಿತ್ಯಾದಿಗಳ ಮಾಹಿತಿ ಇಲ್ಲಿದೆ.

ರೈತರಿಗೆ ಆರ್ಥಿಕ ಸಹಾಯವಾಗಲೆಂಬ ಉದ್ದೇಶದಿಂದಾಗಿ 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ ದೇಶದ ರೈತರಿಗೆ 13 ಕಂತುಗಳ ಹಣ ಜಮೆಯಾಗಿದೆ. ಆದರೆ ಇಲ್ಲಿ ಕೆಲವು ರೈತರಿಗೆ ಈಗ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಯಾವ ಯಾವ ರೈತರ ಹೆಸರನ್ನು ಪಿಎಂ ಕಿಸಾನ್ ಯೋಜನೆಯ ಪಟ್ಟಟಿಯಿಂದ ಕೈಬಿಡಲಾಗಿದೆ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು.

PM kisan Ineligible list  ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಅನರ್ಹ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ನಂತರ ಈಗ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ? ನಿಮಗೆ ಅನರ್ಹ ರೈತರ ಪಟ್ಟಿಯಲ್ಲಿ ಸೇರಿಸಲಾಗಿರುವುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಅನರ್ಹ ರೈತರ ಹೆಸರು ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ  ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.

ಇದಾದನಂತರ ನಿಮ್ಮ ತಾಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನಿಮಗೆ summary  payment status, Aadhaar authentication status ಹಾಗೂ  online Registration status  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು Aadhaar Authentication status ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿಯೂ ನಿಮಗೆ ಕೆಲವು ಆಯ್ಕೆಗಳಉ ಕಾಣಿಸುತ್ತವೆ. ಅದರಲ್ಲಿ ನೀವು Total ineligible  ಕಾಲಂ ಕೆಳಗಡೆ ಕೆಲವು ರೈತರ ಹೆಸರುಗಳಿರುತ್ತವೆ. ಅಲ್ಲಿ ಎ ದಿಂದ ಅಕ್ಷರಗಳು ಆರಂಭವಾಗಿರುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲ ವೋ ಚೆಕ್ ಮಾಡಿಕೊಳ್ಳಬೇಕು. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಮ್ಯಾಪ್ ನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ, ನಿಮಗೆ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅನರ್ಹರಾಗಿರುತ್ತೀರಿ. ಏಕೆಂದರೆ ನಿಮ್ಮ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯುತ್ತಿರಬಹುದು. ಅಥವಾ ನೀವು ತೆರಿಗೆ ಪಾವತಿದಾರರಾಗಿರಬಹುದು. ಅಥವಾ ನಿಮ್ಮ ಕುಟುಂಬದಲ್ಲಿ ನಿಮ್ಮ ಮಕ್ಕಳು ಸರ್ಕಾರಿ ನೌಕರರಾಗಿರಬಹುದು.ಅಥವಾ ನಿಮ್ಮ ಹೆಸರು ಬ್ಯಾಂಕ್, ಆಧಾರ್ ಕಾರ್ಡ್, ಜಮೀನಿನ ಪಹಣಿಯಲ್ಲಿ ಹೊಂದಾಣಿಕೆಯಾಗುತ್ತಿರಲಿಕ್ಕಿಲ್ಲ.

ನಿಮ್ಮ ಹೆಸರು ಎಲ್ಲಾ ದಾಖಲೆಗಳಲ್ಲಿ ಒಂದೇ ರೀತಿಯಾಗಿರಬೇಕು. ಒಂದು ದಾಖಲೆಯಲ್ಲಿಯೂ ಹೆಸರು ಅಥವಾ ತಂದೆ, ಪತಿಯ ಹೆಸರು ವ್ಯತ್ಯಾಸವಾಗಿದ್ದರೂ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗಿರುತ್ತದೆ.

Leave a Comment