ಪಿಎಂ ಕಿಸಾನ್ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

Written by Ramlinganna

Published on:

Pm kisan new beneficiary list  : ಪಿಎಂ ಕಿಸಾನ್ ಫಲಾನುಭವಿಗಳ ಹೊಸ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು. ಹೌದು, ರೈತ ಮಿತ್ರರೇ ಇದೇ ತಿಂಗಳು ಪಿಎಂ ಕಿಸಾನ್ 24ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ಈ  ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿ ನೀಡಲಾದ ತುಂಬಾ ಸರಳವಾದ ವಿಧಾನದಿಂದ ನೀವು ಚೆಕ್ ಮಾಡಬಹುದು.

Pm kisan new beneficiary list ಪಿಎಂ ಕಿಸಾನ್ ಹೊಸ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ?

ಪಿಎಂ ಕಿಸಾನ್ 24ನೇ ಕಂತಿನ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಪಿಎಂ ಕಿಸಾನ್ ಯೋಜನೆಗೆ ಯಾರು ಯಾರು ಅರ್ಹತೆ ಪಡೆದಿದ್ದಾರೆ ಅಂದರೆ ಹೊಸ ಪರಿಷ್ಕೃತ ಪಟ್ಟಿಯಲ್ಲಿ ಯಾರ ಯಾರ ಹೆಸರಿದೆಯೋ ಅವರ ಹೆಸರು ಕಾಣಿಸುತ್ತದೆ. ಅಲ್ಲಿ ಅಲ್ಫಾಬೆಟಿಕ್ ಅಂದರೆ ಇಂಗ್ಲೀಷ್ ಎ ಅಕ್ಷರದಿಂದ ಹೆಸರು ಆರಂಭವಾಗುವ ಹೆಸರುಗಳ ಪಟ್ಟಿ ಇರುತ್ತದೆ. ನಿಮ್ಮ ಹೆಸರು ಯಾವ ಇಂಗ್ಲೀಷ್ ಯಾವ ಅಕ್ಷರಿಂದ ಆರಂಭವಾಗುತ್ತದೆ ಆ ಆಧಾರದ ಮೇಲೆ ನೀವು ಕೆಳಗಡೆ ಒಂದರಿಂದ ಪೇಜ್ ಸಂಖ್ಯೆಗಳು ಇರುತ್ತದೆ. ಅಲ್ಲಿ ಮುಂದಿನ ಪೇಜ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತದೆ. ಇಲ್ಲದಿದ್ದರೆ ನಿಮಗೆ ಜಮೆಯಾಗುವುದಿಲ್ಲ.

ಪಿಎಂ ಕಿಸಾನ್ ಪಟ್ಟಿಯಲ್ಲಿ ಹೆಸರಿದ್ದರೆ ಏನು ಮಾಡಬೇಕು ?

ಪಿಎಂ ಕಿಸಾನ್ ಯೋಜನೆಯ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದ ಮಾತ್ರಕ್ಕೆ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಏಕೆಂದರೆ ಈಗ ಇಕೆವೈಸಿ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ : ಇನ್ನೂ ಮುಂದೆ ಪಹಣಿಯಲ್ಲಿ ರೈತರ ಫೋಟೋ ವಿಳಾಸ ಇಲ್ಲಿದೆ ಮಾಹಿತಿ

ನೀವು ಇನ್ನೂವರೆಗೆ ಇಕೆವೈಸಿ ಮಾಡಿಸಿಲ್ಲವಾದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಒನ್ ಕರ್ನಾಟಕ ಒನ್ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಇಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇಕೆವೈಸಿ ಮಾಡಿಸದಿದ್ದರೆ ಪಟ್ಟಿಯಲ್ಲಿ ಹೆಸರಿದ್ದರೂ ಹಣ ಜಮೆಯಾಗುವುದಿಲ್ಲ. ನಿಮ್ಮ ಪಿಎಂ ಕಿಸಾನ್ ಹಣ ಜಮೆಯಾಗುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು.

ಪಿಎಂ ಕಿಸಾನ್ ಹಣ ಮುಂದಿನ ಕಂತು ಯಾವಾಗ ಜಮೆ ?

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಅಂದರೆ 24ನೇ ಕಂತು ಇದೇ ತಿಂಗಳು ಅಂದರೆ ಅಕ್ಟೋಬರ್ ತಿಂಗಳಲ್ಲೇ ಜಮೆಯಾಗುವ ಸಾಧ್ಯತೆಯಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುವ ಪಿಎಂ ಕಿಸಾನ್ ಹಣ ಕಳೆದ 23ನೇ ಕಂತು ಜೂನ್ ತಿಂಗಳಲ್ಲಿ ಜಮೆಯಾಗಿತ್ತು. ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುವ ಈ ಹಣ ಅಕ್ಟೋಬರ್ ತಿಂಗಳಲ್ಲಿ ಜಮೆ ಮಾಡಲಾಗುವುದು. ಹಾಗಾಗಿ ಇನ್ನೂವರೆಗೆ ಯಾರು ಯಾರು ಇಕೆವೈಸಿ ಮಾಡಿಸಿಲ್ಲವೋ ಕೂಡಲೇ ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಕೊಳ್ಳಲು ಕೋರಲಾಗಿದೆ. ಈ ಕುರಿತು ಕೃಷಿ ಇಲಾಖೆಯೂ ಸಹ ರೈತರಲ್ಲಿ ಮನವಿ ಮಾಡುತ್ತಿದೆ. ಯಾರ ಯಾರ ಇಕೆವೈಸಿ ಆಗಿಲ್ಲವೋ ಅವರ ಪಟ್ಟಿಯನ್ನು ಹೋಬಳಿ ಮಟ್ಟದಲ್ಲಿರುವ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

Leave a Comment