Pm kisan money status : ಕೊನೆಗೂ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ 19 ನೇ ಕಂತಿನ ಹಣ ಜಮೆಯಾಯಿತು. ಯಾರು ಯಾರಿಗೆ ಪಿಎಂ ಕಿಸಾನ್ ಹಣ ಜಮೆಯಾಗಿದೆ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಹೌದು, ದೇಶದ 9.8 ಕೋಟಿ ರೈತರಿಗೆ 22000 ಕೋಟಿ ರೂಪಾಯಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗಿದೆ.
ಪಿಎಂ ಕಿಸಾನ್ ಯೋಜನೆಯಡಿ ರೈತರು ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ. ವರ್ಶಕ್ಕೆ 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆಯಾಗಲಿದೆ. 18ನೇ ಕಂತಿನ ಹಣ ಅಕ್ಟೋಬರ್ ತಿಂಗಳಲ್ಲಿ ಜಮೆಯಾಗಿತ್ತು. ಈಗ 19ನೇ ಕಂತಿನ ಹಣ ಇಂದು ಜಮೆಯಾಗಿದೆ. .
ಪಿಎಂ ಕಿಸಾನ್ 19ನೇ ಕಂತಿನ ಹಣವನ್ನು ಬಿಹಾರ್ ರಾಜ್ಯದ ಬಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಹಣ ನೇರವಾಗಿ ಅರ್ಹ ರೈತರ ಖಾತೆಗೆ ಜಮೆಯಾಗಿದೆ ಯ ಒಟ್ಟು 22 ಸಾವಿರ ಕೋಟಿ ಹಣವು 9.8 ಕೋಟಿ ರೈತರ ಪ್ರಯೋಜನಕ್ಕೆ ಸಿಕ್ಕಿದೆ. . 18ನೇ ಕಂತಿನ ಹಣವನ್ನು 9.6 ಕೋಟಿ ಕೋಟಿ ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಇದೀಗ ಸಂಖ್ಯೆಯಲ್ಲಿ ಹೆಚ್ಚಾಗಿದೆ
Pm kisan money status ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ ನೋಡಿ
ಹೌದು,ರೈತರು ಪಿಎಂ ಕಿಸಾನ್ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ Enter Registration No ನಲ್ಲಿ ರೈತರು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಸಂದೇಶ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.
ಬಹುತೇಕ ರೈತರಿಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನೆನಪಿರುವುದಿಲ್ಲ. ಯಾರಿಗೆ ನೋಂದಣಿ ಸಂಖ್ಯೆ ನೆನಪಿಲ್ಲವೋ ಆ ರೈತರು ಅಲ್ಲಿ ಕಾಣುವ Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ
ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೇ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇಕೆವೈಸಿ ಮಾಡಿಸಿರುವುದು ಕಡ್ಡಾಯವಾಗಿರುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದರೆ ಮಾತ್ರ ರೈತರಿಗೆ ಮುಂದಿನ ಕಂತು ಜಮೆಯಾಗಲಿದೆ. ಇಲ್ಲದಿದ್ದರೆ ಮುಂದಿನ ಕಂತುಜಮೆಯಾಗುವುದಿಲ್ಲ.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಆಧಾರ್ ನಂಬರ್ ಹಾಕಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಬಹುದು.