ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ಬಿಡುಗಡೆಯಾಗಿದೆ. ಈ ತಿಂಗಳ ಅಂತ್ಯದಲ್ಲಿ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಫಲಾನುಭವಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ರಾಜ್ಯದ ಅನುಮೋದನೆಗಾಗಿ ಕಾಯಲಾಗುತ್ತಿದೆ.
ಪಿಎಂ ಕಿಸಾನ್ ಯೋಜನೆಯ ನೀವು ಫಲಾನುಭವಿಗಳಾಗಿದ್ದರೆ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹೆಸರನ್ನು ರಾಜ್ಯದ ಅನುಮೋದನೆಗಾಗಿ ಕಳಿಸಲಾಗಿದೆಯೇ ಎಂಬುದನ್ನು ನೋಡಬಹುದು. ಹೌದು, ಈಗ ನೀವು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಬಹುದು. ನಿಮ್ಮ ಮೊಬೈಲ್ ನಲ್ಲಿ ಈ https://pmkisan.gov.in/BeneficiaryStatus.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆ ಪೇಜ್ ಓಪನ್ ಆಗುತ್ತದೆ.ಅಲ್ಲಿ ನೀವು ನಿಮ್ಮ ಆಧಾರ್ ನಂಬರ್, ಅಥವಾ ಬ್ಯಾಂಕ್ ಅಕೌಂಟ್ ನಂಬರ್ ಅಥವಾ ಮೊಬೈಲ್ ಈ ಮೂರರಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಉದಾಹರಣೆ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಿ Get Data ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಆಧಾರ್ ಕಾರ್ಡ್ ನಂಬರ್ ಸೆಲೆಕ್ಟ್ ಮಾಡಿಕೊಂಡರೆ ಆಧಾರ್ ಕಾರ್ಡ್ ನಂಬರ್ ನಮೂದಿಸಿ Get Data ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಮೊಬೈಲ್ ನಂಬರ್, ಜಿಲ್ಲೆ ಸೇರಿದಂತೆ ಇಲ್ಲಿಯರೆಗೆ ಎಷ್ಟು ಕಂತುಗಳು ಯಾವ ದಿನಾಂಕದಂದು ನಿಮ್ಮ ಖಾತೆಗೆ ಜಮೆಯಾಗಿದೆ ಎಂಬುದು ಕಾಣುತ್ತದೆ. ಕಳೆದ ಕಂತು ಆಗಸ್ಟ್ 9 ರಂದು ಜಮೆಯಾಗಿತ್ತು. 10ನೇ ಕಂತಿನ ಹಣ ಜಮೆಯಾಗಲು waiting for approval by state ಎಂದು ಕಾಣುತ್ತಿದ್ದರೆ ರಾಜ್ಯ ಸರ್ಕಾರದಿಂದ ಅನುಮೋದನೆ ಸಿಕ್ಕನಂತರ ನಿಮ್ಮ ಖಾತೆಗೆ ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆ 2000 ಸಾವಿರ ರೂಪಾಯಿ ಜಮೆಯಾಗಲಿದೆ.
ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಓರಿಜಿನಲ್ ಪಹಣಿ (Pahani) ಡೋನ್ಲೋಡ್ ಮಾಡಿಕೊಳ್ಳಬೇಕೇ…. ಇಲ್ಲಿದೆ ಸಂಪೂರ್ಣ ಮಾಹಿತಿ
ಒಂದು ವೇಳೆ 10ನೇ ಕಂತಿನ ಹಣ ಜಮೆಯಾಗಲು waiting for approval by state ಎಂದು ಇನ್ನೂ ಬರದಿದ್ದರೆ ಇನ್ನೆರಡು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ನಿಮ್ಮ ಹೆಸರು ಅಪ್ರೋವಲ್ ಗಾಗಿ ಕೇಂದ್ರ ಸರ್ಕಾರವು ಕಳಿಸಬಹುದು.
ಪಿಎಂ ಕಿಸಾನ್ ಯೋಜನೆಯ ಹಣವನ್ನು ಪ್ರತಿ ವರ್ಷಕ್ಕೆ 6 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗುವದು ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆದರೆ ಇಲ್ಲಿಯವರೆಗೆ ಕೇಂದ್ರ ಸರ್ಕಾರವು ಯಾವುದೇ ಹೇಳಿಕೆ ನೀಡಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯ ಹಣ ದುಪ್ಪಟ್ಟು ಮಾಡಿದರೆ ರೈತರಿಗೆ ಸಂತಸಕರ ಸಂಗತಿಯಾಗಲಿದೆ.
ಏನಿದು ಪಿಎಂ ಕಿಸಾನ್ ಯೋಜನೆ?
2 ಹೆಕ್ಟೇರ್ ಗಿಂತ ಕಡಿಮೆ ಜಮೀನು ಇರುವ ಸಣ್ಣ ಮತ್ತು ಅತೀ ಸಣ್ಮ ರೈತರ ಆದಾಯವನ್ನು ವೃದ್ಧಿಸಲು ಕೇಂದ್ರ ಸರ್ಕಾರವು 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ರೈತರ ಖಾತೆಗೆ 6 ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ಜಮೆ ಮಾಡಲಾಗುವುದು. ರೈತರು ಕೃಷಿ ಪರಿಕರಗಳ ಖರೀದಿಗೆ ಅನುಕೂಲವಾಗಲೆಂದು ಕೇಂದ್ರಸರ್ಕಾರವು ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿ ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಿದೆ.
ಪಿಎಂ ಕಿಸಾನ್ ಯೋಜನೆಯ ಮೊದಲ ಕಂತನ್ನು ಪ್ರತಿ ವರ್ಷ ಏಪ್ರೀಲ್ ತಿಂಗಳಲ್ಲಿ ಮೊದಲ ಕಂತು, ಆಗಸ್ಟ್ ತಿಂಗಳಲ್ಲಿ 2 ನೇ ಕಂತು ಹಾಗೂ ಡಿಸೆಂಬರ್ ತಿಂಗಳಲ್ಲಿ ಮೂರನೇ ಕಂತನ್ನು ಜಮೆ ಮಾಡುತ್ತದೆ. ಕೆಲವು ಸಲ ಕೇಂದ್ರ ಸರ್ಕಾರವು ರೈತರಿಗೆ ಅನುಕೂಲವಾಗಲೆಂದು ನಿಗದಿಯಾದ ತಿಂಗಳಿಗಿಂತ ಮೊದಲು ಸಹ ಜಮೆ ಮಾಡಿದೆ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ನಂಬರ್ 1800 1155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ 155261 ಗೆ ಕರೆ ಮಾಡಬಹುದು.