ಈ ರೈತರಿಗೆ ಮಾತ್ರ ಪಿಎಂ ಕಿಸಾನ್ ಹಣ ಜಮೆ

Written by Ramlinganna

Updated on:

PM kisan Scheme eKYC ರೈತರು ಪಿಎಂ ಕಿಸಾನ್ ಇಕೆವೈಯಿಸಿ ಆಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಇಕೆವೈಸಿ ಆಗಿರುವುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

PM kisan Scheme eKYC ಇಕೆವೈಸಿ ಆಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಇನ್ನೂ ಮುಂದೆ ರೈತರಿಗೆ ಪಿಎಂ ಕಿಸಾನ್ ಇಕೆವೈಸಿ ಆದರೆ ಮಾತ್ರ ಹಣ ಜಮೆಯಾಗುತ್ತದೆ. ಆದರೆ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ  OTP Based Ekyc ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು  ತಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ Search  ಮೇಲೆ ಕ್ಲಿಕ್ ಮಾಡಬೇಕು.  ಒಂದು ವೇಳೆ ನೀವು ಇಕೆವೈಸಿ ಮಾಡಿಸಿದ್ದರೆ EKYC is Already Done ಎಂಬ ಮೆಸೆಜ್ ಬರುತ್ತದೆ. ಆಗ ನೀವು ಒಕೆ ಮೇಲೆ ಕ್ಲಿಕ್ ಮಾಡಿದರೆ ಸಾಕು.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಒಂದು ವೇಳೆ ಇಕವೈಸಿ ಆಗಿಲ್ಲವೆಂದರೆ ಆಧಾರ್ ಕಾರ್ಡ್ ನಂಬರ್ ನಮೂದಿಸಿದ ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ಆಗ ನಿಮ್ಮ ಮೊಬೈಲಿಗೆ ಒಂದು ಓಟಿಪಿ ಬರುತ್ತದೆ.  ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಹಾಕಿದ ನಂತರ ನಿಮಗೆ ಕೆಲವು ಮಾಹಿತಿಗಳನ್ನು ಕೇಳಲಾಗುತ್ತದೆ. ಅದನ್ನೆಲ್ಲಾಭರ್ತಿ ಮಾಡಿದ ನಂತರ ಇಕೆವೈಸಿ ಡನ್ ಸಕ್ಸೆಸಪುಲಿ ಎಂಬ ಮೆಸೆಜ್ ಬರುತ್ತದೆ. ಆಗ ನಿಮ್ಮ ಇಕೆವೈಸಿ ಪೂರ್ಣಗೊಳ್ಳುತ್ತದೆ. ಇಕೆವೈಸಿಯಾದರೆ ಮಾತ್ರ 13ನೇ ಕಂತಿನ ಹಣ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ 13 ನೇ ಕಂತು ಹೊಸ ವರ್ಷಕ್ಕೆ ಅಂದರೆ ಜನವರಿ 1 ರಂದು ಜಮೆಯಾಗುತ್ತದೆ ಎನ್ನಲಾಗುತ್ತಿದೆ. ಆದರೆ ಈ ಸಲ ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿದ ಎಲ್ಲಾ ರೈತರಿಗೆ ಜಮೆಯಾಗುವುದಿಲ್ಲ. ಇಕೆವೈಸಿ ಪೂರ್ಣಗೊಳಿಸಿದ ಹಾಗೂ ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಜಮೆಯಾಗುತ್ತದೆ. ಇ ಷ್ಟೇ ಅಲ್ಲಿ,ಆ ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿಯಲ್ಲಿರಬಾರದು. ಹಾಗೂ ಇನಕಮ್ ಟ್ಯಾಕ್ಸ್ ಪಾವತಿಸುವವರಾಗಿರಬಾರದು. ಅಂತಹ ರೈತರಿಗೆ ಮಾತ್ರ ಈ ಸಲ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ?

ರೈತರು ತಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಸ್ಟೇಟಸ್ ಚೆಕ್ ಮಾಡಲು ರೈತರು ಈ ಲಿಂಕ್

https://pmkisan.gov.in/BeneficiaryStatus.aspx

ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ರತರು ಎಂಟರ್ ವ್ಯಾಲ್ಯು ಕೆಳಗಡೆ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್  ಹಾಕಿದ ನಂತರ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ನಂತರ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಇಲ್ಲಿಯವರೆಗೆ ನಿಮಗೆಷ್ಟು ಪಿಎಂ ಕಿಸಾನ್ ಯೋಜನೆಯ ಕಂತು ಜಮೆಯಾಗಿದೆ. ಹಾಗೂ ಯಾವ ಬ್ಯಾಂಕಿಗೆ ಜಮೆಯಾಗಿದೆ ಮತ್ತು ಯಾವಾಗ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಒಂದು ವೇಳೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ತಡೆಹಿಡಿಯಲಾಗಿದ್ದರೆ ಯಾವ ಕಾರಣಕ್ಕಾಗಿ 12ನೇ ಕಂತಿನ ಹಣ ತಡೆಹಿಡಿಯಲಾಗಿದೆ ಎಂಬುದು ಕಾಣುತ್ತದೆ.

Leave a Comment