ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

Written by By: janajagran

Updated on:

state govt fund released ಹೊಸ ವರ್ಷಕ್ಕೆ ರಾಜ್ಯದ ರೈತರಿಗೆ ಡಬಲ್ ಖುಷಿ, ಹೌದು, ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ರೈತರ ಖಾತೆಗೆ ಜಮೆ ಮಾಡಿದರೆ ರಾಜ್ಯ ಸರ್ಕಾರವು ರಾಜ್ಯದ 2ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ ಮಾಡಿದೆ. ಅತೀ ಶೀಘ್ರದಲ್ಲಿ ರಾಜ್ಯದ ರೈತರಿಗೆ ಈ ಹಣ ಜಮೆಯಾಗಲಿದೆ.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಧೀನದ ಪಿಎಂ ಕಿಸಾನ್ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಕಂತಿನ ಹಣ ಅಂದರೆ 1,007.18 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಈ ಕುರಿತು ಪಿಎಂ ಕಿಸಾನ್ ಯೋಜನೆಯಡಿ 10ನೇ ಕಂತಿನ ಅನುದಾನ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರೈತರ ಖಾತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಿದರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೂ ಪಿಎಂ ಕಿಸಾನ್ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 54.52 ಲಕ್ಷ ರೈತರು ಕನಿಷ್ಟ ಒಂದು ಕಂತಿನ ಹಣ ಪಡೆದಿದ್ದಾರೆ. ಈಗ ಎರಡನೇ ಕಂತು ಬಿಡುಗಡೆ ಮಾಡಲಾಗಿದೆ. ಆಧಾರ್ ಆಧಾರಿತ ನೇರ ನಗದು ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಆಪೇಕ್ಷಿಸಿದೆ ಎಂದು ತಿಳಿಸಿದ್ದಾರೆ.

state govt fund released ಏನಿದು ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆ?

ಕೇಂದ್ರ ಸರ್ಕಾರವು ದೇಶದ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಪ್ರತಿವರ್ಷ 6 ಸಾವಿರ ರೂಪಾಯಿ ಮೂರು ಕಂತುಗಳಲ್ಲಿ ನೀಡುವಂತೆ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ಎರಡು ಕಂತುಗಳಲ್ಲಿ ಬಿಡುಗಡೆ ಮಾಡಲು ಘೋಷಿಸಿದೆ. ಈಗಾಗಲೇ ಒಂದು ಕಂತಿನ ಹಣ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಜಮೆ ಮಾಡಿದೆ. ಈಗ ಎರಡನೇ ಕಂತಿನ ಹಣ ಬಿಡುಗಡೆ ಮಾಡಿದೆ. ಅತೀ ಶೀಘ್ರದಲ್ಲಿ ಎಲ್ಲಾ ರೈತರಿಗೆ ಜಮೆಯಾಗಲಿದೆ.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಸ್ಡೇಟಸ್ ನೋಡುವಂತೆ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ಜಮೆಯಾದ ಸ್ಟೇಟಸ್ ಸಹ ನೋಡಬಹುದು. ಸ್ಟೇಟಸ್ ನೋಡಲು ಈ

https://fruits.karnataka.gov.in/OnlineUserLogin.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಬೇಕು.  ಒಂದು ವೇಳೆ ನೀವು ನಿಮ್ಮ ಪಾಸ್ವರ್ಡ್  ರಿಸೆಟ್ ಪಾಸ್ವರ್ಡ್ ಮೇಲೆ ಕ್ಲಿಕ್ ಮಾಡಬೇಕು. ಆಘ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದರ ಆಧಾರದ ಮೇಲೆ ನೀವು ಫ್ರೂಟ್ಸ್ ತಂತ್ರಾಂಶದ ಪೇಜ್ ಓಪನ್ ಆಗುತ್ತದೆ. ಅಲ್ಲಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪೇಮೆಂಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಬ್ಯಾಂಕಿನ ಯಾವ ಖಾತೆಗೆ ರಾಜ್ಯ ಸರ್ಕಾರದ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣುತ್ತದೆ. ಅಲ್ಲಿ ಬೆನಿಫಿಷಯರಿ ಐಡಿ, ನಿಮ್ಮ ಹೆಸರು, ಡಿಪಾರ್ಟ್ಮೆಂಟ್, ಪಿಎಂ ಸ್ಕೀಮ್, ವರ್ಷ, ದಿನಾಂಕ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣುತ್ತದೆ.

ಇದನ್ನೂ ಓದಿ  ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಒಂದುವೇಳೆ ನೀವು ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೆಸರು ನೋಂದಾಯಿಸದಿದ್ದರೆ ಈ https://fruits.karnataka.gov.in/OnlineUserLogin.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಸಿಟಿಜನ್ ರೆಜಿಸ್ಟ್ರೇಷನ್  ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಇನ್ನೊಂದು ಪೇಜ್ ಓಪನ್ ಆಗುತ್ತದೆ. ನಿಮ್ಮ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಿ ನಿಮ್ಮ ಆಧಾರ್ ಕಾರ್ಡ್ ಬರ್ ನಮೂದಿಸಿ I Agree ಸೆಲೆಕ್ಟ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ಮಾಹಿತಿ ಭರ್ತಿ ಮಾಡಿ ಫ್ರೂಟ್ಸ್ ಐಡಿ ಕ್ರಿಯೇಟ್ ಮಾಡಿಕೊಂಡು ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ ಪೇಮೆಂಟ್ ಸ್ಟೇಟಸ್ ನೋಡಬಹುದು.

Leave a Comment